ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈದುನನ ಜೊತೆ ಅಕ್ರಮ ಸಂಬಂಧಕ್ಕೆ ಬಲಿಯಾಗಿದ್ದು ಯಾರು?

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಡಿಸೆಂಬರ್ 18: ವ್ಯಕ್ತಿಯೊಬ್ಬರು ಮನೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ತಮ್ಮ ಮತ್ತು ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೆಟ್ಟಳ್ಳಿ ಅಭ್ಯತ್ ಮಂಗಲ ನಿವಾಸಿ ರಾಜು (46) ಎಂಬುವರೇ ಮೃತಪಟ್ಟ ವ್ಯಕ್ತಿ.

ಕೂಲಿ ಕಾರ್ಮಿಕರಾಗಿರುವ ರಾಜು ಮತ್ತು ಲೀಲಾ ದಂಪತಿಗೆ ಮೂವರು ಮಕ್ಕಳಿದ್ದಾರೆ. ಡಿ.17 ರಂದು ಸಂಜೆ 6.30ರ ಸುಮಾರಿಗೆ ಸ್ಥಳೀಯ ನಿವಾಸಿ ಮಂಜು ಎಂಬುವವರು ರಾಜು ಅವರ ಮನೆಗೆ ತೆರಳಿದಾಗ, ರಾಜು ಕುತ್ತಿಗೆಗೆ ಹಗ್ಗದಿಂದ ಬಿಗಿದುಕೊಂಡ ಸ್ಥಿತಿಯಲ್ಲಿ ಚಾಪೆಯಲ್ಲಿ ಮಲಗಿರುವುದು ಕಂಡುಬಂದಿದೆ. ಇದರಿಂದ ಸಂಶಯಗೊಂಡ ಮಂಜು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ತಂದೆ-ಮಗನ ಜಗಳದಲ್ಲಿ ಪ್ರಾಣಬಿಟ್ಟಿದ್ದು 5 ವರ್ಷದ ಕಂದಮ್ಮ!ತಂದೆ-ಮಗನ ಜಗಳದಲ್ಲಿ ಪ್ರಾಣಬಿಟ್ಟಿದ್ದು 5 ವರ್ಷದ ಕಂದಮ್ಮ!

ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಪತ್ನಿ ಲೀಲಾ ಹಾಗೂ ತಮ್ಮ ಪ್ರಶಾಂತ್ ಅವರನ್ನು ಘಟನೆ ಬಗ್ಗೆ ವಿಚಾರಿಸಿದಾಗ ಸರಿಯಾದ ಮಾಹಿತಿ ನೀಡಲಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಚೆಟ್ಟಳ್ಳಿ ಪೊಲೀಸರು ಹಾಗೂ ಮಡಿಕೇರಿ ಗ್ರಾಮಾಂತರ ಪೊಲೀಸರು ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದರು.

Husband Killed For Illicit Relationship Of His Wife And Brother In Madikeri

ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ, ಕಿರುಕುಳದ ಆರೋಪ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ, ಕಿರುಕುಳದ ಆರೋಪ

ಮೃತರ ಸಂಬಂಧಿಗಳು ಪತ್ನಿ ಲೀಲಾ ಹಾಗೂ ತಮ್ಮ ಪ್ರಶಾಂತ್ ವಿರುದ್ಧ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಇವರಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮೃತ ರಾಜು ಅವರ ಪತ್ನಿ ಲೀಲಾ ಹಾಗೂ ತಮ್ಮ ಪ್ರಶಾಂತ್ ನಡುವೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ದಂಪತಿ ನಡುವೆ ನಿರಂತರ ಕಲಹ ನಡೆಯುತ್ತಿತ್ತು ಎನ್ನುವ ಆರೋಪಗಳು ಕೇಳಿ ಬಂದಿವೆ. ಅನಾಥವಾದ ಮೂವರು ಮಕ್ಕಳು ಬಡ ಕೂಲಿ ಕಾರ್ಮಿಕರಾದ ಅಜ್ಜ ಅಜ್ಜಿಯ ಮನೆಯಲ್ಲಿ ತಮ್ಮ ಮುಂದಿನ ಭವಿಷ್ಯ ಕಳೆಯಬೇಕಾಗಿದೆ. ಪ್ರಕರಣದ ಕುರಿತು ದೂರು ದಾಖಲಿಸಿಕೊಂಡಿರುವ ಮಡಿಕೇರಿ ಗ್ರಾಮಾಂತರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

English summary
A man was found dead in his home and the police had arrested the deceased's wife and his brother in connection with the case in Madikeri Rural Police Station
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X