ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು ಮಳೆ ವಿವರ
ಮಡಿಕೇರಿ ಅ.15: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 35.02 ಮಿ.ಮೀ. ಕಳೆದ ವರ್ಷ ಇದೇ ದಿನ 6.74 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2456.58 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2613.71 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.75 ಮಿ.ಮೀ. ಕಳೆದ ವರ್ಷ ಇದೇ ದಿನ 17.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3489.53 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3568.35 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.82 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2210.68 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2466.79 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.50 ಮಿ.ಮೀ. ಕಳೆದ ವರ್ಷ ಇದೇ ದಿನ 3.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1669.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1805.99 ಮಿ.ಮೀ. ಮಳೆಯಾಗಿತ್ತು

ಹೋಬಳಿವಾರು ದಾಖಲಾಗಿರುವ ಮಳೆ ವಿವರ
ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 55, ನಾಪೋಕ್ಲು 53, ಭಾಗಮಂಡಲ 91, ವಿರಾಜಪೇಟೆ ಕಸಬಾ 48, ಹುದಿಕೇರಿ 29, ಶ್ರೀಮಂಗಲ 36.20, ಪೊನ್ನಂಪೇಟೆ 18.20, ಅಮ್ಮತ್ತಿ 28.50, ಬಾಳೆಲೆ 13, ಸೋಮವಾರಪೇಟೆ ಕಸಬಾ 13.20, ಶನಿವಾರಸಂತೆ 16.20, ಶಾಂತಳ್ಳಿ 51.40, ಕೊಡ್ಲಿಪೇಟೆ 48, ಕುಶಾಲನಗರ 15, ಸುಂಟಿಕೊಪ್ಪ 15.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (15-10-2020) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.39 ಅಡಿಗಳು, ಕಳೆದ ವರ್ಷ ಇದೇ ದಿನ 2857.75 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 7.20, ಕಳೆದ ವರ್ಷ ಇದೇ ದಿನ 1.20 ಮಿ.ಮೀ., ಇಂದಿನ ನೀರಿನ ಒಳಹರಿವು 2950 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 727 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 150, ನಾಲೆಗೆ 200 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30, ನಾಲೆಗೆ 150 ಕ್ಯುಸೆಕ್.

ಮುನ್ಸೂಚನೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಹಾಗೂ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಾಯುಭಾರ ಕುಸಿತದಿಂದ ಉಂಟಾಗಿರುವ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯಲಿದೆ.
Recommended Video

ಸಚಿವ ಸೋಮಣ್ಣ ಅವರ ಕೊಡಗು ಜಿಲ್ಲಾ ಪ್ರವಾಸ
ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಅಕ್ಟೋಬರ್, 16 ಮತ್ತು 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಅಕ್ಟೋಬರ್, 16 ರಂದು ಸಂಜೆ 4 ಗಂಟೆಗೆ ಭಾಗಮಂಡಲದಲ್ಲಿ ತೀರ್ಥೋದ್ಭವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಅಕ್ಟೋಬರ್, 17 ರಂದು ಬೆಳಗ್ಗೆ 7.03 ಗಂಟೆಗೆ ಜರುಗುವ ತಲಕಾವೇರಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ಲೋಕೋಪಯೋಗಿ ಇಲಾಖೆಯ ವಿಭಾಗ ಮತ್ತು ಉಪ ವಿಭಾಗ ಕಚೇರಿ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30 ಗಂಟೆಗೆ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ಅವರು ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications