Get Updates
Get notified of breaking news, exclusive insights, and must-see stories!

ಖೇಲೋ ಇಂಡಿಯಾ ವಿಂಟರ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಕೊಡಗಿನ ಕುವರಿ

ಮಡಿಕೇರಿ, ಫೆಬ್ರವರಿ 27: ಸ್ಕೀಯಿಂಗ್‌ನಲ್ಲಿ ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಾ ಕರ್ನಾಟಕದ ಪತಾಕೆಯನ್ನು ಹಾರಿಸುತ್ತಿರುವ ಕೊಡಗಿನ ಭವಾನಿ ತೆಕ್ಕಡ ಅವರು ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ನಡೆದ ಖೇಲೋ ಇಂಡಿಯಾ ವಿಂಟರ್ ಗೇಮ್ಸ್‌ನಲ್ಲಿ ಭಾಗವಹಿಸಿ ಸ್ಕೀಯಿಂಗ್‌ ಪ್ರತ್ಯೇಕ ವಿಭಾಗಗಳಲ್ಲಿ ಮೂರು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಸಾಧನೆಗೈದಿದ್ದಾರೆ.

ಫೆಬ್ರವರಿ 21 ರಿಂದ 25ರವರೆಗೆ ಕಾಶ್ಮೀರದ ಗುಲ್ಮಾರ್ಗ್ ನಲ್ಲಿ 4ನೇ ಖೇಲೋ ಇಂಡಿಯೋ ವಿಂಟರ್ ಗೇಮ್ಸ್ ಆಯೋಜಿಸಲಾಗಿತ್ತು. ಗೇಮ್ಸ್ ನ ಸ್ಪ್ರಿಂಟ್ ಕ್ರಾಸ್ ಕಂಟ್ರಿ ಸ್ಕೀಯಿಂಗ್ ನಲ್ಲಿ ಭಾಗವಹಿಸಿದ ಭವಾನಿ ತೆಕ್ಕಡ ಅವರು ಕ್ರಮವಾಗಿ 10ಕಿ.ಮೀ, 5 ಕಿ.ಮೀ ಹಾಗೂ 1.6 ಕಿ.ಮೀ ನಲ್ಲಿ ಪ್ರಥಮ ಸ್ಥಾಭನ ಪಡೆದು ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಆ ಮೂಲಕ 2026ರಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಬೇಕಾದ ಕಠಿಣ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

Khelo India Winter Games-2024: Kodagu Girl Wins Gold

ಈಗಾಗಲೇ ಸ್ಕೀಯಿಂಗ್ ನಲ್ಲಿ ಹೆಚ್ಚಿನ ತರಬೇತಿಯನ್ನು ಸ್ವೀಡನ್ ನಲ್ಲಿ ಪಡೆದು ಬಂದಿರುವ ಭವಾನಿ ಅವರು, ಮುಂದಿನ ಕಠಿಣ ತರಬೇತಿಗೆ ಸಿದ್ಧರಾಗುತ್ತಿದ್ದಾರೆ. ಈಗಾಗಲೇ ರಾಷ್ಟ್ರಮಟ್ಟದ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದಿರುವ ಅವರು ಅಂತರಾಷ್ಟ್ರೀಯ ಮಟ್ಟದ ಚಾಂಪಿಯನ್ಸ್ ನಲ್ಲಿ ಭಾಗವಹಿಸಿ ಭಾರತವನ್ನು ಪ್ರತಿನಿಧಿಸಿದ ಮೊದಲ ಮಹಿಳೆ ಎಂಬ ಐತಿಹಾಸಿಕ ದಾಖಲೆಗೂ ಕಾರಣರಾಗಿದ್ದಾರೆ.

ಭಾರತವನ್ನು ಪ್ರತಿನಿಧಿಸಿದ್ದ ಭವಾನಿ

ಕಳೆದ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಸಮ್ಮರ್ ಬಯಾಥ್ಲಾನ್ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿ ಭಾರತವನ್ನು ಪ್ರತಿನಿಧಿಸಿದ ಮೊದಲ ಮಹಿಳೆ ಎಂಬ ಖ್ಯಾತಿ ಗಳಿಸಿದ್ದರೆ, ಅದಕ್ಕೂ ಹಿಂದೆ 2018ರಲ್ಲಿ ಯೂರೋಪ್ ದೇಶಗಳ ಪೈಕಿ ಎತ್ತರದ ಒಂದನೇ ಪರ್ವತ ಹಾಗೂ ರಷ್ಯಾದ ಅತಿ ಎತ್ತರದ ಹಿಮಚ್ಚಾದಿತ ಪರ್ವತ ಎಲ್ ಬ್ರಸ್‌ನ್ನು ನಿರಂತರವಾಗಿ ಸುಮಾರು 8 ಗಂಟೆಗಳ ಕಾಲ ಏರಿ ತುತ್ತ ತುದಿಯಲ್ಲಿ ಭಾರತದ ಬಾವುಟವನ್ನು ಹಾರಿಸಿ ಬಂದಿದ್ದರು.

