ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಅಭಿವೃದ್ಧಿ ಪ್ರಾಧಿಕಾರ ರಚನೆ, ಕುಮಾರಸ್ವಾಮಿ ಅಧ್ಯಕ್ಷರು

|
Google Oneindia Kannada News

ಮಡಿಕೇರಿ, ಡಿಸೆಂಬರ್ 07 : ಕರ್ನಾಟಕ ಸರ್ಕಾರ ಹಿಂದೆ ಘೋಷಣೆ ಮಾಡಿದಂತೆ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆ ಮಾಡಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ.

ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಅಪಾರ ಹಾನಿ ಉಂಟಾಗಿತ್ತು. ಆಗ ಕರ್ನಾಟಕ ಸರ್ಕಾರ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆ ಮಾಡುವುದಾಗಿ ಘೋಷಣೆ ಮಾಡಿತ್ತು.

ಕೊಡಗು ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಡಿ.7ರಂದು ಶಂಕು ಸ್ಥಾಪನೆಕೊಡಗು ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಡಿ.7ರಂದು ಶಂಕು ಸ್ಥಾಪನೆ

ಈಗ ಸರ್ಕಾರ ಪ್ರಾಧಿಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರು ಉಪಾಧ್ಯಕ್ಷರಾಗಿದ್ದಾರೆ.

ಕೊಡಗಿನಲ್ಲಿ ಕುಸಿದ ಪ್ರವಾಸೋದ್ಯಮದ ಚೇತರಿಕೆಗೆ ನಾನಾ ಕಸರತ್ತುಕೊಡಗಿನಲ್ಲಿ ಕುಸಿದ ಪ್ರವಾಸೋದ್ಯಮದ ಚೇತರಿಕೆಗೆ ನಾನಾ ಕಸರತ್ತು

Karnataka Govt set up the Kodagu Reconstruction Development Authority

ವಸತಿ ಸಚಿವ ಯು.ಟಿ.ಖಾದರ್, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಸದಸ್ಯರಾಗಿದ್ದಾರೆ.

ಕೊಡಗು ಮಹಾಮಳೆ : 840 ಸಂತ್ರಸ್ತ ಕುಟುಂಬಗಳಿಗೆ ಮನೆ ಭಾಗ್ಯಕೊಡಗು ಮಹಾಮಳೆ : 840 ಸಂತ್ರಸ್ತ ಕುಟುಂಬಗಳಿಗೆ ಮನೆ ಭಾಗ್ಯ

ಕೊಡಗು ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಮಿತಿಯ ಸದಸ್ಯರಾಗಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ಪುನರ್ ನಿರ್ಮಾಣ ಕೈಗೊಳ್ಳುವ ಕಾರ್ಯದ ಉಸ್ತುವಾರಿಯನ್ನು ಈ ಪ್ರಾಧಿಕಾರ ನೋಡಿಕೊಳ್ಳಲಿದೆ.

English summary
Karnataka government has set up the Kodagu Reconstruction Rehabilitation and Development Authority. The authority which will be headed by Chief Minister H.D. Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X