ಕೊಡಗು ಜಿಲ್ಲೆಯ ತಾಲೂಕು, ಹೋಬಳಿವಾರು ಮಳೆ ವಿವರ
ಮಡಿಕೇರಿ ಸೆ.09: ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 10.10 ಮಿ.ಮೀ. ಕಳೆದ ವರ್ಷ ಇದೇ ದಿನ 48.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1965.86 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2419.61 ಮಿ.ಮೀ ಮಳೆಯಾಗಿತ್ತು.|
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.30 ಮಿ.ಮೀ. ಕಳೆದ ವರ್ಷ ಇದೇ ದಿನ 66.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2763.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3245.39 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.72 ಮಿ.ಮೀ. ಕಳೆದ ವರ್ಷ ಇದೇ ದಿನ 46.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1792.11 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2355.08 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 24.27 ಮಿ.ಮೀ. ಕಳೆದ ವರ್ಷ ಇದೇ ದಿನ 32.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1342.23 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1658.37 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 14, ನಾಪೋಕ್ಲು 5, ಸಂಪಾಜೆ 1, ಭಾಗಮಂಡಲ 1.20, ವಿರಾಜಪೇಟೆ ಕಸಬಾ 3.80, ಅಮ್ಮತ್ತಿ 0.50, ಸೋಮವಾರಪೇಟೆ ಕಸಬಾ 73.40, ಶಾಂತಳ್ಳಿ 8.20, ಕೊಡ್ಲಿಪೇಟೆ 4.60, ಕುಶಾಲನಗರ 14.40, ಸುಂಟಿಕೊಪ್ಪ 45
ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (09-09-2020)
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.40 ಅಡಿಗಳು, ಕಳೆದ ವರ್ಷ ಇದೇ ದಿನ 2857.96 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 4.40, ಕಳೆದ ವರ್ಷ ಇದೇ ದಿನ 12.20 ಮಿ.ಮೀ. ಇಂದಿನ ನೀರಿನ ಒಳಹರಿವು 1054 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 8170 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 600. ಕಳೆದ ವರ್ಷ ಇದೇ ದಿನ ನದಿಗೆ 1675, ನಾಲೆಗೆ 1000 ಕ್ಯುಸೆಕ್.












Click it and Unblock the Notifications