ಕೊಡಗು ಜಿಲ್ಲೆಯಲ್ಲಿ ತಗ್ಗಿದ ವಾರ್ಷಿಕ ವಾಡಿಕೆ ಮಳೆ ಪ್ರಮಾಣ

ಮಡಿಕೇರಿ ಸೆ. 10: ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 13.15 ಮಿ.ಮೀ.ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.10 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2260.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2089.48 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.50 ಮಿ.ಮೀ. ಕಳೆದ ವರ್ಷ ಇದೇ ದಿನ 5.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3145.61 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2881.92 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.08 ಮಿ.ಮೀ. ಕಳೆದ ವರ್ಷ ಇದೇ ದಿನ 0.72 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1829.29 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1963.94 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.87 ಮಿ.ಮೀ. ಕಳೆದ ವರ್ಷ ಇದೇ ದಿನ 24.27 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1807.59 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1422.58 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ದಾಖಲಾಗಿರುವ ಮಳೆ

ಹೋಬಳಿವಾರು ದಾಖಲಾಗಿರುವ ಮಳೆ

ಕೊಡಗು ಜಿಲ್ಲೆಯ ವಿವಿಧ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 14.60, ನಾಪೊಕ್ಲು 5.80, ಸಂಪಾಜೆ 5, ಭಾಗಮಂಡಲ 16.60, ವಿರಾಜಪೇಟೆ ಕಸಬಾ 7, ಹುದಿಕೇರಿ 34.50, ಶ್ರೀಮಂಗಲ 21, ಪೊನ್ನಂಪೇಟೆ 32, ಅಮ್ಮತ್ತಿ 1, ಬಾಳೆಲೆ 13, ಸೋಮವಾರಪೇಟೆ ಕಸಬಾ 7.40, ಶನಿವಾರಸಂತೆ 11, ಶಾಂತಳ್ಳಿ 25, ಕೊಡ್ಲಿಪೇಟೆ 19.40, ಕುಶಾಲನಗರ 0.40, ಸುಂಟಿಕೊಪ್ಪ 2 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (09-09-2021) ವರದಿ

ಹಾರಂಗಿ ಜಲಾಶಯದ ನೀರಿನ ಮಟ್ಟ (09-09-2021) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.06 ಅಡಿಗಳು. ಕಳೆದ ವರ್ಷ ಇದೇ ದಿನ 2856.40 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 0.00, ಮಿ.ಮೀ., ಕಳೆದ ವರ್ಷ ಇದೇ ದಿನ 4.40 ಮಿ.ಮೀ., ಇಂದಿನ ನೀರಿನ ಒಳಹರಿವು 4535 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1054 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 5113 ಕ್ಯುಸೆಕ್, ನಾಲೆಗೆ 600 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 500 ಕ್ಯುಸೆಕ್, ನಾಲೆಗೆ 600 ಕ್ಯುಸೆಕ್.

 ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಮಾಹಿತಿ

ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಮಾಹಿತಿ

ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಮನೆ, ಬೆಳೆ ಹಾನಿಗೆ ಪರಿಹಾರ, ಜಾನುವಾರು ಹಾಗೂ ಮಾನವ ಪ್ರಾಣ ಹಾನಿಗೆ ಪರಿಹಾರ ವಿತರಿಸಲಾಗಿದೆಯೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಕಾಫಿ, ಕರಿಮೆಣಸು, ಅಡಿಕೆ ಮತ್ತಿತರ ಬೆಳೆ ಹಾನಿ ಸಂಬಂಧ ಮರು ಸಮೀಕ್ಷೆ ಮಾಡಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕಾಫಿ ಬೆಳೆ ಸಮೀಕ್ಷೆಯನ್ನು ಕೈಬಿಟ್ಟಿರುವುದು ಏಕೆ

ಕಾಫಿ ಬೆಳೆ ಸಮೀಕ್ಷೆಯನ್ನು ಕೈಬಿಟ್ಟಿರುವುದು ಏಕೆ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಟಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಹೈಸೊಡ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಕಾಫಿ ಬೆಳೆ ಸಮೀಕ್ಷೆಯನ್ನು ಕೈಬಿಟ್ಟಿರುವುದು ಏಕೆ ಎಂದು ಪ್ರಶ್ನಿಸಿದರು. ಸಮೀಕ್ಷೆ ಮಾಡಿ ಸೇರ್ಪಡೆ ಮಾಡುವಂತೆ ಶಾಸಕರು ಸೂಚಿಸಿದರು.

