ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎನ್‌ಎಸ್‌ಜಿ ಮುಖ್ಯಸ್ಥರಾಗಿ ಕೊಡಗು ಮೂಲದ ಎಂ.ಎ.ಗಣಪತಿ ನೇಮಕ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಮಾರ್ಚ್ 17: ಕೊಡಗು ಮೂಲದ ಐಪಿಎಸ್ ಅಧಿಕಾರಿ ಎಂ.ಎ.ಗಣಪತಿ ಅವರನ್ನು ಕೇಂದ್ರ ಸರ್ಕಾರ, ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.

ಈ ಮೊದಲು ಐಪಿಎಸ್ ಅಧಿಕಾರಿ ಎಂ.ಎ.ಗಣಪತಿ ಅವರು ನಾಗರಿಕ ವಿಮಾನಯಾನ ಮತ್ತು ಭದ್ರತಾ ವಿಭಾಗದ ಪ್ರಧಾನ ನಿರ್ದೇಶಕ (ಡಿಜಿ) ಆಗಿ ಸೇವೆ ಸಲ್ಲಿಸುತ್ತಿದ್ದರು.

1986 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಆಗಿರುವ ಎಂ.ಎ ಗಣಪತಿ ಅವರು ಈ ಹಿಂದೆ ಸಿಐಎಸ್‌ಎಫ್‌ನಲ್ಲಿ ವಿಶೇಷ ಡಿಜಿ ಆಗಿದ್ದರು ಮತ್ತು ಅದಕ್ಕೂ ಮೊದಲು ಉತ್ತರಾಖಂಡ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದರು.

 Kodagu-Based MA Ganapathi Appointed As NSG Chief

Recommended Video

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ, ಮಾಸ್ಕ್‌ ಧರಿಸದಿದ್ದರೆ ದಂಡ ಹಾಕಲು ಸೂಚನೆ | Oneindia Kannada

ಗೃಹ ಸಚಿವಾಲಯದ ಆಂತರಿಕ ಭದ್ರತೆ ಮತ್ತು ನಕ್ಸಲ್‌ ನಿಗ್ರಹ ಪಡೆ ವಿಭಾಗಗಳಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು. ಅವರು ಮುಂದಿನ ಫೆಬ್ರವರಿ 29, 2024 ರವರೆಗೆ ಅಥವಾ ಮುಂದಿನ ಆದೇಶದವರೆಗೆ ಅವರು ಎನ್‌ಎಸ್‌ಜಿ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ.

English summary
Kodagu-based IPS officer MA Ganapathi has been appointed as head of the National Security Guard (NSG) by the central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X