ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲೆಯಲ್ಲಿ ಸತತ ಮಳೆ ನಡುವೆ ತಗ್ಗಿದ ಸರಾಸರಿ ಪ್ರಮಾಣ

|
Google Oneindia Kannada News

ಮಡಿಕೇರಿ ಜೂ.24: ಮುಂಗಾರು ಮಾರುತ ಪ್ರವೇಶದಿಂದಾಗಿ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಪೂರ್ಣ ಪ್ರಮಾಣದಲ್ಲಿ ಮುಂಗಾರು ರಾಜ್ಯವನ್ನು ವ್ಯಾಪಿಸಿಲ್ಲ. ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ತಗ್ಗಿದ ವಾರ್ಷಿಕ ಮಳೆ ಪ್ರಮಾಣ ತಗ್ಗಿದ್ದರೂ ನಿರಂತರ ಮಳೆಯಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದ ಲೆಕ್ಕಾಚಾರದಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 11.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.79 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 560.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 931.05 ಮಿ.ಮೀ ಮಳೆಯಾಗಿತ್ತು.

ಕೊಡಗಿನಲ್ಲಿ ರಸಗೊಬ್ಬರ ಕೊರತೆ: ಮಳೆ ಬಂದರೂ ಆರಂಭವಾಗದ ಕೃಷಿ ಚಟುವಟಿಕೆ ಕೊಡಗಿನಲ್ಲಿ ರಸಗೊಬ್ಬರ ಕೊರತೆ: ಮಳೆ ಬಂದರೂ ಆರಂಭವಾಗದ ಕೃಷಿ ಚಟುವಟಿಕೆ

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.70 ಮಿ.ಮೀ. ಕಳೆದ ವರ್ಷ ಇದೇ ದಿನ 2.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 752.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1358.13 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 12, ನಾಪೋಕ್ಲು 20.80, ಸಂಪಾಜೆ 5, ಭಾಗಮಂಡಲ 21, ವಿರಾಜಪೇಟೆ ಕಸಬಾ 20, ಹುದಿಕೇರಿ 11, ಶ್ರೀಮಂಗಲ 8.60, ಪೊನ್ನಂಪೇಟೆ 10, ಅಮ್ಮತಿ 28.50, ಬಾಳೆಲೆ 10, ಸೋಮವಾರಪೇಟೆ ಕಸಬಾ 3.60, ಶನಿವಾರಸಂತೆ 5, ಶಾಂತಳ್ಳಿ 13, ಕೊಡ್ಲಿಪೇಟೆ 4.20, ಕುಶಾಲನಗರ 0.40, ಸುಂಟಿಕೊಪ್ಪ 3 ಮಿ.ಮೀ.ಮಳೆಯಾಗಿದೆ.

ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ

ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.68 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 484.13 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 814.93 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.86 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 443.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 620.09 ಮಿ.ಮೀ. ಮಳೆಯಾಗಿತ್ತು.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ ಜೂನ್ 24 ರಂತೆ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2852.67 ಅಡಿಗಳು. ಕಳೆದ ವರ್ಷ ಇದೇ ದಿನ 2838.93 ಅಡಿಗಳು. ಇಂದಿನ ನೀರಿನ ಒಳಹರಿವು 546 ಕ್ಯುಸೆಕ್, ಕಳೆದ ವರ್ಷ ಇದೇ ದಿನ 723 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

ಕೊಡಗಿನ ಜಲಪಾತಗಳತ್ತ ತೆರಳುವ ಮುನ್ನ ಹುಷಾರ್!
ಹಾರಂಗಿ ಜಲಾಶಯದ ನೀರಿನ ಮಟ್ಟ ಜೂನ್ 23 ರಂತೆ

ಹಾರಂಗಿ ಜಲಾಶಯದ ನೀರಿನ ಮಟ್ಟ ಜೂನ್ 23 ರಂತೆ

ಹಾರಂಗಿ ಜಲಾಶಯದ ನೀರಿನ ಮಟ್ಟ ಜೂನ್ 23 ರಂತೆ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2852.49 ಅಡಿಗಳು. ಕಳೆದ ವರ್ಷ ಇದೇ ದಿನ 2838.42 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.40 ಮಿ.ಮೀ., ಇಂದಿನ ನೀರಿನ ಒಳಹರಿವು 675 ಕ್ಯುಸೆಕ್, ಕಳೆದ ವರ್ಷ ಇದೇ ದಿನ 940 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

ಐದು ದಿನಗಳಲ್ಲಿ ಭಾರಿ ಗಾಳಿ ಮಳೆ

ಐದು ದಿನಗಳಲ್ಲಿ ಭಾರಿ ಗಾಳಿ ಮಳೆ

ಮುಂದಿನ ಐದು ದಿನಗಳಲ್ಲಿ ಭಾರಿ ಗಾಳಿ ಮಳೆ ಜೊತೆ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯವಾಗಿ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ರೆಡ್ ಅಲರ್ಟ್ ಮುಂದುವರೆದಿದೆ.

ಒಂದೇ ಸಮನೆ ಮಳೆ ಸುರಿದು ಪ್ರವಾಹ ಏರ್ಪಟ್ಟರೆ

ಒಂದೇ ಸಮನೆ ಮಳೆ ಸುರಿದು ಪ್ರವಾಹ ಏರ್ಪಟ್ಟರೆ

ಒಂದೇ ಸಮನೆ ಮಳೆ ಸುರಿದು ಪ್ರವಾಹ ಏರ್ಪಟ್ಟರೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಪಡೆ ಸಜ್ಜಾಗಬೇಕು. ಗುಡ್ಡ ಕುಸಿತ, ರಸ್ತೆ ಕುಸಿತವಾದರೆ ಲೋಕೋಪಯೋಗಿ ಇಲಾಖೆ, ವಿದ್ಯುತ್ ಸಮಸ್ಯೆಯಾದರೆ ಸೆಸ್ಕ್, ಮರಬಿದ್ದರೆ ಅರಣ್ಯ ಇಲಾಖೆ, ಆಸ್ತಿಪಾಸ್ತಿಗೆ ಹಾನಿಯಾದರೆ ಕಂದಾಯ ಇಲಾಖೆ ಹೀಗೆ ಎಲ್ಲ ಇಲಾಖೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಲೇ ಬೇಕಾಗುತ್ತದೆ.

ಪ್ರಾಕೃತಿಕ ವಿಕೋಪ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಗಿನಿಂದಲೇ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ಜನರು ಹೆಚ್ಚಿನ ಮಾಹಿತಿಯನ್ನು 08272-221077, 08272-221088 ಹಾಗೂ 08272-221099 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

English summary
Monsoon Rain in Kodagu: Heavy to moderate rainfall recorded in Kodagu district for the past one week, Here is Taluk/Hobli level rainfall data recorded as on June 24, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X