ಪ್ರವಾಹಪೀಡಿತ ಕೊಡಗಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್
ಮಡಿಕೇರಿ, ಆಗಸ್ಟ್ 24: ಪ್ರವಾಹಪೀಡಿತ ಕೊಡಗು ಜಿಲ್ಲೆಗೆ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ. ಕುಶಾಲನಗರ ಮಾರ್ಗವಾಗಿ ಮಾದಾಪುರಕ್ಕೆ ತೆರಳಿದ ಅವರು, ಮಳೆಹಾನಿಯನ್ನು ಅವಲೋಕಿಸಿದರು.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಧಾರಾಕಾರ ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿಯ ಪ್ರತ್ಯಕ್ಷ ಚಿತ್ರಣ ಪಡೆದರು.
ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಲಕ್ಷಾಂತರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಸಾವಿರಾರು ಜನ ಮನೆ ಕಳೆದುಕೊಂಡಿದ್ದಾರೆ. ಈಗಾಗಲೇ 7000 ಜನರನ್ನು ರಕ್ಷಿಸಲಾಗಿದ್ದು, 10 ಜನ ಮೃತಪಟ್ಟಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಸುಂದರ ಮಂಜಿನ ನಗರಿ ಕೊಡಗು ಪ್ರವಾಹಕ್ಕೆ ತತ್ತರಿಸಿರುವುದನ್ನು ಖುದ್ದು ನೋಡದಲು ಆಗಮಿಸಿರುವ ನಿರ್ಮಲಾ ಸೀತಾರಾಮನ್ ಅವರೊಮದಿಗೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದಾರೆ.












Click it and Unblock the Notifications