ಕೊಡಗು: ಕಳೆದ ವರ್ಷದ ದಾಖಲೆ ಮುರಿದ ಈ ಬಾರಿಯ ಮಳೆ
ಮಡಿಕೇರಿ, ಜೂನ್ 06; ಪೂರ್ವ ಮುಂಗಾರು, ನೈಋತ್ಯ ಮುಂಗಾರು ಮಳೆ ಕೊಡಗು ಜಿಲ್ಲೆಯ ಉತ್ತಮವಾಗಿ ಸುರಿಯುತ್ತಿದೆ. ಈ ಮಳೆ ಕಳೆದ ವರ್ಷದ ದಾಖಲೆಯನ್ನು ಮುರಿದಿದೆ. ಕಳೆದ ವರ್ಷ ಜನವರಿಂದ ಜೂನ್ ತನಕ 179.86 ಮೀ. ಮೀ. ಮಳೆಯಾಗಿತ್ತು.
ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಯ ಅವಧಿಯಲ್ಲಿ ಸರಾಸರಿ 1.43 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 360.16 ಮಿ. ಮೀ. ಮಳೆಯಾಗಿದೆ. ಈ ಮೂಲಕ ಮಳೆ ಕಳೆದ ವರ್ಷದ ದಾಖಲೆ ಮುರಿದಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಸುರಿದ ಸರಾಸರಿ ಮಳೆ 4.05 ಮಿ. ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 500.82 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 262.12 ಮಿ. ಮೀ. ಮಳೆಯಾಗಿತ್ತು.
ವಿರಾಜಪೇಟೆ ಸುರಿದ ಸರಾಸರಿ ಮಳೆ 1.40 ಮಿ. ಮೀ. ಆಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 304.05 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 122.51 ಮಿ. ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆಯಾಗಿಲ್ಲ. ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆ 348.77 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 141.49 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ಸುರಿದ ಮಳೆ 0.30 ಮಿ. ಮೀ.. ತಾಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 285.65 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 136.86 ಮಿ. ಮೀ. ಮಳೆಯಾಗಿತ್ತು ಎಂದು ಅಂಕಿ ಅಂಶ ಹೇಳುತ್ತದೆ.
ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ 1.40 ಮಿ. ಮೀ. ಮಳೆಯಾಗಿದೆ. ತಾಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 361.50 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 236.30 ಮಿ. ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ಮಡಿಕೇರಿ 0.40, ನಾಪೋಕ್ಲು 15.80, ವಿರಾಜಪೇಟೆ 2.80, ಸೋಮವಾರಪೇಟೆ 1.20, ಕುಶಾಲನಗರ 2.80 ಮಿ. ಮೀ.ಮಳೆಯಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಹಾರಂಗಿ ಡ್ಯಾಂ ನೀರಿನ ಮಟ್ಟ: ಕೊಡಗು ಜಿಲ್ಲಾಡಳಿತದ ಮಾಹಿತಿಯಂತೆ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2824.97 ಅಡಿಗಳು.
ಕಳೆದ ವರ್ಷ ಇದೇ ದಿನ 2819.16 ಅಡಿ ನೀರಿನ ಸಂಗ್ರಹವಿತ್ತು. ಡ್ಯಾಂಗೆ ಇಂದಿನ ನೀರಿನ ಒಳಹರಿವು 295 ಕ್ಯುಸೆಕ್, ಕಳೆದ ವರ್ಷ ಇದೇ ದಿನ 46 ಕ್ಯುಸೆಕ್ ಒಳಹರಿವು ಇತ್ತು. ಹೊರ ಹರಿವು ನದಿಗೆ 200 ಕ್ಯುಸೆಕ್, ನಾಲೆಗೆ 40 ಕ್ಯುಸೆಕ್.
ನೈಋತ್ಯ ಮುಂಗಾರು ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಯಾವುದಾದರೂ ನೆರೆ ಹಾವಳಿಯಂತಹ ಪ್ರಕೃತಿ ವಿಕೋಪಗಳು ಸಂಭವಿಸಿದರೆ ಸಾರ್ವಜನಿಕರ ಸಹಾಯಕ್ಕೆ ಧಾವಿಸಲು ಜಿಲ್ಲಾ ಪೊಲೀಸ್ ಇಲಾಖೆ ಸಿದ್ಧವಾಗಿದೆ.
ಡಿಎಆರ್ ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಉಪ ವಿಭಾಗಗಳ ತಲಾ 15 ಸಿಬ್ಬಂದಿಗಳನ್ನೊಳಗೊಂಡ 4 ವಿಪತ್ತು ನಿರ್ವಹಣಾ ತಂಡವನ್ನು ರಚನೆ ಮಾಡಲಾಗಿದೆ. ಈ ತಂಡಗಳು ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ರಕ್ಷಣಾ ಕಾರ್ಯಾಚರಣೆಯ ಅಭ್ಯಾಸವನ್ನು ನಡೆಸಿದರು.
2023ರಲ್ಲಿ ನೈಋತ್ಯ ಮುಂಗಾರು ಕೈಕೊಟ್ಟ ಪರಿಣಾಮ ಕೊಡಗು ಜಿಲ್ಲೆಯಲ್ಲಿಯೂ ಬರ ಆವರಿಸಿತ್ತು. ಮಡಿಕೇರಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಸಹ ತೊಂದರೆ ಉಂಟಾಗಿತ್ತು. ರಾಜ್ಯದ ಜೀವನದಿ ಕಾವೇರಿ ನೀರಿಲ್ಲದೇ ಬತ್ತಿ ಹೋಗಿತ್ತು. ಪೂರ್ವ ಮುಂಗಾರು ಮಳೆಯು ಉತ್ತಮವಾಗಿ ಸುರಿದ ಕಾರಣ ಕಾವೇರಿ ನದಿಗೆ ಜೀವಕಳೆ ಬಂದಿದೆ.












Click it and Unblock the Notifications