ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

3 ದಿನ ಕೊಡಗಿನಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

|
Google Oneindia Kannada News

ಮಡಿಕೇರಿ, ಜೂನ್ 25 : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರಿನ ಪರಿಣಾಮ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Recommended Video

Bengaluru Urban Mobility Post Covid 2 | Oneindia Kannada

ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಮುಂಗಾರು ಚುರುಕಾಗಲಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ, ಅಲ್ಲಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ಕೊಟ್ಟಿದೆ. ಜೂನ್ 26ರ ಶುಕ್ರವಾರ ಜಿಲ್ಲೆಯಲ್ಲಿ Yellow ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಮುಂಗಾರು ಹೇಗಿದೆ?: ಹೆಚ್ಚು ಮಳೆಯಾದ ಪ್ರದೇಶಗಳು ಕರ್ನಾಟಕದಲ್ಲಿ ಮುಂಗಾರು ಹೇಗಿದೆ?: ಹೆಚ್ಚು ಮಳೆಯಾದ ಪ್ರದೇಶಗಳು

ಜೂನ್ 26ರಂದು 64.5 ಮಿ. ಮೀ.ನಿಂದ 115.5 ಮಿ. ಮೀ. ವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೊಡಗು ಜಿಲ್ಲಾಡಳಿತ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಜನರಿಗೆ ಮಾಹಿತಿಯನ್ನು ನೀಡಿದೆ.

ನೈರುತ್ಯ ಮುಂಗಾರು: ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆನೈರುತ್ಯ ಮುಂಗಾರು: ಕೊಡಗು, ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ

IMD Issues Yellow Alert In Kodagu On June 26

ಜೂನ್ 27 ಮತ್ತು 29ರಂದು 115.6 ಮಿ. ಮೀ.ನಿಂದ 204.4 ಮಿ. ಮೀ. ಮಳೆ ಬೀಳುವ ಸಾಧ್ಯತೆ ಇದ್ದು Orange ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನಲೆಯಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಜನರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.

 ಕರಾವಳಿಯಲ್ಲಿ ಮುಂಗಾರು ಚುರುಕು; ಉಳ್ಳಾಲ, ಸೋಮೇಶ್ವರದಲ್ಲಿ ಅಲೆಗಳ ಅಬ್ಬರ ಕರಾವಳಿಯಲ್ಲಿ ಮುಂಗಾರು ಚುರುಕು; ಉಳ್ಳಾಲ, ಸೋಮೇಶ್ವರದಲ್ಲಿ ಅಲೆಗಳ ಅಬ್ಬರ

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ತುರ್ತು ಸೇವೆ ಸಹಾಯವಾಣಿ ಸಂಖ್ಯೆ 08272-221077, ವಾಟ್ಸಪ್ ಸಂಖ್ಯೆ 8550001077

English summary
The India Meteorological Department (IMD) issued Yellow alert in Kodagu district on June 26, 2020. 64.50 to 115.5 millimeter rain expected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X