ಹಾಗೆಯೇ ಸಂಪಾಜೆ, ಪೆರಾಜೆ, ಚೆಂಬು, ಕರಿಕೆ ಭಾಗದಲ್ಲಿ ಧಾರಾಕಾರ ಮಳೆಯಿಂದ ಅಡಿಕೆ ಬೆಳೆಗೆ ಹಾನಿಯಾಗಿದ್ದು, ಸರ್ವೇ ಮಾಡಿ ಬೆಳೆ ಹಾನಿಯ ಮಾಹಿತಿ ಒದಗಿಸುವಂತೆ ಸೂಚಿಸಿದರು.

 ಸಮೀಕ್ಷೆ ಮಾಡಿ ಕೂಡಲೇ ವರದಿ ನೀಡಿ

ಸಮೀಕ್ಷೆ ಮಾಡಿ ಕೂಡಲೇ ವರದಿ ನೀಡಿ

ಈ ಕುರಿತು ಧ್ವನಿ ಗೂಡಿಸಿದ ಎಂ.ಪಿ.ಅಪ್ಪಚ್ಚುರಂಜನ್ ಅವರು ಗರ್ವಾಲೆ, ಮುಟ್ಲು, ಶಾಂತಳ್ಳಿ, ಮಕ್ಕಂದೂರು, ಗಾಳಿಬೀಡು ವ್ಯಾಪ್ತಿಯಲ್ಲಿ ಕಳೆದ ವಾರ ವ್ಯಾಪಕ ಮಳೆಯಾಗಿದ್ದು, ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಮಾಡಿ ಕೂಡಲೇ ವರದಿ ನೀಡುವಂತೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಕಳೆದ ನಾಲ್ಕು ವರ್ಷದಿಂದ ರೈತರು ಒಂದಲ್ಲ ಒಂದು ರೀತಿಯ ಪ್ರಾಕೃತಿಕ ವಿಕೋಪದಿಂದ ತೊಂದರೆಗೆ ಸಿಲುಕಿದ್ದರು. ಈ ಬಾರಿಯೂ ಸಹ ಬೆಳೆ ಹಾನಿಯಾಗಿದ್ದು, ಆದ್ದರಿಂದ ಸೂಕ್ತ ಪರಿಹಾರ ದೊರೆಯಬೇಕು ಎಂದು ಅವರು ಒತ್ತಾಯಿಸಿದರು. ಕಾಫಿ, ಅಡಿಕೆ, ಕರಿಮೆಣಸು ಬೆಳೆ ಸಂಬಂಧಿಸಿದಂತೆ ಮರು ಸರ್ವೇ ಆಗಬೇಕು ಎಂದರು.

ಪರಿಹಾರವನ್ನು ನಿಯಮಾನುಸಾರ ವಿತರಿಸಬೇಕು

ಪರಿಹಾರವನ್ನು ನಿಯಮಾನುಸಾರ ವಿತರಿಸಬೇಕು

ಕಳೆದ ಬಾರಿ ಪ್ರಾಕೃತಿಕ ವಿಕೋಪದಿಂದ ಕಟ್ಟಡ ದುರಸ್ತಿ ಸಂಬಂಧಿಸಿದಂತೆ ಅನುಮೋದನೆ ಪಡೆದಿರುವುದಕ್ಕೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಹೇಳಿದರು.

ಪರಿಹಾರವನ್ನು ನಿಯಮಾನುಸಾರ ವಿತರಿಸಬೇಕು, ಬಡವರಿಗೆ ಹಾಗೂ ಕೃಷಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಆವರು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಬೆಳೆ ಹಾನಿ ಹಾಗೂ ಮನೆ ಹಾನಿ ಸಂಬಂಧಿಸಿದಂತೆ ಬಡವರಿಗೆ ಪರಿಹಾರ ವಿತರಿಸಬೇಕು. ಭಾಗಶಃ ಹಾನಿಗೆ ತಮ್ಮ ಹಂತದಲ್ಲಿಯೇ ಪರಿಹಾರ ವಿತರಿಸಲು ಅಗತ್ಯ ಕ್ರಮ ವಹಿಸುವಂತೆ ತಹಶಿಲ್ದಾರರಿಗೆ ಸೂಚಿಸಿದರು.
ಮನೆ ಹಾನಿ ಹಾಗೂ ಬೆಳೆ ಹಾನಿ ಪರಿಹಾರ ಸಂಬಂಧ ದೂರುಗಳು ಕೇಳಿಬರದಂತೆ ಗಮನ ಹರಿಸಬೇಕು. ಪ್ರಸಕ್ತ ವರ್ಷದಲ್ಲಿ ರೂ.90 ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಮಾಹಿತಿ ನೀಡಲಾಗಿದ್ದು, ಇನ್ನೂ ಹಾನಿ ಆಗಿದ್ದಲ್ಲಿ ಮಾಹಿತಿ ಒದಗಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.

Recommended Video

      Chahal ಅವರನ್ನು ಕೈಬಿಡುವ ಹಿಂದಿನ ಅಸಲಿ ಕಾರಣ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+