ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ, ತಾಲೂಕುವಾರು ವಿವರ
ಮಡಿಕೇರಿ ಅ.12: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 11.84 ಮಿ.ಮೀ. ಕಳೆದ ವರ್ಷ ಇದೇ ದಿನ 10.38 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 3737.53 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2589.32 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.46 ಮಿ.ಮೀ. ಕಳೆದ ವರ್ಷ ಇದೇ ದಿನ 17.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3380.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3535.05 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.13 ಮಿ.ಮೀ. ಕಳೆದ ವರ್ಷ ಇದೇ ದಿನ 1.37 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2144.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2445.62 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.94 ಮಿ.ಮೀ. ಕಳೆದ ವರ್ಷ ಇದೇ ದಿನ 12.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1607.43 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1787.26 ಮಿ.ಮೀ. ಮಳೆಯಾಗಿತ್ತು.

ಹೋಬಳಿವಾರು ದಾಖಲಾಗಿರುವ ಮಳೆ
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 18.80, ನಾಪೋಕ್ಲು 14, ಭಾಗಮಂಡಲ 21.04, ವಿರಾಜಪೇಟೆ ಕಸಬಾ 9.80, ಹುದಿಕೇರಿ 20, ಶ್ರೀಮಂಗಲ 6, ಪೊನ್ನಂಪೇಟೆ 20, ಅಮ್ಮತ್ತಿ 1, ಬಾಳೆಲೆ 4, ಮಡಿಕೇರಿ ಕಸಬಾ 3.80, ಶನಿವಾರಸಂತೆ 1, ಶಾಂತಳ್ಳಿ 39.80, ಕೊಡ್ಲಿಪೇಟೆ 6, ಕುಶಾಲನಗರ 20.03, ಸುಂಟಿಕೊಪ್ಪ 1 ಮಿ.ಮೀ.ಮಳೆಯಾಗಿದೆ.
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24 X7 ಕಂಟ್ರೋಲ್ ರೂ.08272-221077, ವಾಟ್ಸ್‍ಆಪ್ ನಂ.8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (12-10-2020)
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.44 ಅಡಿಗಳು, ಕಳೆದ ವರ್ಷ ಇದೇ ದಿನ 2857.72 ಅಡಿ. ಇಂದಿನ ನೀರಿನ ಒಳಹರಿವು 767 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1252 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 700, ನಾಲೆಗೆ 850 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30, ನಾಲೆಗೆ 375 ಕ್ಯುಸೆಕ್.

ಮಳೆ ಮುನ್ಸೂಚನೆ:
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಚದುರಿದಂತೆ ಅಲ್ಲಲ್ಲಿ ಅಧಿಕದಿಂದ ಅತ್ಯಧಿಕ ಭಾರಿ ಮಳೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಮತ್ತು ಪ್ರಕೃತಿ ವಿಕೋಪ ಸಂಸ್ಥೆ ಹೇಳಿದೆ.

ತಲಕಾವೇರಿ ತುಲಾ ಸಂಕ್ರಮಣ ಪೂಜಾ ಕಾರ್ಯ
ತಲಕಾವೇರಿ ತುಲಾ ಸಂಕ್ರಮಣ ಪೂಜಾ ಕಾರ್ಯವು 1 ತಿಂಗಳ ಕಾಲ ಜರುಗುವುದರಿಂದ ಭಕ್ತಾದಿಗಳು ಆ ಸಂದರ್ಭದಲ್ಲಿ ಆಗಮಿಸುವಂತಾಗಬೇಕು. ಅಕ್ಟೋಬರ್ 16 ಮತ್ತು 17 ರಂದು ಜನ ದಟ್ಟಣೆ ಕಡಿಮೆ ಮಾಡಿಕೊಳ್ಳಬೇಕು ಎಂದು ಕೆ.ಜಿ ಬೋಪಯ್ಯ ಅವರು ಮನವಿ ಮಾಡಿದರು.
ಮಡಿಕೇರಿ-ಭಾಗಮಂಡಲ-ತಲಕಾವೇರಿ, ಕರಿಕೆ-ಭಾಗಮಂಡಲ, ವಿರಾಜಪೇಟೆ-ನಾಪೋಕ್ಲು ರಸ್ತೆ ಗುಂಡಿ ಮುಚ್ಚುವ ಕೆಲಸವಾಗಬೇಕು. ಸದ್ಯ 2-3 ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಅದನ್ನು ಗಮನಿಸಿ ಅಕ್ಟೋಬರ್ 15 ರ ಒಳಗೆ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಅವರಿಗೆ ತಿಳಿಸಿದರು.
Recommended Video
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications