ಕೊಡಗಿಗೆ ಮುಖ್ಯ ಕಾರ್ಯದರ್ಶಿ ಭೇಟಿ, ಹಲವು ಗ್ರಾಮಗಳಲ್ಲಿ ಪರಿಶೀಲನೆ

ಮಡಿಕೇರಿ, ಸೆಪ್ಟೆಂಬರ್ 08 : ಆಗಸ್ಟ್‌ ತಿಂಗಳಿನಲ್ಲಿ ಸುರಿದ ಮಳೆ ಮತ್ತು ಭೂ ಕುಸಿತದಿಂದ ಕೊಡಗು ಜಿಲ್ಲೆ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಡುವ ಕಾರ್ಯ ನಡೆಯುತ್ತಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಶನಿವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದರು. ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ನಷ್ಟದ ಕುರಿತು ಮಾಹಿತಿ ಸಂಗ್ರಹಿಸಿದರು.

ಭೂ ಕುಸಿತದಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಲಾಗುತ್ತದೆ. ನಿರಾಶ್ರಿತರಿಗೆ ಶಾಶ್ವತವಾದ ಮನೆ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ವಿದೇಶದ ತಂತ್ರಜ್ಞಾನದ ಪರಿಶೀಲನೆಯೂ ನಡೆಯುತ್ತಿದೆ' ಎಂದು ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಹೇಳಿದರು.

ಮಡಿಕೇರಿ ತಾಲೂಕಿನ 2ನೇ ಮೊಣ್ಣಂಗೇರಿಯ ರಾಮಕೊಲ್ಲಿ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಸೇತುವೆ ದುರಸ್ಥಿ ಕಾರ್ಯ ಪ್ರಗತಿಯಲ್ಲಿದೆ. ಮನೆ ಕಳೆದುಕೊಂಡ 1312 ಸಂತ್ರಸ್ತರು ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಟ್ಯಾಂಕರ್ ಮೂಲಕ ನೀರು

ಟ್ಯಾಂಕರ್ ಮೂಲಕ ನೀರು

ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ‌ಪಂಚಾಯಿತಿ ವ್ಯಾಪ್ತಿಯ ಕಾಲೂರು ಗ್ರಾಮದ ಮನೆಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಮಳೆ ಮತ್ತು ಗುಡ್ಡ ಕುಸಿತದ ಬಳಿಕ ಹಲವು ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತವಾಗಿದೆ. ಕೆಂಪು ಮಣ್ಣಿನಿಂದ ಕೂಡಿದ ನೀರು ಬರುತ್ತಿದೆ. ಆದ್ದರಿಂದ, ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.

ಮುಖ್ಯ ಕಾರ್ಯದರ್ಶಿಗಳ ಭೇಟಿ

ಮುಖ್ಯ ಕಾರ್ಯದರ್ಶಿಗಳ ಭೇಟಿ

ಕರ್ನಾಟಕ ಸರ್ಕಾರ ಕೊಡಗು ಜಿಲ್ಲೆಗೆ ಈಗಾಗಲೇ 100 ಕೋಟಿಯನ್ನು ಬಿಡುಗಡೆ ಮಾಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಆಗಿರುವ ಹಾನಿಯ ಕುರಿತು ಪರಿಶೀಲನೆ ನಡೆಸಿದರು.

ರಸ್ತೆ ದುರಸ್ಥಿ ಪರಿಶೀಲನೆ

ರಸ್ತೆ ದುರಸ್ಥಿ ಪರಿಶೀಲನೆ

ಭಾರಿ ಮಳೆ ಮತ್ತು ಭೂ ಕುಸಿತದ ಬಳಿಕ ಕೊಡಗಿನ ರಸ್ತೆಗಳು ಹಾನಿಯಾಗಿವೆ. ಸುಮಾರು 3000 ಕಿ.ಮೀ.ರಸ್ತೆಗಳು ಹಾನಿಗೊಳಗಾಗಿದೆ. ಗ್ರಾಮೀಣ ಸಂಪರ್ಕ ರಸ್ತೆಗಳನ್ನು ದುರಸ್ತಿ ಮಾಡಲು ಜಿಲ್ಲಾಡಳಿತ ಆದ್ಯತೆ ನೀಡಿದೆ.

ಮಡಿಕೇರಿ ತಾಲೂಕಿನ 2ನೇ ಮೊಣ್ಣಂಗೇರಿಯ ರಾಮಕೊಲ್ಲಿ ಸೇತುವೆಯ ದುರಸ್ಥಿ ಪ್ರಗತಿಯಲ್ಲಿದೆ. ಗ್ರಾಮೀಣ ಸಂಪರ್ಕ ರಸ್ತೆಗಳನ್ನು ಸಂಚಾರಕ್ಕೆ ಸಜ್ಜುಗೊಳಿಸಲು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ.

ಪರಿಹಾರ ಸಾಮಾಗ್ರಿ ವಿಸ್ತರಣೆ

ಪರಿಹಾರ ಸಾಮಾಗ್ರಿ ವಿಸ್ತರಣೆ

ಮಳೆ, ಭೂ ಕುಸಿತದಿಂದ ಕೊಡಗು ಜಿಲ್ಲೆಯಲ್ಲಿ ಸಾವಿರಾರು ಜನರು ಮನೆ ಕಳೆದುಕೊಂಡಿದ್ದಾರೆ. ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ವಿಶೇಷ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯ ವಿವಿಧ ಕಡೆ ಜನರಿಗೆ ಸೀಮೆಎಣ್ಣೆ ಹಾಗೂ ಪರಿಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.

ಹಟ್ಟಿಹೊಳೆ ಗ್ರಾಮಕ್ಕೆ ಭೇಟಿ

ಹಟ್ಟಿಹೊಳೆ ಗ್ರಾಮಕ್ಕೆ ಭೇಟಿ

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಕೃತಿ ವಿಕೋಪದಿಂದ ಸಂಪೂರ್ಣ ಹಾನಿಗೀಡಾದ ಹಟ್ಟಿಹೊಳೆ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+