ಮಡಿಕೇರಿಯಲ್ಲಿ 24 ಗಂಟೆಯಲ್ಲಿ 80.42 ಮಿ. ಮೀ. ಮಳೆ
ಮಡಿಕೇರಿ, ಜುಲೈ 17: ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 80.42 ಮಿ. ಮೀ. ಮಳೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಜುಲೈ 19ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ವರ್ಷ ಇದೇ ದಿನ 9.57 ಮಿ. ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯ ತನಕ ಸುರಿದ ಮಳೆಯ ಪ್ರಮಾಣ 1268.50 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 584.78 ಮಿ. ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತದ ಅಂಕಿ ಸಂಖ್ಯೆಗಳು ಹೇಳಿವೆ.
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 106.43 ಮಿ. ಮೀ., ಕಳೆದ ವರ್ಷ ಇದೇ ದಿನ 28.98 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1845.64 ಮಿ. ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 1118.09 ಮಿ. ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 56.30 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ದಿನ 1.40 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1277.55 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 466.11 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 66.34 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ದಿನ 5.89 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1199.03 ಮಿ. ಮೀ. ಮತ್ತು ಕಳೆದ ವರ್ಷ ಇದೇ ಅವಧಿಯಲ್ಲಿ 400.33 ಮಿ. ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 119.55 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ದಿನ 6.20 ಮಿ. ಮೀ. ಮಳೆ ಸುರಿದಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1155.56 ಮಿ. ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 491.01 ಮಿ. ಮೀ. ಮಳೆಯಾಗಿತ್ತು.
ಕುಶಾಲನಗರ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 53.50 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.40 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 864.70 ಮಿ. ಮೀ. ಮತ್ತು ಕಳೆದ ವರ್ಷ ಇದೇ ಅವಧಿಯಲ್ಲಿ 448.35 ಮಿ. ಮೀ. ಮಳೆಯಾಗಿತ್ತು.
ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ. ಮಡಿಕೇರಿ ಕಸಬಾ 97, ನಾಪೋಕ್ಲು 70.20, ಸಂಪಾಜೆ 86.50, ಭಾಗಮಂಡಲ 172, ವಿರಾಜಪೇಟೆ 52, ಅಮ್ಮತ್ತಿ 60.60, ಹುದಿಕೇರಿ 90.90, ಶ್ರೀಮಂಗಲ 73.40, ಪೊನ್ನಂಪೇಟೆ 60, ಬಾಳೆಲೆ 41.06, ಸೋಮವಾರಪೇಟೆ ಕಸಬಾ 96.20, ಶನಿವಾರಸಂತೆ 78, ಶಾಂತಳ್ಳಿ 230, ಕೊಡ್ಲಿಪೇಟೆ 74, ಕುಶಾಲನಗರ 38, ಸುಂಟಿಕೊಪ್ಪ 69 ಮಿ. ಮೀ. ಮಳೆಯಾಗಿದೆ.
ಕೊಡಗು ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2852.86 ಅಡಿಗಳು. ಕಳೆದ ವರ್ಷ ಇದೇ ದಿನ 2843.64 ಅಡಿಗಳ ನೀರಿತ್ತು. ನೀರಿನ ಒಳಹರಿವು 12,827 ಕ್ಯುಸೆಕ್, ಕಳೆದ ವರ್ಷ ಇದೇ ದಿನ 1162 ಕ್ಯುಸೆಕ್ ಒಳಹರಿವು ಇತ್ತು. ಹೊರ ಹರಿವು ನದಿಗೆ 18750 ಕ್ಯುಸೆಕ್.












Click it and Unblock the Notifications