ಕೊಡಗಿನಲ್ಲಿ ಗುರುವಾರದಿಂದ ಮಳೆ ಹೆಚ್ಚು: ಜಿಲ್ಲಾಡಳಿತ ಎಚ್ಚರಿಕೆ

ಕೊಡಗು, ಜೂನ್ 19: ಜಿಲ್ಲೆಯಲ್ಲಿ ಗುರುವಾರದಿಂದ ಮುಂಗಾರು ಮಳೆ ಚುರುಕುಗೊಳ್ಳಲಿದೆ ಮುಂದಿನ ಎರಡು ವಾರಗಳವರೆಗೆ ಮಳೆ ಜೋರಾಗಿ ಮುಂದುವರಿಯಲಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕೊಡಗು ಜಿಲ್ಲಾಡಳಿತ ಸೂಚನೆ ನೀಡಿದೆ.

ಅಪಾಯದ ಅಂಚಿನಲ್ಲಿರುವ ಮತ್ತು ಅಪಾಯಕಾರಿ ಪ್ರದೇಶಗಳಲ್ಲಿನ ಮನೆಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳು ಮನೆ ತೆರವು ಮಾಡುವಂತೆ ಸ್ಥಳೀಯ ಪ್ರಾಧಿಕಾರ ಸೂಚಿಸಿದೆ. ಈ ಕುಟುಂಬಗಳು ಬೇರೆ ವಸತಿ ಪ್ರದೇಶಗಳಿಗೆ ತೆರಳಲು ಅನುಕೂಲವಾಗುವ ದೃಷ್ಟಿಯಿಂದ ತಿಂಗಳಿಗೆ 10,000 ರೂಪಾಯಿಯಂತೆ ಮೂರು ತಿಂಗಳವರೆಗೆ ಬಾಡಿಗೆ ಭತ್ಯೆಯನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಪ್ರಸ್ತುತ 2019ರ ಜೂನ್ ತಿಂಗಳ ಬಾಡಿಗೆ ಹಣವನ್ನು ಈಗಾಗಲೇ ಸಂಬಂಧಪಟ್ಟ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಸಂತ್ರಸ್ತರು ತಮಗೆ ಯಾವುದೇ ನೆರವು ಅಗತ್ಯವಿದ್ದರೆ ಹಾಗೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ಸಂಬಂಧಪಟ್ಟ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Kodagu district administration warned people heavy rain

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಎದುರಾದರೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ 08272-221077 ಟೋಲ್ ಫ್ರೀ ತುರ್ತು ಸೇವೆಯ ದೂರವಾಣಿ ಸಂಖ್ಯೆ ಹಾಗೂ 8550001077 ವಾಟ್ಸಾಪ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೊದಲು ಜೂನ್ 13ರವರೆಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿತ್ತು. ಈಗ ಈ ಎಚ್ಚರಿಕೆಯ ಪ್ರಕಟಣೆಯನ್ನು ಮುಂದುವರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+