ಕೊಡಗು ಜಿಲ್ಲೆಯಲ್ಲಿ ಸೆ. 15 ರ ತನಕ ಸುರಿದ ಮಳೆ ವಿವರ

ಮಡಿಕೇರಿ ಸೆ.16: ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 14.64 ಮಿ.ಮೀ. ಕಳೆದ ವರ್ಷ ಇದೇ ದಿನ 11.15 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2082.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2492.79 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.15 ಮಿ.ಮೀ. ಕಳೆದ ವರ್ಷ ಇದೇ ದಿನ 23.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2940.34 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3390.57 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.18 ಮಿ.ಮೀ. ಕಳೆದ ವರ್ಷ ಇದೇ ದಿನ 4.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1895.98 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2376.84 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.58 ಮಿ.ಮೀ. ಕಳೆದ ವರ್ಷ ಇದೇ ದಿನ 5.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1411.99 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1710.97 ಮಿ.ಮೀ. ಮಳೆಯಾಗಿತ್ತು.

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೋಬಳಿವಾರು ದಾಖಲಾಗಿರುವ ಮಳೆ

ಹೋಬಳಿವಾರು ದಾಖಲಾಗಿರುವ ಮಳೆ

ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 19, ನಾಪೋಕ್ಲು 15.60, ಸಂಪಾಜೆ 50, ಭಾಗಮಂಡಲ 28, ವಿರಾಜಪೇಟೆ ಕಸಬಾ 19.60, ಹುದಿಕೇರಿ 22, ಶ್ರೀಮಂಗಲ 11, ಪೊನ್ನಂಪೇಟೆ 9, ಅಮ್ಮತ್ತಿ 5.50, ಸೋಮವಾರಪೇಟೆ ಕಸಬಾ 3.60, ಶನಿವಾರಸಂತೆ 3, ಶಾಂತಳ್ಳಿ 7.60, ಕೊಡ್ಲಿಪೇಟೆ 5.10, ಕುಶಾಲನಗರ 0.20, ಸುಂಟಿಕೊಪ್ಪ 8 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ (16-09-2020) ವರದಿ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.67 ಅಡಿಗಳು, ಕಳೆದ ವರ್ಷ ಇದೇ ದಿನ 2858.25 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.40 ಮಿ.ಮೀ. ಇಂದಿನ ನೀರಿನ ಒಳಹರಿವು 2282 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2645 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 700. ಕಳೆದ ವರ್ಷ ಇದೇ ದಿನ ನದಿಗೆ 1675, ನಾಲೆಗೆ 1000 ಕ್ಯುಸೆಕ್.

ಸೆ.16 ರಂದು ರಸಗೊಬ್ಬರ ವಿತರಣೆ

ಸೆ.16 ರಂದು ರಸಗೊಬ್ಬರ ವಿತರಣೆ

ಮಡಿಕೇರಿ: ಓಡಿಪಿ ಸಂಸ್ಥೆ ಮತ್ತು ಅಂದೊರಿ ಹಿಲ್ಸ್ ಸಂಸ್ಥೆಯ ಸಹಯೋಗದೊಂದಿಗೆ ಓಡಿಪಿ ಸಂಸ್ಥೆಯ ರೈತ ಉತ್ಪನ್ನ ಕೂಟದಲ್ಲಿ ಹೆಸರು ನೋಂದಾಯಿಸಿದ್ದ ರೈತರಿಗೆ ಉಚಿತವಾಗಿ ಗೊಬ್ಬರ ವಿತರಣೆ ಕಾರ್ಯಕ್ರಮವು ಸೆಪ್ಟೆಂಬರ್, 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸಂತ ಮೈಕಲರ ಶಾಲೆಯ ಆವರಣ(ಎಲ್‍ಕೆಜಿ ಹತ್ತಿರ)ದಲ್ಲಿ ನಡೆಯಲಿದೆ.

ಫಾದರ್ ಅಲೆಕ್ಸ್ ಪ್ರಶಾಂತ್ ಸಿಕ್ವೇರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಶಭಾನಾ ಎಂ.ಕೆ., ಸಂತ ಮೈಕಲರ ದೇವಾಲಯದ ಧರ್ಮಗುರು ವಂದನೆಯ ಫಾದರ್ ದೀಪಕ್, ಸಂತ ಮೈಕಲರ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಫಾದರ್ ನವಿನಾ ಇತರರು ಪಾಲ್ಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+