ಕೊಡಗು : ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ
ಕೊಡಗು, ಅಕ್ಟೋಬರ್ 03 : ರಾಜ್ಯ ಚುನಾವಣಾ ಆಯೋಗ ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಭಾರಿ ಮಳೆ ಮತ್ತು ಪ್ರವಾಹದ ಕಾರಣ ಚುನಾವಣೆಗಳನ್ನು ಮುಂದೂಡಲಾಗಿತ್ತು.
ಬುಧವಾರ ಆಯೋಗ ಕುಶಾಲನಗರ, ವಿರಾಜಪೇಟೆ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ. ಅಕ್ಟೋಬರ್ 10ರಂದು ಜಿಲ್ಲಾಧಿಕಾರಿ ಅವರು ಅಧಿಸೂಚನೆ ಹೊರಡಿಸಲಿದ್ದಾರೆ.
ಚುನಾವಣಾ ನೀತಿ ಸಂಹಿತೆ ಬುಧವಾರದಿಂದಲೇ ಜಾರಿಗೆ ಬಂದಿದೆ. ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ಅ.17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.20 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

ಹಿಂದೆ ಆಗಸ್ಟ್ 10 ರಿಂದ 16ರ ತನಕ ಚುನಾವಣೆ ದಿನಾಂಕ ಘೋಷಣೆಯಾದಾಗ ಸಲ್ಲಿಸಿದ್ದ ನಾಮಪತ್ರಗಳನ್ನು ಪರಿಗಣಿಸಲಾಗುತ್ತದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 31ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications