ಕೊಡಗು ಜಿಲ್ಲೆಯಲ್ಲಿ 24 ಗಂಟೆಯಲ್ಲಿ 92 ಮಿ. ಮೀ. ಮಳೆ
ಮಡಿಕೇರಿ, ಜೂನ್ 27: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 92.22 ಮಿ. ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಕಳೆದ ವರ್ಷ ಇದೇ ದಿನ 3.91 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆ ಜಿಲ್ಲೆಯಲ್ಲಿ ಸುರಿದ ಮಳೆ 736.67 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 238.53 ಮಿ. ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತ ಹೇಳಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ಮಳೆ 160.07 ಮಿ. ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1083.85 ಮಿ. ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 417.25 ಮಿ. ಮೀ. ಮಳೆಯಾಗಿತ್ತು. ಕೊಡಗಿನಲ್ಲಿನ ಮಳೆ ಪರಿಣಾಮ ಕಾವೇರಿ ನದಿ ತುಂಬಿ ಹರಿಯುತ್ತಿದೆ.
ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 103.50 ಮಿ. ಮೀ. ಆಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 726.45 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 169.41 ಮಿ.ಮೀ. ಮಳೆಯಾಗಿತ್ತು. ಭಾರೀ ಮಳೆಯ ಕಾರಣ ಭಾಗಮಂಡಲ ಜಲಾವೃತವಾಗಿದೆ.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 101.57 ಮಿ. ಮೀ. ಆಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 740.36 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 168.29 ಮಿ. ಮೀ. ಮಳೆಯಾಗಿತ್ತು. ಗುರುವಾರ ಕೊಡಗು ಜಿಲ್ಲೆಯಲ್ಲಿ ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 48.45 ಮಿ. ಮೀ. ಆಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 565.26 ಮಿ. ಮೀ.. ಕಳೆದ ವರ್ಷ ಇದೇ ಅವಧಿಯಲ್ಲಿ 182.71 ಮಿ. ಮೀ. ಮಳೆಯಾಗಿತ್ತು. ಗುರುವಾರ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು.
ಇನ್ನು ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ ಮಳೆ 47.50 ಮಿ. ಮೀ.. ಜನವರಿಯಿಂದ ಇಲ್ಲಿಯವರೆಗಿನ ಮಳೆ 567.4 ಮಿ. ಮೀ.. ಕಳೆದ ವರ್ಷ ಇದೇ ಅವಧಿಯಲ್ಲಿ 255 ಮಿ. ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ. ಮಡಿಕೇರಿ ಕಸಬಾ 158.60, ನಾಪೋಕ್ಲು 131.20, ಸಂಪಾಜೆ 138.50, ಭಾಗಮಂಡಲ 212, ವಿರಾಜಪೇಟೆ 106, ಅಮ್ಮತ್ತಿ 101, ಹುದಿಕೇರಿ 122, ಶ್ರೀಮಂಗಲ 88.20, ಪೊನ್ನಂಪೇಟೆ 120, ಬಾಳೆಲೆ 76.10, ಸೋಮವಾರಪೇಟೆ ಕಸಬಾ 29.80, ಶನಿವಾರಸಂತೆ 31, ಶಾಂತಳ್ಳಿ 93, ಕೊಡ್ಲಿಪೇಟೆ 40, ಕುಶಾಲನಗರ 31, ಸುಂಟಿಕೊಪ್ಪ 64 ಮಿ.ಮೀ. ಮಳೆಯಾಗಿದೆ.
ಹಾರಂಗಿ ಡ್ಯಾಂ ನೀರಿನ ಮಟ್ಟ: ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು 3 ಸಾವಿರ ಕ್ಯುಸೆಕ್ ದಾಟಿದೆ.
ಕೊಡಗು ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2832.65 ಅಡಿಗಳು. ಕಳೆದ ವರ್ಷ ಇದೇ ದಿನ 2819.88 ಅಡಿಗಳ ನೀರಿನ ಸಂಗ್ರಹವಿತ್ತು. ಹಾರಂಗಿಯಲ್ಲಿ ಬಿದ್ದ ಮಳೆ 27.40 ಮಿ.ಮೀ., ಒಳಹರಿವು 1425 ಕ್ಯುಸೆಕ್, ಹೊರ ಹರಿವು ನದಿಗೆ 200 ಕ್ಯುಸೆಕ್.
ಕೊಡಗು ಜಿಲ್ಲೆಯಲ್ಲಿ ಮಳೆ ಉತ್ತಮವಾಗಿದ್ದು, ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಗತಿಯಲ್ಲಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ನಾಟಿ ಕಾರ್ಯ ಕೈಗೊಳ್ಳಲಾಗುತ್ತದೆ.
ಮುಸುಕಿನ ಜೋಳದ ಬಿತ್ತನೆ ಕಾರ್ಯವು ಪ್ರಾರಂಭಗೊಂಡಿದ್ದು, ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಅಂಗಡಿಗಳಲ್ಲಿ ದಾಸ್ತಾನು ಮಾಡಲಾಗಿದೆ.












Click it and Unblock the Notifications