ರಂಗಭೂಮಿ ನಟಿ ಅನಿತಾ ಕಾರ್ಯಪ್ಪಗೆ ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿ
ಮಡಿಕೇರಿ, ಮಾರ್ಚ್ 6: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ಕಿತ್ತೂರುರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಯು ಈ ಬಾರಿ ಕೊಡಗಿನ ರಂಗಭೂಮಿ ನಟಿ ಅಡ್ಡಂಡ ಅನಿತಾ ಕಾರ್ಯಪ್ಪ ಅವರಿಗೆ ಲಭಿಸಿದೆ.
ಈ ಪ್ರಶಸ್ತಿ ರೂ.25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮಾ.8ರ ಮಹಿಳಾ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರ ಪತ್ನಿಯಾಗಿರುವ ಅಡ್ಡಂಡ ಅನಿತಾ ಕಾರ್ಯಪ್ಪ ಅವರು ಕಳೆದ 40 ವರ್ಷಗಳಿಂದ ನಿರಂತರವಾಗಿ ಕೊಡಗಿನಲ್ಲಿ ರಂಗಭೂಮಿ ಸೇವೆಯಲ್ಲಿದ್ದಾರೆ. ಕನ್ನಡ ಮತ್ತು ಕೊಡವ ಭಾಷೆಯಲ್ಲಿ ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡ ನಟಿಯೂ ಹೌದು.

ನೀನಾಸಂ ಪದವೀಧರೆಯಾದ ಇವರು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ನಾಟಕ ಅಕಾಡೆಮಿ, ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೊಡಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಮೈಸೂರು ದಕ್ಷಿಣ ವಲಯ ದಕ್ಷಿಣ ಕೇಸರಿ ಪ್ರಶಸ್ತಿಗಳು ಸಂದಿವೆ. ಸುಮಾರು 80ಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿರುವ ಇವರು, ಕೊಡವ ಭಾಷೆಯ ಚಲನಚಿತ್ರಗಳಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಇವರು ನಟಿಸಿದ "ಬದ್ ಕ್" (ಕೊಡವ) ಕನ್ನಡದಲ್ಲಿ "ಮಿಥುನ" ನಾಟಕದ ನಟನೆ ಗಮನ ಸೆಳೆದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications