ಕೊಡಗು ಪ್ರವಾಹ ಸಂತ್ರಸ್ತರಿಗೆ ಸಹಾಯವಾಣಿ ಆರಂಭ
ಬೆಂಗಳೂರು, ಆಗಸ್ಟ್ 17: ಕೊಡಗು, ಕರಾವಳಿ ಭಾಗದಲ್ಲಿ ಮಳೆ ಮುಂದುವರೆದು ಪ್ರವಾಹಕ್ಕೆ ಎಡೆಮಾಡಿಕೊಟ್ಟಿದೆ. ದಿನದಿಂದ ದಿನಕ್ಕೆ ಮೃತರ ಸಂಖ್ಯೆ ಏರುತ್ತಲೇ ಇದೆ. ಸಂಕಷ್ಟದಲ್ಲಿರುವ ಜನತೆಗಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಈ ಕುರಿತು ನಟಿ ಸಂಯುಕ್ತಾ ಹೊರ್ನಾಡ್ ಸಹಾಯವಾಣಿ ಸಂಖ್ಯೆಗಳನ್ನು ಟ್ವೀಟ್ ಮಾಡಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ, ನಾಪೋಕ್ಲು, ಅಯ್ಯಂಗೇರಿ, ಭಾಗಮಂಡಲ, ಚೆಟ್ಟಿಮಾನಿ ವ್ಯಾಪ್ತಿಯ ಗ್ರಾಮಗಳಲ್ಲಿ ಭಾರಿ ಮಳೆಯಾಗುತ್ತಿದೆ. ಗುರುವಾರ ಸ್ವಲ್ಪ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕಾಗಿದ್ದು, ಜಿಲ್ಲೆಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯವಸ್ತವಾಗಿದೆ.
Kodagu Helplines
— Samyukta Hornad (@samyuktahornad) August 16, 2018
#KodaguFloods #Floods #Help pic.twitter.com/IGmqTcY3LA
ಶುಕ್ರವಾರ ಹಾಗೂ ಶನಿವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಲವು ದಿನಗಳಿಂದ ಕೇರಳ ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಸಾವಿಗೀಡಾದವರ ಸಂಖ್ಯೆ 114ಕ್ಕೇರಿದೆ. ಕೊಡಗು ಜಿಲ್ಲೆಯಲ್ಲಿ ಎರಡು ದಿನದಿಂದ ಭಾರೀ ಮಳೆ ಆಗುತ್ತಿದೆ.
ಕೇರಳಕ್ಕೆ ಹೋಗುವ ಹೆದ್ದಾರಿ ಕೂಡ ಬಂದ್ ಆಗಿದೆ. ಜಿಲ್ಲೆಯಲ್ಲಿ ಪರಿಹಾರ ಕಾರ್ಯಾಚರಣೆ ತೀವ್ರಗೊಳಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಗತ್ಯ ನೆರವುಗಳನ್ನು ಪಡೆಯುವಂತೆ, ಜನರ ರಕ್ಷಣೆಗೆ ಹೆಲಿಕಾಪ್ಟರ್ ಗಳನ್ನು ಬಳಸುವಂತೆ ಕೂಡ ಸೂಚನೆ ನೀಡಿದ್ದಾರೆ.

ಮಳೆಯ ಅಬ್ಬರ ಮುಂದುವರೆದಿದೆ. ಭಾಗಮಂಡಲದಲ್ಲಿ ಒಂದೇ ದಿನದ ಅವಧಿಯಲ್ಲಿ ದಾಖಲೆಯ ಸುಮಾರು 252 ಮಿ.ಮೀ. ಮಳೆ ಸುರಿದಿದ್ದು ಪರಿಣಾಮ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಇದರಿಂದ ಸುತ್ತಮುತ್ತಲ ಸಂಪರ್ಕ ಬಂದ್ ಆಗಿದ್ದು ಜನಜೀವನ ಅಸ್ತವ್ಯಸ್ತವಾಗಿದ್ದು ಮಳೆ ಯಾವಾಗ ನಿಲ್ಲುವುದೋ ಎಂದು ಜನರು ಕಾಯುವಂತಾಗಿದೆ. ಮನೆಗಳು ಸಂಪೂರ್ಣವಾಗಿ ಜಲಾವೃತವಾಗಿದೆ. ಇನ್ನು ಕೆಲವು ಮನೆಗಳು ಕುಸಿದಿದೆ. ಕೊಡಗು ಜಿಲ್ಲಾಧಿಕಾರಿ-9482628409, ಜಿಲ್ಲಾ ಪಂಚಾಯತ್ ಸಿಇಓ-9480869000.












Click it and Unblock the Notifications