2026ರ ಒಲಂಪಿಕ್ಸ್ ನತ್ತ ದೃಷ್ಟಿ ನೆಟ್ಟಿರುವ ಭವಾನಿ ಅವರು ಅದಕ್ಕಾಗಿ ಬೇಕಾದ ಸಿದ್ಧತೆಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಬಯಾಥ್ಲಾನ್ ಸ್ಪರ್ಧೆ ಕಜಕಿಸ್ತಾನದಲ್ಲಿ ಕಳೆದ ವರ್ಷ ಆ.31ರಿಂದ ಸೆ.5ರವರೆಗೆ ನಡೆದಿದ್ದು ಅದರಲ್ಲಿ ಭಾಗವಹಿಸಿ ಗಮನಸೆಳೆದಿದ್ದರು.

Khelo India Winter Games-2024: Kodagu Girl Wins Gold

ವಿದೇಶಗಳಲ್ಲಿ ವಿಶೇಷ ತರಬೇತಿ

ಇನ್ನು 2022ರಲ್ಲಿ ನಡದಿದ್ದ ಜಮ್ಮು-ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ನಡೆದ ರಾಷ್ಟ್ರೀಯ ವಿಂಟರ್ ಬಯಾಥ್ಲಾನ್ ಚಾಂಪಿಯನ್ ಶಿಪ್ ನಲ್ಲಿ ಒಂದು ಚಿನ್ನದ ಪದಕ ಮತ್ತು ಎರಡು ಬೆಳ್ಳಿ ಪದಕವನ್ನು ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದರು. ಭವಾನಿ ಅವರು ಸ್ಕೀಯಿಂಗ್ ನ್ನು ಆಯ್ಕೆ ಮಾಡಿಕೊಂಡು ಯುರೋಪಿನ ನಾರ್ವೆ, ನ್ಯೂಜಿಲ್ಯಾಂಡ್ನ ಮೌಂಟ್ ರೂಪೇವ್, ರಷ್ಯಾದ ಎಲ್‍ ಬ್ರಸ್ ನಲ್ಲಿಯೂ ಹೆಚ್ಚಿನ ತರಬೇತಿ ಪಡೆದಿದ್ದಾರೆ. 2020ರ ಫೆಬ್ರವರಿ ತಿಂಗಳಲ್ಲಿ ಉತ್ತರಾಖಂಡ್ನ ನಾರ್ಡಿಕ್‌ನಲ್ಲಿ ನಡೆದ ರಾಷ್ಟ್ರೀಯ ಸ್ಕೀಯಿಂಗ್ ಚಾಂಪಿಯನ್ ಶಿಪ್ ನ 10 ಮತ್ತು 15 ಕಿ.ಮೀ ಕ್ರಾಸ್ ಕಂಟ್ರಿಯಲ್ಲಿ ಭಾಗವಹಿಸುವ ಮೂಲಕ ಪ್ರಥಮ ಬಾರಿಗೆ ಕರ್ನಾಟಕವನ್ನು ಪ್ರತಿನಿಧಿಸಿದ ಯುವತಿ ಎಂಬ ಪ್ರಶಂಸೆಗೆ ಪಾತ್ರವಾಗಿದ್ದರು.

ಇದಾದ ನಂತರ ಅದೇ ವರ್ಷ ಮಾರ್ಚ್ ತಿಂಗಳಲ್ಲಿ ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ನಡೆದ ನ್ಯಾಷನಲ್ ಕೇಲೋ ಇಂಡಿಯಾ ಮೀಟರ್ ಗೇಮ್ಸ್‌ನಲ್ಲಿ ಜೆಐಎಂ ಅಂಡ್ ಡಬ್ಲ್ಯೂಎಸ್ ಇನ್ ಸೊಟ್ ನ 10ಕಿ.ಮೀ. ಮತ್ತು 5ಕಿ.ಮೀ. ನಾರ್ಡಿಕ್ ಸ್ಕೀಯಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಎರಡು ಕಂಚಿನ ಪದಕವನ್ನು ಪಡೆದುಕೊಂಡಿದ್ದರು. ಇದಾದ ಬಳಿಕ ಕಾಶ್ಮೀರದ ಗುಲ್ಮಾರ್‌ನಲ್ಲಿ ನಡೆದ ನ್ಯಾಷನಲ್ ಬಯಾಥ್ಲಾನ್ ಚಾಂಪಿಯನ್ ಶಿಪ್ ನ 10ಕಿ.ಮೀ. ಸ್ಕೀಯಿಂಗ್ ಮತ್ತು ಶೂಟಿಂಗ್ ನಲ್ಲಿ ಸ್ಪರ್ಧಿಸಿದ್ದರಾದರೂ ವಿಜಯ ಲಕ್ಷ್ಮಿ ಒಲಿದಿರಲಿಲ್ಲ.

