ಕೊಡಗಿನ ಹೋಬಳಿವಾರು ಮಳೆ ವಿವರ, ಹಾರಂಗಿ ನೀರಿನ ಮಟ್ಟ ಎಷ್ಟು?
ಮಡಿಕೇರಿ, ಜೂನ್, 08: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 2.28 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.57 ಮಿ.ಮೀ. ಮಳೆಯಾಗಿದೆ. ವಿರಾಜಪೇಟೆ, ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.16 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.27 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 6.4, ಭಾಗಮಂಡಲ 2.4, ಸಂಪಾಜೆ 13.5, ಅಮ್ಮತ್ತಿ 0.1, ಕುಶಾಲನಗರ 1.2, ಶಾಂತಳ್ಳಿ 4.4, ಸುಂಟಿಕೊಪ್ಪ 2 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (07-06-2021) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2823.06 ಅಡಿಗಳು. ಇಂದಿನ ನೀರಿನ ಒಳಹರಿವು 214 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 80 ಕ್ಯುಸೆಕ್.
ಕೊರೊನಾದ ನಡುವೆಯೂ ಮುಂಗಾರು ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ನಿರ್ದೇಶನ ನೀಡಿದ್ದಾರೆ. ಒಂದೇ ಸಮನೆ ಮಳೆ ಸುರಿದು ಪ್ರವಾಹ ಏರ್ಪಟ್ಟರೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಪಡೆ ಸಜ್ಜಾಗಬೇಕು. ಗುಡ್ಡ ಕುಸಿತ, ರಸ್ತೆ ಕುಸಿತವಾದರೆ ಲೋಕೋಪಯೋಗಿ ಇಲಾಖೆ, ವಿದ್ಯುತ್ ಸಮಸ್ಯೆಯಾದರೆ ಸೆಸ್ಕ್, ಮರಬಿದ್ದರೆ ಅರಣ್ಯ ಇಲಾಖೆ, ಆಸ್ತಿಪಾಸ್ತಿಗೆ ಹಾನಿಯಾದರೆ ಕಂದಾಯ ಇಲಾಖೆ ಹೀಗೆ ಎಲ್ಲ ಇಲಾಖೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಲೇ ಬೇಕಾಗುತ್ತದೆ.
ಪ್ರಾಕೃತಿಕ ವಿಕೋಪ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಗಿನಿಂದಲೇ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ಜನರು ಹೆಚ್ಚಿನ ಮಾಹಿತಿಯನ್ನು 08272-221077, 08272-221088 ಹಾಗೂ 08272-221099 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.












Click it and Unblock the Notifications