ತಲಕಾವೇರಿ ಸ್ವಚ್ಛತಾ ಕಾರ್ಯಕ್ಕೆ ಇರಾನಿ ಪ್ರಜೆ ಸಾಥ್

ಭಾಗಮಂಡಲ, ಅಕ್ಟೋಬರ್ 15: ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಕ್ಷೇತ್ರದಲ್ಲಿ ಅ.18ರಂದು ಸಂಭವಿಸುವ ಪವಿತ್ರ ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಮಂಗಳವಾರ ಗ್ರೀನ್ ಸಿಟಿ ಫೋರಂ ನೇತೃತ್ವದಲ್ಲಿ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಇದಕ್ಕೆ ಇರಾನಿ ಪ್ರಜೆ ನಾದೀರ್ ಖಾನ್ ಸಾಥ್ ನೀಡಿದ್ದು ವಿಶೇಷವಾಗಿತ್ತು.

ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ವಿದ್ಯಾರ್ಥಿಗಳು, ಕ್ಲೀನ್ ಕೂರ್ಗ್ ಇನಿಶಿಯೇಟಿವ್ (ಸಿಸಿಐ) ಸಂಘಟನೆ ಪ್ರತಿನಿಧಿಗಳ ಸಹಕಾರದಲ್ಲಿ ಸ್ವಚ್ಛತಾ ಕಾರ್ಯವನ್ನು ತಲಕಾವೇರಿ ಕ್ಷೇತ್ರದ ಪ್ರವೇಶದ್ವಾರದಿಂದ ಆರಂಭಿಸಲಾಯಿತು. ಈ ವೇಳೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಬಾಟಲಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕಿ, ಪ್ರವಾಸಿಗರಿಗೆ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಲಾಯಿತು. ಕಳೆದ ನಾಲ್ಕು ವರ್ಷದಿಂದ ಕಾವೇರಿ ತೀರ್ಥೋದ್ಭವಕ್ಕೆ ಮುನ್ನ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಸ್ವಚ್ಛತೆಯ ಅರಿವು ಮೂಡಿಸಲಾಗುತ್ತಿದೆ. ಆದರೆ ಪ್ರವಾಸಿಗರು ಮಾತ್ರ ಕಸವನ್ನು ಎಲ್ಲೆಂದರಲ್ಲಿ ಎಸೆದು ಹೋಗುವುದು ಮಾಮೂಲಾಗಿದೆ.

ಇಂತಹ ಪ್ರವಾಸಿಗರ ನಡುವೆ ಇರಾನಿ ಪ್ರಜೆ ನಾದೀರ್ ಖಾನ್ ಕಾರ್ಯ ಶ್ಲಾಘನೀಯವಾಗಿದೆ. ಇವರು ಒಂದು ತಿಂಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು, ಪ್ರವಾಸ ಮಾಡುತ್ತಾ ಕೊಡಗಿನ ತಲಕಾವೇರಿಗೆ ಬಂದಿದ್ದಾರೆ. ಹೀಗೆ ಬಂದವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Iran Citizen Join Hands To Clean Initiative In Talakaveri

ಈ ವೇಳೆ ಮಾತನಾಡಿದ ಅವರು, "ನಮ್ಮ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬ ಆಸಕ್ತಿ ಪ್ರತಿಯೊಬ್ಬರಲ್ಲಿಯೂ ಇರಬೇಕು. ನಮ್ಮ ವಾತಾವರಣವನ್ನು ನಾವು ಕಲುಷಿತಗೊಳಿಸುವುದಿಲ್ಲ ಎಂಬ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಿದರೆ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯ" ಎಂದರು.

ಈ ಸಂದರ್ಭ, ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಹರೀಶ್ ಇದ್ದರು. ಸ್ವಚ್ಛತಾ ಕಾರ್ಯದಲ್ಲಿ ಕ್ಲೀನ್ ಕೂರ್ಗ್ ಇನಿಶಿಯೇಟಿವ್ ಪ್ರಮುಖರಾಡ ಬಡುವಂಡ ಅರುಣ್ ಅಪ್ಪಚ್ಚು, ಗ್ರೀನ್ ಸಿಟಿ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಮುಂತಾದವರು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+