ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಂಗಭೂಮಿ ನಟಿ ಅನಿತಾ ಕಾರ್ಯಪ್ಪಗೆ ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿ

|
Google Oneindia Kannada News

ಮಡಿಕೇರಿ, ಮಾರ್ಚ್ 6: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ಕಿತ್ತೂರುರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಯು ಈ ಬಾರಿ ಕೊಡಗಿನ ರಂಗಭೂಮಿ ನಟಿ ಅಡ್ಡಂಡ ಅನಿತಾ ಕಾರ್ಯಪ್ಪ ಅವರಿಗೆ ಲಭಿಸಿದೆ.

ಈ ಪ್ರಶಸ್ತಿ ರೂ.25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮಾ.8ರ ಮಹಿಳಾ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Addanda Anitha Cariappa Got Theatre Artist Award

ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರ ಪತ್ನಿಯಾಗಿರುವ ಅಡ್ಡಂಡ ಅನಿತಾ ಕಾರ್ಯಪ್ಪ ಅವರು ಕಳೆದ 40 ವರ್ಷಗಳಿಂದ ನಿರಂತರವಾಗಿ ಕೊಡಗಿನಲ್ಲಿ ರಂಗಭೂಮಿ ಸೇವೆಯಲ್ಲಿದ್ದಾರೆ. ಕನ್ನಡ ಮತ್ತು ಕೊಡವ ಭಾಷೆಯಲ್ಲಿ ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡ ನಟಿಯೂ ಹೌದು.

Addanda Anitha Cariappa Got Theatre Artist Award

ನೀನಾಸಂ ಪದವೀಧರೆಯಾದ ಇವರು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ನಾಟಕ ಅಕಾಡೆಮಿ, ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೊಡಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಮೈಸೂರು ದಕ್ಷಿಣ ವಲಯ ದಕ್ಷಿಣ ಕೇಸರಿ ಪ್ರಶಸ್ತಿಗಳು ಸಂದಿವೆ. ಸುಮಾರು 80ಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿರುವ ಇವರು, ಕೊಡವ ಭಾಷೆಯ ಚಲನಚಿತ್ರಗಳಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಇವರು ನಟಿಸಿದ "ಬದ್ ‌ಕ್" (ಕೊಡವ) ಕನ್ನಡದಲ್ಲಿ "ಮಿಥುನ" ನಾಟಕದ ನಟನೆ ಗಮನ ಸೆಳೆದಿದೆ.

English summary
Theatre artist Addanda Anitha cariappa got Kitturu rani Chennamma State Award, conferred by the Government of Karnataka through the Department of Women and Child Development
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X