ಮಡಿಕೇರಿ, ಸೋಮವಾರ ಪೇಟೆ, ವಿರಾಜಪೇಟೆ ಮಳೆ ವಿವರ
ಮಡಿಕೇರಿ ಸೆ.11: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 9.94 ಮಿ.ಮೀ. ಕಳೆದ ವರ್ಷ ಇದೇ ದಿನ 8.98 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1989.61 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2440.80 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 11ರಂತೆ ಸರಾಸರಿ ಮಳೆ 16.20 ಮಿ.ಮೀ. ಕಳೆದ ವರ್ಷ ಇದೇ ದಿನ 12.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2793.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3271.67 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 11ರಂತೆ ಸರಾಸರಿ ಮಳೆ 10.72 ಮಿ.ಮೀ. ಕಳೆದ ವರ್ಷ ಇದೇ ದಿನ 4.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1816.53 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2367.56 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 11ರಂತೆ ಸರಾಸರಿ ಮಳೆ 2.90 ಮಿ.ಮೀ. ಕಳೆದ ವರ್ಷ ಇದೇ ದಿನ 10.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1358.56 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1683.17 ಮಿ.ಮೀ. ಮಳೆಯಾಗಿತ್ತು.

ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಹೋಬಳಿವಾರು ದಾಖಲಾಗಿರುವ ಮಳೆ
ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 9.40, ನಾಪೋಕ್ಲು 7, ಸಂಪಾಜೆ 2.40, ಭಾಗಮಂಡಲ 46, ವಿರಾಜಪೇಟೆ ಕಸಬಾ 38.60, ಶ್ರೀಮಂಗಲ 4.20, ಪೊನ್ನಂಪೇಟೆ 8, ಅಮ್ಮತ್ತಿ 9.50, ಬಾಳೆಲೆ 4, ಸೋಮವಾರಪೇಟೆ ಕಸಬಾ 2.20, ಶನಿವಾರಸಂತೆ 6, ಶಾಂತಳ್ಳಿ 7, ಕೊಡ್ಲಿಪೇಟೆ 1, ಕುಶಾಲನಗರ 0.20, ಸುಂಟಿಕೊಪ್ಪ 1 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (11-09-2020)
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.30 ಅಡಿಗಳು, ಕಳೆದ ವರ್ಷ ಇದೇ ದಿನ 2858.07 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 0, ಕಳೆದ ವರ್ಷ ಇದೇ ದಿನ 2.20 ಮಿ.ಮೀ. ಇಂದಿನ ನೀರಿನ ಒಳಹರಿವು 1106 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 4860 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 1100. ಕಳೆದ ವರ್ಷ ಇದೇ ದಿನ ನದಿಗೆ 800, ನಾಲೆಗೆ 1000 ಕ್ಯುಸೆಕ್.
Recommended Video

ಮಳೆ ಹಾನಿ ಬಗ್ಗೆ ಕೇಂದ್ರ ತಂಡದಿಂದ ಅಧ್ಯಯನ
ಕೇಂದ್ರ ತಂಡವು ಇಡೀ ದಿನ ಜಿಲ್ಲೆಯ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿತ್ತು. ಕೂಡಿಗೆಯ ಸೈನಿಕ ಶಾಲೆಯಲ್ಲಿ ಮಳೆಹಾನಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಕೇಂದ್ರ ತಂಡ ಬಳಿಕ ಬೋಟ್ಲಪ್ಪ ಪೈಸಾರಿ ಭೂಕುಸಿತ ಪ್ರದೇಶ ವೀಕ್ಷಣೆ ಮಾಡಿತು. ತಲ ಕಾವೇರಿ ಬಳಿಯ ಗಜಗಿರಿ ಬೆಟ್ಟದಲ್ಲಿನ ಭೂಕುಸಿತ ಪ್ರದೇಶವನ್ನು ವೀಕ್ಷಣೆ ಮಾಡಿ, ನಾರಾಯಣಾಚಾರ್ ಅವರ ಮನೆ ಕೊಚ್ಚಿ ಹೋಗಿರುವ ಪ್ರದೇಶವನ್ನು ಜೋರು ಮಳೆಯ ನಡುವೆಯೂ ಕೇಂದ್ರ ತಂಡದ ಅಧಿಕಾರಿಗಳು ಪರಿಶೀಲಿಸಿದರು. ದೊಡ್ಡಪುಲಿಕೋಟು ಬಳಿ ಮಳೆಯಿಂದ ಹಾನಿಯಾಗಿರುವ ಅಂಗನವಾಡಿ ವೀಕ್ಷಿಸಿದರು. ನಂತರ ಬೇಂಗೂರು ಪ್ರವಾಹದಿಂದ ಹಾನಿಯಾಗಿರುವ ಕಾಫಿ ಬೆಳೆಯನ್ನು ವೀಕ್ಷಿಸಿದರು.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications