ಕೊಡಗು ಜಿಲ್ಲೆಯಲ್ಲಿ ತಗ್ಗಿದ ವಾರ್ಷಿಕ ಮಳೆ ಪ್ರಮಾಣ
ಮಡಿಕೇರಿ ಜೂ.03: ಅವಧಿಗೆ ಮುನ್ನ ಮುಂಗಾರು ಮಾರುತ ಪ್ರವೇಶದಿಂದಾಗಿ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದರೂ, ಮುಂಗಾರು ಪೂರ್ಣ ಪ್ರಮಾಣದಲ್ಲಿ ರಾಜ್ಯವನ್ನು ವ್ಯಾಪಿಸಿಲ್ಲ. ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 4.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.10 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 451.21 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 479.82 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.47 ಮಿ.ಮೀ. ಕಳೆದ ವರ್ಷ ಇದೇ ದಿನ 0.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 590.97 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 677.79 ಮಿ.ಮೀ. ಮಳೆಯಾಗಿತ್ತು.

ಮುಂದಿನ ಐದು ದಿನಗಳಲ್ಲಿ ಭಾರಿ ಗಾಳಿ ಮಳೆ
ಮುಂದಿನ ಐದು ದಿನಗಳಲ್ಲಿ ಭಾರಿ ಗಾಳಿ ಮಳೆ ಜೊತೆ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯವಾಗಿ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.55 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 389.29 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 437.19 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.93 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 373.38 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 324.49 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 0.20, ನಾಪೋಕ್ಲು 10.20, ಸಂಪಾಜೆ 1, ಭಾಗಮಂಡಲ 2.50, ವಿರಾಜಪೇಟೆ ಕಸಬಾ 21.40, ಸೋಮವಾರಪೇಟೆ ಕಸಬಾ 35.40, ಕುಶಾಲನಗರ 6.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2850.17 ಅಡಿಗಳು. ಕಳೆದ ವರ್ಷ ಇದೇ ದಿನ 2822.27 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.40 ಮಿ.ಮೀ., ಇಂದಿನ ನೀರಿನ ಒಳಹರಿವು 230 ಕ್ಯುಸೆಕ್, ಕಳೆದ ವರ್ಷ ಇದೇ ದಿನ 140 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 20 ಕ್ಯುಸೆಕ್. ನಾಲೆಗೆ 25 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ
ಒಂದೇ ಸಮನೆ ಮಳೆ ಸುರಿದು ಪ್ರವಾಹ ಏರ್ಪಟ್ಟರೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಪಡೆ ಸಜ್ಜಾಗಬೇಕು. ಗುಡ್ಡ ಕುಸಿತ, ರಸ್ತೆ ಕುಸಿತವಾದರೆ ಲೋಕೋಪಯೋಗಿ ಇಲಾಖೆ, ವಿದ್ಯುತ್ ಸಮಸ್ಯೆಯಾದರೆ ಸೆಸ್ಕ್, ಮರಬಿದ್ದರೆ ಅರಣ್ಯ ಇಲಾಖೆ, ಆಸ್ತಿಪಾಸ್ತಿಗೆ ಹಾನಿಯಾದರೆ ಕಂದಾಯ ಇಲಾಖೆ ಹೀಗೆ ಎಲ್ಲ ಇಲಾಖೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಲೇ ಬೇಕಾಗುತ್ತದೆ.
ಪ್ರಾಕೃತಿಕ ವಿಕೋಪ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಗಿನಿಂದಲೇ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ಜನರು ಹೆಚ್ಚಿನ ಮಾಹಿತಿಯನ್ನು 08272-221077, 08272-221088 ಹಾಗೂ 08272-221099 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications