ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು; ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದೇಕೆ?

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜೂನ್ 16; ಮಳೆಗಾಲ ಆರಂಭವಾಗಿದ್ದು, ರಸ್ತೆಗಳಿಗೆ ಹಾನಿಯಾಗುವಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಭಾರೀ ವಾಹನಗಳ ಸಂಚಾರವನ್ನು ಕೊಡಗಿನಲ್ಲಿ ನಿರ್ಬಂಧಿಸಲಾಗಿದೆ.

Recommended Video

Weather Report - ಧಾರಾಕಾರ ಮಳೆ RED AlERT ಘೋಷಣೆ ಮಾಡಿದ ಹವಾಮಾನ ಇಲಾಖೆ | Oneindia Kannada

ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ತೀರ್ಮಾನವನ್ನು ಜಿಲ್ಲಾಡಳಿತ ಕೈಗೊಂಡಿದೆ.

ಕೊಡಗು: ಪ್ರವಾಹ ಹಾಗೂ ಭೂ ಕುಸಿತ ಸ್ಥಳ ಗುರುತಿಸಿದ ಜಿಲ್ಲಾಡಳಿತಕೊಡಗು: ಪ್ರವಾಹ ಹಾಗೂ ಭೂ ಕುಸಿತ ಸ್ಥಳ ಗುರುತಿಸಿದ ಜಿಲ್ಲಾಡಳಿತ

ಜೂನ್ 23 ರಿಂದ ಆಗಸ್ಟ್ 16ರವರೆಗೆ ಭಾರೀ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುವುದರಿಂದ ಈ ತೀರ್ಮಾನ ಮಾಡಲಾಗಿದೆ.

ಕೊಡಗು; ಬಿರುಸಿನ ಮಳೆ, ಮಂಜಿನ ನಗರಿಗೆ ಆವರಿಸಿದ ಥಂಡಿ ಕೊಡಗು; ಬಿರುಸಿನ ಮಳೆ, ಮಂಜಿನ ನಗರಿಗೆ ಆವರಿಸಿದ ಥಂಡಿ

Kodagu Heavy Vehicles Movement Banned

ಸಾರ್ವಜನಿಕರ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆಜಿ ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‌ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್‍, ಶಿಪ್ ಕಾರ್ಗೋ ಕಂಟೈನರ್ಸ್ ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ.

ಕೊಡಗು; ಗಜಗಿರಿ ಬೆಟ್ಟದಲ್ಲಿ ಇಂಗು ಗುಂಡಿ ಮುಚ್ಚಿದ ಅರಣ್ಯ ಇಲಾಖೆ ಕೊಡಗು; ಗಜಗಿರಿ ಬೆಟ್ಟದಲ್ಲಿ ಇಂಗು ಗುಂಡಿ ಮುಚ್ಚಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿದೆ. ಈ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ತಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಪ್ರಾರಂಭವಾಗಿರುವುದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಭಾರೀ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುವುದರಿಂದ ಲಘು ವಾಹನಗಳು, ಬಸ್‌ಗಳು ಹಾಗೂ 10 ಟನ್ ತೂಕದೊಳಗಿನ ಸರಕು ವಾಹನಗಳನ್ನು ಹೊರತುಪಡಿಸಿ ಉಳಿದ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

Kodagu Heavy Vehicles Movement Banned

ಆದರೆ ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‌ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಈ ಸಂಬಂಧ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಕೊಡಗು ಜಿಲ್ಲೆಯ ಮುಖಾಂತರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು ಮತ್ತು ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

English summary
Kodagu district administration banned heavy vehicles movement in district from June 23 to August 26, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X