ಕೊಡಗು ಮಂಗಳೂರಲ್ಲಿ ವಿದ್ಯಾಭ್ಯಾಸ

ಭವಾನಿ ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ತೆಕ್ಕಡ ನಂಜುಂಡ, ಪಾರ್ವತಿ ದಂಪತಿ ಪುತ್ರಿ ಭವಾನಿ ಶಾಲಾ ದಿನಗಳಲ್ಲಿಯೇ ಕ್ರೀಡೆ, ಎನ್‌ಸಿಸಿಯತ್ತ ಹೆಚ್ಚಿನ ಒಲವು ಹೊಂದಿದ್ದರು. ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುವಾಗ ಎನ್‌ಸಿಸಿಗೆ ಸೇರ್ಪಡೆಗೊಂಡ ಬಳಿಕ ಸಾಹಸಮಯ ಚಟುವಟಿಕೆಯತ್ತ ತನ್ನನ್ನು ತೊಡಗಿಸಿಕೊಳ್ಳಲು ಇನ್ನಷ್ಟು ಹಾದಿ ಸುಗಮವಾಯಿತು.

Khelo India Winter Games-2024: Kodagu Girl Wins Gold

ಭವಾನಿ ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ದಕ್ಷಿಣ ಕೊಡಗಿನ ಶ್ರೀಮಂಗಲದ ಜೆಸಿ ಶಾಲೆಯಲ್ಲಿ, ಬಳಿಕ ಮಡಿಕೇರಿ ತಾಲೂಕಿನ ಗಾಳಿಬೀಡುವಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಮುಗಿಸಿ, ಮಂಗಳೂರಿನ ಸೆಂಟ್ ಅಗ್ನೇಸ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಡಾರ್ಜಲಿಂಗ್ ನ ಹಿಮಾಲಯ ಮೌಂಟೇನಿಯರಿಂಗ್ ಇನ್ಸಿಟ್ಯೂಟ್‌ನಲ್ಲಿ ಬೋಧಕರಾಗಿಯೂ ಕೆಲಸ ಮಾಡಿದ್ದಾರೆ.

ವಾಯು ಸೈನಿಕ್ ಶಿಬಿರದಲ್ಲಿ ತರಬೇತಿ

ಪ್ರೌಢಶಾಲೆಯಿಂದಲೇ ಎನ್‌ಸಿಸಿಗೆ ಸೇರಿ ಕಾಲೇಜಿನಲ್ಲಿಯೂ ಅದನ್ನು ಮುಂದುವರೆಸಿ ವಿವಿಧ ಕ್ಯಾಂಪ್‌ಗಳಲ್ಲಿ ಭಾಗವಹಿಸಿ ತರಬೇತಿ ಪಡೆದು 2016ರಲ್ಲಿ ನವದೆಹಲಿಯ ರಾಜಪಥ್ ನಲ್ಲಿ ನಡೆದ ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಭಾಗವಹಿಸಿದ್ದರು.

ಜೋದ್‌ಫುರ್‌ನಲ್ಲಿ ನಡೆದ ವಾಯುದಳದ ಅಖಿಲ ಭಾರತ ವಾಯು ಸೈನಿಕ್ ಶಿಬಿರದಲ್ಲೂ ಪಾಲ್ಗೊಂಡು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಎನ್‌ಸಿಸಿಯ ಡೈರೆಕ್ಟರ್ ಜನರಲ್ ಲೆ.ಜ. ಅನಿರುದ್ಧ ಚಕ್ರವರ್ತಿ, ಕರ್ನಾಟಕ, ಗೋವಾ ಎನ್‌ಸಿಸಿ ಡೆಪ್ಯೂಟಿ ಡೈರೆಕ್ಟರ್ ಜನರಲ್ ಏರ್ ಕಮಾಂಡರ್ ಸಿ.ರಾಜೀವ್ ಅವರ ಶ್ಲಾಘನೆಗೆ ಪಾತ್ರರಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+