Holiday: ರಾಜ್ಯದ ಈ ಜಿಲ್ಲೆಯ ಕಾಲೇಜುಗಳಿಗೆ ಮೇ 27, 28ರಂದು ರಜೆ ಘೋಷಣೆ
Holiday: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದು ಕೆರೆ-ಕಟ್ಟೆ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಈಗಾಗಲೇ ಶಾಲೆಗಳಿಗೆ ಬೇಸಿಗೆ ರಜೆ ಮುಕ್ತಾಯವಾಗುತ್ತಾ ಬರುತ್ತಿದೆ. ಈ ವೇಳೆಯೇ ಭಾರೀ ಮಳೆ ಮುಂದುವರೆದಿದೆ. ಇದೀಗ ಸದ್ಯ ಶಾಲೆಗಳಿಗೆ ರಜೆ ಇರುವ ಹಿನ್ನೆಲೆ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಭಾವಿಸಲಾಗಿದೆ. ಇನ್ನೂ ಕೆಲವೆಡೆ ಕಾಲೇಜುಗಳು ನಡೆಯುತ್ತಿದ್ದು, ಹವಾಮಾನ ಪರಿಸ್ಥಿತಿ ನೋಡಿಕೊಂಡು ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗುತ್ತಿದೆ.

ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ರಣಮಳೆ ಮುಂದುವರೆದ ಪರಿಣಾಮ ಇಲ್ಲಿನ ಕಾವೇರಿ ನದಿಯ ನೀರಿನ ಮಟ್ಟ ಏರಿಕೆ ಆಗುತ್ತಿದೆ. ಮತ್ತೊಂದೆಡೆ ಇದರಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಆದ್ದರಿಂದ ಇದನ್ನು ಗಮನದಲ್ಲಿಟ್ಟುಕೊಂಡು ಮೇ 26, 27ರಂದು ಎರಡು ದಿನಗಳ ಕಾಲ ಮಹಾವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿದ ಬಳಿಕ ಮಹಾವಿದ್ಯಾಲಯಗಳಿಗೆ ಎರಡು ದಿನ ರಜೆ ಘೋಷಿಸಿ ಕೊಡಗು ವಿಶ್ವವಿದ್ಯಾಲಯ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಈ ರಜೆಯ ಆದೇಶವನ್ನು ಹೊರಡಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಭಾರೀ ಮಳೆ ಮುಂದುವರೆದ ಕಾರಣ ಇಲ್ಲಿನ ಜನರ ಜೀವನ ಹೇಳತೀರದಂತಾಗಿದೆ. ಮತ್ತೊಂದೆಡೆ ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ರಣಮಳೆ ಸುರಿದ ಪರಿಣಾಮ ತ್ರಿವೇಣಿ ಸಂಗಮದಲ್ಲಿ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಇಲ್ಲಿನ ಉದ್ಯಾನ ಸಂಪೂರ್ಣ ಮುಳುಗಡೆ ಆಗಿದೆ. ಅಲ್ಲದೇ ಕ್ಷಣಕ್ಕೂ-ಕ್ಷಣಕ್ಕೂ ಕಾವೇರಿ ನದಿಯ ನೀರಿನ ಮಟ್ಟ ಏರಿಕೆ ಆಗುತ್ತಲೇ ಇದ್ದು, ನಾಪೋಕ್ಲು, ಅಯ್ಯಂಗೇರಿ, ಸಣ್ಣಪುಲಿಕೋಟ್ಟು ರಸ್ತೆ ಸಂಪರ್ಕ ಕಡತಗೊಳ್ಳುವ ಭೀತಿ ಎದುರಾಗಿದೆ.
ಈಗಾಗಲೇ ಜಿಲ್ಲೆಯ ಹಲವೆಡೆ ಮಳೆರಾಯನ ಆರ್ಭಟಕ್ಕೆ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುಳಿದ ಪರಿಣಾಮ ಜನರ ಕತ್ತಲೆಯಲ್ಲಿ ಜೀವನ ಕಳೆಯುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂದು ಸಹ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಈ ಭಾಗದ ಜನರು ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಾಗಿದೆ.
ಅಂಗನವಾಡಿಗಳಿಗೆ ರಜೆ ಘೋಷಣೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ( ಮೇ 26) ಬೆಳ್ಳಂಬೆಳಗ್ಗೆ ಮಳೆರಾಯ ಆರ್ಭಟ ಶುರು ಮಾಡಿದ್ದಾರೆ. ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಹಲವೆಡೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
* ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆ, ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿದೆ. ಈ ಆದೇಶವನ್ನು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಭಾನುವಾರ (ಮೇ 25) ಜಾರಿಗೊಳಿಸಿದ್ದಾರೆ. ಮಕ್ಕಳ ಸುರಕ್ಷತೆಯನ್ನ ಖಾತ್ರಿಪಡಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಂದುವರೆದ ಪರಿಣಾಮ ಜಿಲ್ಲೆಯ ಎಲ್ಲಾ ಅಲ್ಲದೆ, ಮೇ 27 ಹಾಗೂ 28ರಂದು ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಮಕ್ಕಳ ಹಿತದೃಷ್ಟಿಯಿಂದ ಈ ನಿರ್ಧಾರವವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿತ್ತು.
* ಉಡುಪಿ ಜಿಲ್ಲೆಯಲ್ಲೂ ಸಹ ಭಾರೀ ಮಳೆ ಮುಂದುವರೆದ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.












Click it and Unblock the Notifications