ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರಗಳು : ಕೊಡಗು ಸಂತ್ರಸ್ತರಿಗೆ ಕಟ್ಟುತ್ತಿರುವ ಮನೆಗಳು ಹೇಗಿವೆ?

|
Google Oneindia Kannada News

ಮಡಿಕೇರಿ, ಫೆಬ್ರವರಿ 18 : ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಾಣ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 840 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಪ್ರಕೃತಿ ವಿಕೋಪದಿಂದ ನಿರಾಶ್ರಿತರಾದ ಸಂತ್ರಸ್ತರಿಗೆ ಮಡಿಕೇರಿ ತಾಲೂಕಿನ ಕರ್ಣಾಂಗೇರಿ, ಮದೆ ಹಾಗೂ ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ಮನೆ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯುತ್ತಿದೆ.

ಕೊಡಗು : ರೋಟರಿ ಸಂಸ್ಥೆಯಿಂದ ಮನೆ ನಿರ್ಮಾಣ ಕಾರ್ಯ ಆರಂಭಕೊಡಗು : ರೋಟರಿ ಸಂಸ್ಥೆಯಿಂದ ಮನೆ ನಿರ್ಮಾಣ ಕಾರ್ಯ ಆರಂಭ

2017ರ ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊಡಗಿನಲ್ಲಿ ಭಾರಿ ಮಳೆಯಾಗಿತ್ತು. ಗುಡ್ಡಗಳು ಕುಸಿದಿದ್ದವು ಇದರಿಂದಾಗಿ 840 ಕುಟುಂಬಗಳು ಸೂರನ್ನು ಕಳೆದುಕೊಂಡಿವೆ. ಈ ಬಾರಿಯ ಮಳೆಗಾಲ ಆರಂಭವಾಗುವ ಮೊದಲು ಸಂತ್ರಸ್ತರಿಗೆ ಮನೆಗಳನ್ನು ಕಟ್ಟಿಕೊಡಲು ಜಿಲ್ಲಾಡಳಿತ ಸಂಕಲ್ಪ ಮಾಡಿದ್ದು, ಕಾಮಗಾರಿ ನಡೆದಿದೆ.

ಚಿತ್ರಗಳು : ಕೊಡಗು ಜಿಲ್ಲೆಯಲ್ಲಿ ಮನೆಗಳ ನಿರ್ಮಾಣ ಕಾರ್ಯಚಿತ್ರಗಳು : ಕೊಡಗು ಜಿಲ್ಲೆಯಲ್ಲಿ ಮನೆಗಳ ನಿರ್ಮಾಣ ಕಾರ್ಯ

ರೋಟರಿ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ಇಗ್ಗೊಡ್ಲು ಗ್ರಾಮದಲ್ಲಿ 1 ಬೆಡ್‌ ರೂಂನ 25 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದು ಮನೆಗೆ ಸುಮಾರು 5 ಲಕ್ಷ ರೂ. ವೆಚ್ಚವಾಗುತ್ತಿದೆ.....

ಕೊಡಗು ಅಭಿವೃದ್ಧಿ ಪ್ರಾಧಿಕಾರ ರಚನೆ, ಕುಮಾರಸ್ವಾಮಿ ಅಧ್ಯಕ್ಷರುಕೊಡಗು ಅಭಿವೃದ್ಧಿ ಪ್ರಾಧಿಕಾರ ರಚನೆ, ಕುಮಾರಸ್ವಾಮಿ ಅಧ್ಯಕ್ಷರು

ಎಲ್ಲಾ ಕುಟುಂಬಗಳಿಗೂ ಮನೆ

ಎಲ್ಲಾ ಕುಟುಂಬಗಳಿಗೂ ಮನೆ

ಕೊಡಗಿನಲ್ಲಿ ನಡೆದ ಪ್ರಕೃತಿ ವಿಕೋಪದಲ್ಲಿ 840 ಕುಟುಂಬಗಳು ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾಗಿವೆ. ಎಲ್ಲಾ ಕುಟುಂಬಗಳಿಗೂ ಮನೆಯನ್ನು ಕಟ್ಟಿಕೊಡಲಾಗುತ್ತಿದೆ. ಮನೆಗಳ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿವೆ.

ವಿದೇಶಿ ತಂತ್ರಜ್ಞಾನಗಳ ಬಳಕೆ

ವಿದೇಶಿ ತಂತ್ರಜ್ಞಾನಗಳ ಬಳಕೆ

ಮಡಿಕೇರಿ ತಾಲೂಕಿನ ಸಂಪಾಜೆ ಹೋಬಳಿಯ ಮದೆ ಗ್ರಾಮದಲ್ಲಿ ವಿದೇಶಿ ತಂತ್ರಜ್ಞಾನ ಬಳಸಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಆರ್‌ಜಿಎಚ್‌ಸಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಅಂಬುಕುಮಾರ್ ಮನೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದಾರೆ.

ತುರ್ತಾಗಿ 770 ಮನೆ ನಿರ್ಮಾಣ

ತುರ್ತಾಗಿ 770 ಮನೆ ನಿರ್ಮಾಣ

ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಮನೆಗಳ ನಿರ್ಮಾಣದ ಕುರಿತು ಮಾಹಿತಿ ನೀಡಿದ್ದಾರೆ. 840 ಮನೆಗಳ ಪೈಕಿ 770 ಮನೆಗಳನ್ನು ತುರ್ತಾಗಿ ನಿರ್ಮಾಣ ಮಾಡಲಾಗುತ್ತಿದೆ. ಕರ್ಣಂಗೇರಿಯಲ್ಲಿ 40, ಬಿಳಿಗೇರಿಯಲ್ಲಿ 30, ಗಾಳಿಬೀಡುವಿನಲ್ಲಿ 125, ಮದೆ ಗ್ರಾಮದಲ್ಲಿ 175 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಎಷ್ಟು ಜನರಿಗೆ ಪರಿಹಾರ

ಎಷ್ಟು ಜನರಿಗೆ ಪರಿಹಾರ

ಕೊಡಗು ಜಿಲ್ಲೆಯಲ್ಲಿನ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾಗಿದ್ದೇವೆ ಎಂದು 4064 ಅರ್ಜಿಗಳು ಬಂದಿದ್ದವು. ಇವುಗಳಲ್ಲಿ 4024 ಜನರಿಗೆ ಪರಿಹಾರವನ್ನು ನೀಡಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಆರ್.ವಿ.ದೇಶಪಾಂಡೆ ಉತ್ತರ ನೀಡಿದ್ದಾರೆ.

English summary
House construction under progress in flood hit Kodagu district. 840 house will be constructed for victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X