ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ ಅಂತ್ಯದೊಳಗೆ ಕೊಡಗು ಸಂತ್ರಸ್ತರಿಗೆ ಮನೆ ಹಸ್ತಾಂತರ

|
Google Oneindia Kannada News

ಮಡಿಕೇರಿ, ಜೂನ್ 30 : 'ಪ್ರಕೃತಿ ವಿಕೋಪದಿಂದ ನಿರಾಶ್ರಿತರಾದ ಕುಟುಂಬದವರಿಗೆ ಜಂಬೂರು, ಕರ್ಣಂಗೇರಿ, ಮದೆ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದ್ದು, ಈಗಾಗಲೇ ಪೂರ್ಣಗೊಂಡಿರುವ ಮನೆಗಳನ್ನು ಜುಲೈ ಅಂತ್ಯದೊಳಗೆ ಹಸ್ತಾಂತರಿಸಲಾಗುವುದು' ಎಂದು ವಸತಿ ಸಚಿವ ಎಂ.ಟಿ.ಬಿ. ನಾಗರಾಜು ಹೇಳಿದರು.

ಶನಿವಾರ ವಸತಿ ಸಚಿವರು ಜಂಬೂರು, ಕರ್ಣಂಗೇರಿ, ಮದೆ ಗ್ರಾಮಗಳಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ವೀಕ್ಷಣೆ ಮಾಡಿದರು. 'ರಾಜೀವ್ ಗಾಂಧಿ ವಸತಿ ನಿಗಮದಿಂದ ಪ್ರಥಮ ಹಂತದಲ್ಲಿ 400 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ಪೂರ್ಣಗೊಂಡಿರುವ ಮನೆಗಳನ್ನು ಜುಲೈ ಅಂತ್ಯದೊಳಗೆ ಹಸ್ತಾಂತರಿಸಲಾಗುವುದು' ಎಂದರು.

ಕೊಡಗು ನಿರಾಶ್ರಿತರಿಗೆ ಮನೆ ಸಿಗುವುದೇ?ಕೊಡಗು ನಿರಾಶ್ರಿತರಿಗೆ ಮನೆ ಸಿಗುವುದೇ?

'ಸರ್ಕಾರದ ವತಿಯಿಂದ ಉತ್ತಮ ಮನೆಗಳನ್ನು ನಿರ್ಮಿಸಲಾಗಿದ್ದು, ಗುಣಮಟ್ಟದಿಂದ ಕೂಡಿದೆ. ದೇಶದಲ್ಲಿಯೇ 9.85 ಲಕ್ಷ ರೂ. ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸುತ್ತಿರುವುದು ಪ್ರಥಮ. ಕೋಣೆ, ಅಡುಗೆ ಕೋಣೆ, ಹಾಲ್ ಸೇರಿದಂತೆ ಸುಸಜ್ಜಿತ ಮನೆ ನಿರ್ಮಿಸಲಾಗುತ್ತಿದೆ' ಎಂದು ಹೇಳಿದರು.

ಬರಲಿರುವ ಮುಂಗಾರು ಕೊಡಗಿಗೆ ಒಳಿತು ಮಾಡುವಂತಿರಲಿ!ಬರಲಿರುವ ಮುಂಗಾರು ಕೊಡಗಿಗೆ ಒಳಿತು ಮಾಡುವಂತಿರಲಿ!

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ.ಅನ್ಬುಕುಮಾರ್ ಮುಂತಾದವರು ಸಚಿವರ ಜೊತೆಗಿದ್ದರು.

ಮಳೆಗಾಲ ಆರಂಭ : ಕೊಡಗಿನಲ್ಲಿ ತೆಗೆದುಕೊಂಡ ಕ್ರಮಗಳುಮಳೆಗಾಲ ಆರಂಭ : ಕೊಡಗಿನಲ್ಲಿ ತೆಗೆದುಕೊಂಡ ಕ್ರಮಗಳು

ಪರಿಹಾರ ನೀಡಲು ಆದೇಶ

ಪರಿಹಾರ ನೀಡಲು ಆದೇಶ

'ಕೊಡಗು ಜಿಲ್ಲೆಯಲ್ಲಿ 94ಸಿ ಮತ್ತು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಸಕ್ರಮಕ್ಕೆ ಅರ್ಹತೆ ಪಡೆದಿದ್ದ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿದ್ದರೆ ಅಂತಹ ಮನೆಗಳಿಗೂ ಸಹ ನಿಯಮಾನುಸಾರ ಪರಿಹಾರ ನೀಡಲು ಆದೇಶಿಸಲಾಗಿದೆ' ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಸಂತ್ರಸ್ತರಿಗೆ ಅನುಕೂಲ

ಸಂತ್ರಸ್ತರಿಗೆ ಅನುಕೂಲ

'ಜಿಲ್ಲೆಯ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಹಲವು ಸಂತ್ರಸ್ತರು ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಇವರು ಅರ್ಹತೆ ಪಡೆದಿದ್ದಾಗ್ಯೂ ಪ್ರವಾಹದಲ್ಲಿ ಮನೆ ಕೊಚ್ಚಿ ಹೋದ ಪ್ರಯುಕ್ತ ಸೂಕ್ತ ಪರಿಹಾರ ದೊರಕದೆ ತೊಂದರೆಗೀಡಾಗಿದ್ದರು. ಈ ಆದೇಶದಿಂದಾಗಿ ಇಂತಹ ಸಂತ್ರಸ್ತರಿಗೆ ಅನುಕೂಲವಾಗಲಿದೆ' ಎಂದು ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

840 ಕುಟುಂಬದವರು ಸಂತ್ರಸ್ತರು

840 ಕುಟುಂಬದವರು ಸಂತ್ರಸ್ತರು

2018ರ ಪ್ರಕೃತಿ ವಿಕೋಪದಲ್ಲಿ 840 ಕುಟುಂಬಗಳು ಮನೆ ಕಳೆದುಕೊಂಡಿದ್ದವು. 840 ಕುಟುಂಬಗಳ ಪೈಕಿ 770 ಕುಟುಂಬಗಳಿಗೆ ತುರ್ತಾಗಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೊಡಗು ಜಿಲ್ಲಾಡಳಿತ ಮೊದಲ ಹಂತದಲ್ಲಿ 35 ಸಂತ್ರಸ್ತರಿಗೆ ಮನೆಗಳನ್ನು ಹಂಚಿಕೆ ಮಾಡಿದ್ದು, ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಲ್ಲೆಲ್ಲಿ ಮನೆಗಳ ನಿರ್ಮಾಣ

ಎಲ್ಲೆಲ್ಲಿ ಮನೆಗಳ ನಿರ್ಮಾಣ

ಮಳೆ, ಭೂ ಕುಸಿತದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದವರಿಗೆ ಪುನರ್ವಸತಿ ಕಲ್ಪಿಸಲು ಕರ್ಣಂಗೇರಿ, ಬಿಳಿಗೇರಿ, ಗಾಳಿಬೀಡು, ಮದೆ ಹಾಗೂ ಜಂಬೂರು ಗ್ರಾಮದಲ್ಲಿ ಒಟ್ಟು 78.46 ಎಕರೆ ಜಾಗದಲ್ಲಿ 770 ನಿವೇಶನಗಳನ್ನು ಗುರುತಿಸಲಾಗಿದ್ದು, ಮನೆ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ.

English summary
Karnataka Housing minister M.T.B.Nagaraj said that, house construction under progress in Madiketi by July end house will handover to victims. 770 site identified for construction of house for the victims who lost house in Kodadu floods 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X