ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲೆಗೆ ಪ್ರವಾಸಿಗರ ಭೇಟಿಗೆ ಇದ್ದ ನಿರ್ಬಂಧ ತೆರವು

By Gururaj
|
Google Oneindia Kannada News

ಮಡಿಕೇರಿ, ಸೆಪ್ಟೆಂಬರ್ 10 : ಕೊಡಗು ಜಿಲ್ಲೆಗೆ ಪ್ರವಾಸಿಗರ ಭೇಟಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಭಾರಿ ಮಳೆ ಮತ್ತು ಗುಡ್ಡ ಕುಸಿತದ ಕಾರಣ ಪ್ರವಾಸಿಗರು ಭೇಟಿ ನೀಡದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು.

ಪ್ರವಾಸಿಗ ಭೇಟಿಗೆ ಅವಕಾಶ ನೀಡಿದರೂ ಮಡಿಕೇರಿ ತಾಲೂಕಿನ ಅಬ್ಬಿ ಜಲಪಾತ, ಮಾಂದಲ್ ಪಟ್ಟಿ, ತಡಿಯಂಡಮೋಳ್ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಇನ್ನೂ ದುರಸ್ಥಿಯಾಗಿಲ್ಲ. ಪ್ರವಾಸಿಗರು ಅಲ್ಲಿಗೆ ತೆರಳುವಂತಿಲ್ಲ.

ಕೊಡಗಿಗೆ ಮುಖ್ಯ ಕಾರ್ಯದರ್ಶಿ ಭೇಟಿ, ಹಲವು ಗ್ರಾಮಗಳಲ್ಲಿ ಪರಿಶೀಲನೆಕೊಡಗಿಗೆ ಮುಖ್ಯ ಕಾರ್ಯದರ್ಶಿ ಭೇಟಿ, ಹಲವು ಗ್ರಾಮಗಳಲ್ಲಿ ಪರಿಶೀಲನೆ

Kodagu : Ban on tourist entry lifted

ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಈ ಕುರಿತು ಮಾಹಿತಿ ನೀಡಿದ್ದು, 'ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳ ಪುನರ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕಿದೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಪಾಲಿಸಬೇಕು' ಎಂದು ಹೇಳಿದ್ದಾರೆ.

ಕೊಡಗು : ನಿರಾಶ್ರಿತರ ತಾತ್ಕಾಲಿಕ ಶೆಡ್ ಹೀಗಿದೆ ನೋಡಿಕೊಡಗು : ನಿರಾಶ್ರಿತರ ತಾತ್ಕಾಲಿಕ ಶೆಡ್ ಹೀಗಿದೆ ನೋಡಿ

ಸುಮಾರು ಒಂದು ತಿಂಗಳ ಬಳಿಕ ಕೊಡಗು ಜಿಲ್ಲೆಗೆ ಭಾನುವಾರ ಕೆಲವು ಪ್ರವಾಸಿಗರು ಭೇಟಿ ನೀಡಿದ್ದರು. ಮಡಿಕೇರಿಯ ರಾಜಾಸೀಟ್, ಭಾಗಮಂಡಲ ಹಾಗೂ ತಲಕಾವೇರಿಗೆ ಕೆಲವು ಪ್ರವಾಸಿಗರು ಭೇಟಿ ನೀಡಿ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಕೊಡಗು ಮಹಾಮಳೆಯ ದುರಂತದ ನಂತರ ಕಾಲೂರಿನ ದುಸ್ಥಿತಿ ಇದುಕೊಡಗು ಮಹಾಮಳೆಯ ದುರಂತದ ನಂತರ ಕಾಲೂರಿನ ದುಸ್ಥಿತಿ ಇದು

2 ಸಾವಿರ ಕೋಟಿ ಪ್ಯಾಕೇಜ್ : ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆ

ಸೋಮವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿನ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ 2000 ಕೋಟಿ ರೂ. ಗಳ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರಧಾನಿಗಳಿಗೆ ನಿಯೋಗ ಮನವಿ ಮಾಡಿತು.

English summary
Kodagu district administration lifted the ban on tourist entry to district. Tourist visit banned after heavy rain and land slide in Kodagu in the month of August 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X