ಕೊಡಗು ಜಿಲ್ಲೆಯಲ್ಲಿ 2063.11 ಮಿ.ಮೀ ಮಳೆ ದಾಖಲೆ

ಮಡಿಕೇರಿ ಸೆ.15: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 18.95 ಮಿ.ಮೀ. ಕಳೆದ ವರ್ಷ ಇದೇ ದಿನ 4.26 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2063.11 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2476.01 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.80 ಮಿ.ಮೀ. ಕಳೆದ ವರ್ಷ ಇದೇ ದಿನ 10.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2908.44 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3351.92 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 17.87 ಮಿ.ಮೀ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1878.68 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2372.21 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.18 ಮಿ.ಮೀ. ಕಳೆದ ವರ್ಷ ಇದೇ ದಿನ 1.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1402.24 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1703.90 ಮಿ.ಮೀ. ಮಳೆಯಾಗಿತ್ತು.

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೋಬಳಿವಾರು ದಾಖಲಾಗಿರುವ ಮಳೆ

ಹೋಬಳಿವಾರು ದಾಖಲಾಗಿರುವ ಮಳೆ

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 16.60, ನಾಪೋಕ್ಲು 20.40, ಸಂಪಾಜೆ 19, ಭಾಗಮಂಡಲ 27.20, ವಿರಾಜಪೇಟೆ ಕಸಬಾ 19.60, ಹುದಿಕೇರಿ 22, ಶ್ರೀಮಂಗಲ 28.40, ಪೊನ್ನಂಪೇಟೆ 13.20, ಅಮ್ಮತ್ತಿ 11, ಬಾಳೆಲೆ 13, ಸೋಮವಾರಪೇಟೆ ಕಸಬಾ 19.80, ಶನಿವಾರಸಂತೆ 8.60, ಶಾಂತಳ್ಳಿ 33, ಕೊಡ್ಲಿಪೇಟೆ 16, ಕುಶಾಲನಗರ 9.40, ಸುಂಟಿಕೊಪ್ಪ 22.30 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ

(14-09-2020) ವರದಿಯಂತೆ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.93 ಅಡಿಗಳು, ಕಳೆದ ವರ್ಷ ಇದೇ ದಿನ 2858.04 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 18.20 ಮಿ.ಮೀ. ಇಂದಿನ ನೀರಿನ ಒಳಹರಿವು 3222 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 3158 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 700. ಕಳೆದ ವರ್ಷ ಇದೇ ದಿನ ನದಿಗೆ 1638, ನಾಲೆಗೆ 1000 ಕ್ಯುಸೆಕ್.

Recommended Video

    ಶತಮಾನದ ಇತಿಹಾಸ ಹೊಂದಿರುವ Pamban ಸೇತುವೆಯ ವಿಶೇಷತೆಗಳು | Oneindia kannada
    ಪ್ರವಾಹ ಪೀಡಿತ ಸಂತ್ರಸ್ತರಿಗೆ ಮನೆ

    ಪ್ರವಾಹ ಪೀಡಿತ ಸಂತ್ರಸ್ತರಿಗೆ ಮನೆ

    ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಪ್ರವಾಹ ಪೀಡಿತ ಸಂತ್ರಸ್ತರಿಗೆ ಕೆ.ನಿಡುಗಣೆ (ಆರ್.ಟಿ.ಒ ಕಚೇರಿ) ಬಳಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಪರಿವೀಕ್ಷಣೆ ಮಾಡಿದರು.

    ಈ ಸಂದರ್ಭದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಚರಾದ ಬಿ.ಎ.ಹರೀಶ್, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಇದ್ದರು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+