ಕೊಡಗು ಜಿಲ್ಲೆಯ ತಾಲೂಕುವಾರು ಮಳೆ ವಿವರ, ಸಹಾಯವಾಣಿ
ಮಡಿಕೇರಿ ಅ.04: ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.12 ಮಿ.ಮೀ. ಕಳೆದ ವರ್ಷ ಇದೇ ದಿನ 1.64 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2343.77 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2555.22 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.35 ಮಿ.ಮೀ. ಕಳೆದ ವರ್ಷ ಇದೇ ದಿನ 0.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3332.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3489.05 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2121.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2411.80 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 4.73 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1577.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1764.81 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ದಾಖಲಾಗಿರುವ ಮಳೆ
ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಭಾಗಮಂಡಲ 1.40 ಮಿ.ಮೀ.ಮಳೆಯಾಗಿದೆ. ಸಂಪಾಜೆ 2.10, ಅಮ್ಮತ್ತಿ 6 ಮಿ.ಮೀ.ಮಳೆಯಾಗಿದೆ.
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24 X7 ಕಂಟ್ರೋಲ್ ರೂ.08272-221077, ವಾಟ್ಸ್‍ಆಪ್ ನಂ.8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.

ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಮತ್ತು ಪ್ರಕೃತಿ ವಿಕೋಪ ಸಂಸ್ಥೆ ಹೇಳಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.74 ಅಡಿಗಳು, ಕಳೆದ ವರ್ಷ ಇದೇ ದಿನ 2855.80 ಅಡಿ. ಇಂದಿನ ನೀರಿನ ಒಳಹರಿವು 1679 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 195 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 800, ನಾಲೆಗೆ 495. ಕಳೆದ ವರ್ಷ ಇದೇ ದಿನ ನದಿಗೆ 30, ನಾಲೆಗೆ 1450 ಕ್ಯುಸೆಕ್.

ಸ್ವಚ್ಛ್ಯೋತ್ಸವ-ನಿತ್ಯೋತ್ಸವ ಮಾಸಚರಣೆ
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್(ಗ್ರಾ), ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲೆಯಲ್ಲಿ ಈಗಾಗಲೇ 104 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕ್ರಿಯಾಯೋಜನೆಯನ್ನು ತಯಾರಿಸಿ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 25 ಗ್ರಾಮ ಪಂಚಾಯಿತಿಗಳು ಕ್ರಿಯಾತ್ಮಕವಾಗಿದ್ದು, "ಸ್ವಚ್ಛ್ಯೋತ್ಸವ-ನಿತ್ಯೋತ್ಸವ" ಮಾಸಚರಣೆ ಅಕ್ಟೋಬರ್ 2 ರಿಂದ 31 ರವರೆಗೆ ಜಿಲ್ಲೆಯಲ್ಲಿ ನಡೆಯುತ್ತಿದೆ.
ಜಿಲ್ಲಾ ಉಸ್ತವಾರಿ ಸಚಿವರಾದ ವಿ.ಸೋಮಣ್ಣ ಅವರು 69 ಗ್ರಾಮ ಪಂಚಾಯಿತಿಗಳ ಸ್ವಚ್ಛ ವಾಹಿನಿ (ಘನ ತ್ಯಾಜ್ಯ ವಿಲೇವಾರಿ ವಾಹನ)ಯನ್ನು ಕೊಡಗು ಜಿಲ್ಲಾ ಪಂಚಾಯತ್ ಸಂಕೀರ್ಣದಲ್ಲಿ ಲೋಕಾರ್ಪಣೆಗೊಳಿಸಿದರು.
-
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್












Click it and Unblock the Notifications