• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾರ್ಗಸೂಚಿ ಉಲ್ಲಂಘನೆ: ವಿರಾಜಪೇಟೆ ದಂತ ವೈದ್ಯಕೀಯ ಕಾಲೇಜು ವಿರುದ್ಧ ಮೊಕದ್ದಮೆ

By ಮಡಿಕೇರಿ ಪ್ರತಿನಿಧಿ
|

ಕೊಡಗು, ಏಪ್ರಿಲ್ 27: ಕೊರೊನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದ್ದರೂ, ವಿರಾಜಪೇಟೆಯ ಖಾಸಗಿ ಡೆಂಟಲ್ ಕಾಲೇಜ್ ಕೊರೊನಾ ನಿಯಮವನ್ನು ಗಾಳಿಗೆ ತೂರಿದ ಪರಿಣಾಮ ಕಾಲೇಜು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಡೆಂಟಲ್ ಕಾಲೇಜಿನಲ್ಲಿ ತರಗತಿಗಳು ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ವಿರಾಜಪೇಟೆ ತಹಶೀಲ್ದಾರ ಆರ್.ಯೋಗಾನಂದ್ ಪೊಲೀಸರೊಂದಿಗೆ ಸೋಮವಾರ ಕೂರ್ಗ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸಸ್‌ ಕಾಲೇಜಿನ ಮೇಲೆ ಏಕಾಏಕಿ ದಾಳಿ ಮಾಡಿದರು.

ಈ ವೇಳೆ ಕಾಲೇಜಿನಲ್ಲಿ ಕೋವಿಡ್ ನಿಯಮಗಳನ್ನು ಮೀರಿ ಆಂತರಿಕ ಪರೀಕ್ಷೆಗಳನ್ನು ನಡೆಸುತ್ತಿರುವುದು ಕಂಡು ಬಂತು. ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಲ್ಯಾಬ್ ತರಗತಿಗಳನ್ನು ನಡೆಸುತ್ತಿದ್ದನ್ನು ಗಮನಿಸಿದರು. ಈ ವೇಳೆ ಉಪನ್ಯಾಸಕರನ್ನು ವಿಚಾರಿಸಿದಾಗ ನಾವು ಯಾವುದೇ ತರಗತಿ ನಡೆಸುತ್ತಿರಲಿಲ್ಲ. ಸಂಶೋಧನೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದೆವು ಎಂದು ಸಮಾಜಾಯಿಷಿ ನೀಡಿದ್ದಾರೆ.

ಇದೇ ವೇಳೆ ತರಗತಿ ಕೊಠಡಿಗಳಿಂದ ಹೊರಗೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಕೇಳಿದಾಗ ವಿದ್ಯಾರ್ಥಿಗಳು ಲ್ಯಾಬ್ ತರಗತಿಯಲ್ಲಿ ಇದ್ದೆವು ಎನ್ನುವುದನ್ನು ಒಪ್ಪಿಕೊಂಡರು. ಜೊತೆಗೆ ಕಾಲೇಜು ಆವರಣದಲ್ಲಿರುವ ಹೋಟೆಲಿನಲ್ಲಿ ವಿದ್ಯಾರ್ಥಿಗಳಿಗೆ ಅಲ್ಲಿಯೇ ಊಟ ನೀಡಲಾಗುತ್ತಿತ್ತು. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಒಂದೊಂದು ಮೇಜಿನಲ್ಲೂ ಗುಂಪು ಗುಂಪಾಗಿ ಕುಳಿತು ಊಟ ಮಾಡುತ್ತಿದ್ದರು.

ತಕ್ಷಣವೇ ಎಚ್ಚೆತ್ತುಕೊಂಡು ತಹಶೀಲ್ದಾರ ಇದ್ದ ಸ್ಥಳಕ್ಕೆ ಬಂದ ಕಾಲೇಜು ಡೀನ್ ತರಗತಿ ನಡೆಸುವುದಕ್ಕೆ ನಮಗೆ ಅವಕಾಶ ಇದೆ ಎಂದು ಸಮಜಾಯಿಷಿ ನೀಡಲು ಪ್ರಯತ್ನಿಸಿದರು. ಆದರೆ ತಹಶೀಲ್ದಾರ ಅವರು ಎಲ್ಲವನ್ನೂ ಪರಿಶೀಲಿಸಿದರು.

   ಕೊರೊನ, ಭಾರತದ ಸಹಾಯಕ್ಕೆ ನಿಂತ ಅಮೇರಿಕಾ | Oneindia Kannada

   ಕಾಲೇಜು ವಿರುದ್ಧ ಶಿಸ್ತು ಕ್ರಮ ಕೈಗೊಂಡು ಸರ್ಕಾರದ ನಿಯಮದ ಪ್ರಕಾರ ಪ್ರಕರಣ ದಾಖಲಿಸಲಾಗುವುದು. ಕಾಲೇಜಿನಲ್ಲಿ ಹಲವು ವಿಷಯಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಹೀಗಾಗಿ ಕಾಲೇಜು ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

   English summary
   Kodagu: FIR has been filed against the private dental clinic in Virajpet for violationg covid-19 guidelines. Read on.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X