ಕಳೆದ ವರ್ಷಕ್ಕೆ ಹೋಲಿಕೆ, ಕೊಡಗಿನಲ್ಲಿ ಮಳೆ ಸ್ವಲ್ಪ ಇಳಿಕೆ
ಮಡಿಕೇರಿ ಆ.27: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 4.97 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1859.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1961.54 ಮಿ.ಮೀ ಮಳೆಯಾಗಿತ್ತು.
Recommended Video
ಮಡಿಕೇರಿ ತಾಲ್ಲೂಕಿನಲ್ಲಿ ಆಗಸ್ಟ್ 26ಕ್ಕೆ ಅನ್ವಯವಾಗುವಂತೆ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 6.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2623.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2628.54 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಆಗಸ್ಟ್ 26ಕ್ಕೆ ಅನ್ವಯವಾಗುವಂತೆ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 5.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1697.38 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1958.02 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಆಗಸ್ಟ್ 26ಕ್ಕೆ ಅನ್ವಯವಾಗುವಂತೆ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 2.97 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1258.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1298.06 ಮಿ.ಮೀ. ಮಳೆಯಾಗಿತ್ತು.
ಹಾರಂಗಿ ಜಲಾಶಯದ ನೀರಿನ ಮಟ್ಟ (26-08-2020) ವರದಿ
************************************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858 ಅಡಿಗಳು, ಕಳೆದ ವರ್ಷ ಇದೇ ದಿನ 2858 ಅಡಿ. ಇಂದಿನ ನೀರಿನ ಒಳಹರಿವು 1031 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2363 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 800, ನಾಲೆಗೆ 825. ಕಳೆದ ವರ್ಷ ಇದೇ ದಿನ ನದಿಗೆ 1600, ನಾಲೆಗೆ 1050 ಕ್ಯುಸೆಕ್.
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಯದಲ್ಲಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ- 24*7 ಕಂಟ್ರೋಲ್ ರೂಂ: 08272-221077, ವಾಟ್ಸಾಪ್ ಸಂಖ್ಯೆ: 8550001077. ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೊಡಗು ಜಿಲ್ಲೆ. (ಮಾಹಿತಿ ಕೃಪೆ: ವಾರ್ತಾ ಇಲಾಖೆ)













Click it and Unblock the Notifications