ಮತದಾರರ ಪಟ್ಟಿ; ಕೊಡಗು ಜಿಲ್ಲೆಯ ಒಟ್ಟು ಮತದಾರರು ಎಷ್ಟು?
ಮಡಿಕೇರಿ, ಅಕ್ಟೋಬರ್ 30: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮತದಾರರ ಪಟ್ಟಿಯಂತೆ ಜಿಲ್ಲೆಯ 546 ಮತಗಟ್ಟೆಯಲ್ಲಿ 2,26,392 ಪುರುಷ, 2,33,503 ಮಹಿಳಾ ಮತದಾರರು ಹಾಗೂ 21 ಇತರ ಮತದಾರರು ಸೇರಿ ಒಟ್ಟು 4,59,916 ಮತದಾರರು ಇದ್ದಾರೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೊಡಗು ಜಿಲ್ಲೆಯ ಮಡಿಕೇರಿ-208 ಮತ್ತು ವಿರಾಜಪೇಟೆ-209 ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮನೆ-ಮನೆ ಸಮೀಕ್ಷೆ ಮಾಡಿ ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಹೇಳಿದರು.

2024ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದೆ. ಅಷ್ಟರೊಳಗೆ ಕರಡು ಮತದಾರರ ಪಟ್ಟಿಯನ್ನು ಗಮನಿಸಿ ಸರಿಪಡಿಸಿಕೊಳ್ಳಲು ಅವಕಾಶವಿದೆ. 18 ವರ್ಷ ಪೂರ್ಣಗೊಂಡವರ ಹೆಸರು ಬಿಟ್ಟು ಹೋಗಿದ್ದಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶವಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಮತದಾರರ ವಿವರ; ಮಡಿಕೇರಿ ಮತ್ತು ವಿರಾಜಪೇಟೆ ಎರಡು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಚಿಕ್ಕ ಜಿಲ್ಲೆ ಕೊಡಗು. ವಿಧಾನಸಭಾ ಕ್ಷೇತ್ರವಾರು ಗಮನಿಸಿದಾಗ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಯಲ್ಲಿ 1,14,294 ಪುರುಷ ಮತದಾರರು, 1,19,464 ಮಹಿಳಾ ಮತದಾರರು ಹಾಗೂ 10 ಇತರ ಮತದಾರರು ಸೇರಿ ಒಟ್ಟು 2,33,768 ಮತದಾರರು ಇದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ 273 ಮತಗಟ್ಟೆಯಲ್ಲಿ 1,12,098 ಪುರುಷ, 1,14,039 ಮಹಿಳಾ ಮತದಾರರು, 11 ಇತರ ಮತದಾರರು ಸೇರಿ ಒಟ್ಟು 2,26,148 ಮತದಾರರು ಇದ್ದಾರೆ.
ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದೆ ಮತದಾರರ ಸಂಖ್ಯೆ ಹೆಚ್ಚಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಯ ಪ್ರಕಟಣೆ ಬಳಿಕ ಅಂದರೆ ಅಕ್ಟೋಬರ್ 27 ರಿಂದ 2023ರ ಡಿಸೆಂಬರ್ 9 ರವರೆಗೆ, 01-01-2024, 01-04-2024, 01-07-2024 ಮತ್ತು 01-10-2024ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಒಂದು ವೇಳೆ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7 ರಲ್ಲಿ ಆಕ್ಷೇಪಣೆ ಅರ್ಜಿಯನ್ನು ಸಲ್ಲಿಸಬೇಕು. ಮತದಾರರ ಗುರುತಿನ ಚೀಟಿಯಲ್ಲಿ ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8ರಲ್ಲಿ ಅರ್ಜಿ ಹಾಕಬೇಕು. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎರಲ್ಲಿ ಅರ್ಜಿ ನೀಡಬೇಕಿದೆ.
2023ರ ನವೆಂಬರ್ 18, 19, ಡಿಸೆಂಬರ್ 2 ಮತ್ತು 3ರಂದು ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ಜನರು ಇದರ ಉಪಯೋಗವನ್ನು ಪಡೆದುಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಲಾಗಿದೆ.
ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ (VOTER HELPLINE APP) ಅನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಮತದಾರರು/ ನಾಗರಿಕರು ತಮ್ಮ ಮೊಬೈಲ್‍ನಲ್ಲಿ ಮತದಾರರ ಸಹಾಯವಾಣಿ ಆಪ್ (VOTER HELPLINE APP) ಅನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications