ಕೊಡಗು ಜಿಲ್ಲೆಯಲ್ಲಿ ತಗ್ಗಿದ ಮಳೆ, ತಾಲೂಕುವಾರು ವಿವರ

ಮಡಿಕೇರಿ ಜೂ.28: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿದಿಲ್ಲ. ಮಲೆನಾಡು, ಕರಾವಳಿ ಭಾಗದಲ್ಲೂ ಮಳೆ ಪ್ರಮಾಣ ತಗ್ಗುತ್ತಿದೆ. ಪೂರ್ಣ ಪ್ರಮಾಣದಲ್ಲಿ ಮುಂಗಾರು ರಾಜ್ಯವನ್ನು ಆವರಿಸಲು ಇನ್ನಷ್ಟು ಸಮಯ ಹಿಡಿಯಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆ ಸುರಿಯುತ್ತಿದ್ದು, ಸರಾಸರಿ ಮಳೆ ಪ್ರಮಾಣ ತಗ್ಗಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ ಮಳೆ 17.93 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.59 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 648.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 941.28 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.15 ಮಿ.ಮೀ. ಕಳೆದ ವರ್ಷ ಇದೇ ದಿನ 0.98 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 879.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1379.24 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕು ಸರಾಸರಿ ಮಳೆ

ಸೋಮವಾರಪೇಟೆ ತಾಲೂಕು ಸರಾಸರಿ ಮಳೆ

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.47 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 483.83 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 625.33 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.18 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 581.41 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 819.27 ಮಿ.ಮೀ. ಮಳೆಯಾಗಿತ್ತು.

ಹಾರಂಗಿ ಜಲಾಶಯದ ನೀರಿನ ಮಟ್ಟ (28-06-2022) ವರದಿ

ಹಾರಂಗಿ ಜಲಾಶಯದ ನೀರಿನ ಮಟ್ಟ (28-06-2022) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2853.37 ಅಡಿಗಳು. ಕಳೆದ ವರ್ಷ ಇದೇ ದಿನ 2840.50 ಅಡಿಗಳು. ಇಂದಿನ ನೀರಿನ ಒಳಹರಿವು 548 ಕ್ಯುಸೆಕ್, ಕಳೆದ ವರ್ಷ ಇದೇ ದಿನ 579 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

ಹಾರಂಗಿ ಜಲಾಶಯದ ನೀರಿನ ಮಟ್ಟ (27-06-2022) ವರದಿ

ಹಾರಂಗಿ ಜಲಾಶಯದ ನೀರಿನ ಮಟ್ಟ (27-06-2022) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2853.19 ಅಡಿಗಳು. ಕಳೆದ ವರ್ಷ ಇದೇ ದಿನ 2840.11 ಅಡಿಗಳು. ಇಂದಿನ ನೀರಿನ ಒಳಹರಿವು 522 ಕ್ಯುಸೆಕ್, ಕಳೆದ ವರ್ಷ ಇದೇ ದಿನ 627 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಒಂದೇ ಸಮನೆ ಮಳೆ ಸುರಿದು ಪ್ರವಾಹ ಏರ್ಪಟ್ಟರೆ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಪಡೆ ಸಜ್ಜಾಗಬೇಕು. ಗುಡ್ಡ ಕುಸಿತ, ರಸ್ತೆ ಕುಸಿತವಾದರೆ ಲೋಕೋಪಯೋಗಿ ಇಲಾಖೆ, ವಿದ್ಯುತ್ ಸಮಸ್ಯೆಯಾದರೆ ಸೆಸ್ಕ್, ಮರಬಿದ್ದರೆ ಅರಣ್ಯ ಇಲಾಖೆ, ಆಸ್ತಿಪಾಸ್ತಿಗೆ ಹಾನಿಯಾದರೆ ಕಂದಾಯ ಇಲಾಖೆ ಹೀಗೆ ಎಲ್ಲ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸಲೇ ಬೇಕಾಗುತ್ತದೆ.


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+