ಪೊನ್ನಂಪೇಟೆ, ನಾಪೋಕ್ಲು, ಸಂಪಾಜೆಯಲ್ಲಿ ಸುರಿದ ಮಳೆ ಎಷ್ಟು?
ಮಡಿಕೇರಿ ಸೆ.18: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 29.02 ಮಿ.ಮೀ. ಕಳೆದ ವರ್ಷ ಇದೇ ದಿನ 1.82 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2116.15 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2498.07 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 18ರ ಸರಾಸರಿ ಮಳೆ 38 ಮಿ.ಮೀ. ಕಳೆದ ವರ್ಷ ಇದೇ ದಿನ 4.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2983.14 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3403.42 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 18ರ ಸರಾಸರಿ ಮಳೆ 31.20 ಮಿ.ಮೀ. ಕಳೆದ ವರ್ಷ ಇದೇ ದಿನ 0.00ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1931.85 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2376.84 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 18ರ ಸರಾಸರಿ ಮಳೆ 17.85 ಮಿ.ಮೀ. ಕಳೆದ ವರ್ಷ ಇದೇ ದಿನ 0.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1433.47 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1713.94 ಮಿ.ಮೀ. ಮಳೆಯಾಗಿತ್ತು.

ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಯಲ್ಲಿ ಮಳೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೋಬಳಿವಾರು ದಾಖಲಾಗಿರುವ ಮಳೆ ವಿವರ
ಕೋಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 50.60, ನಾಪೋಕ್ಲು 17.20, ಸಂಪಾಜೆ 40, ಭಾಗಮಂಡಲ 44.20, ವಿರಾಜಪೇಟೆ ಕಸಬಾ 14.60, ಹುದಿಕೇರಿ 72, ಶ್ರೀಮಂಗಲ 49.40, ಪೊನ್ನಂಪೇಟೆ 24.20, ಅಮ್ಮತ್ತಿ 4, ಬಾಳೆಲೆ 23, ಸೋಮವಾರಪೇಟೆ ಕಸಬಾ 15, ಶನಿವಾರಸಂತೆ 15.40, ಶಾಂತಳ್ಳಿ 32, ಕೊಡ್ಲಿಪೇಟೆ 23, ಕುಶಾಲನಗರ 9.40, ಸುಂಟಿಕೊಪ್ಪ 12.30 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (18-09-2020) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.28 ಅಡಿಗಳು, ಕಳೆದ ವರ್ಷ ಇದೇ ದಿನ 2858 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 10.60 ಮಿ.ಮೀ. ಇಂದಿನ ನೀರಿನ ಒಳಹರಿವು 2713 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2032 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 700. ಕಳೆದ ವರ್ಷ ಇದೇ ದಿನ ನದಿಗೆ 1650, ನಾಲೆಗೆ 1000 ಕ್ಯುಸೆಕ್.
Recommended Video

ಚೆಟ್ಟಳ್ಳಿ-ಅಭ್ಯಾಲ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಚೆಟ್ಟಳ್ಳಿ-ಅಭ್ಯಾಲ ಮಾರ್ಗ ನೂತನವಾಗಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿದರು. ಸರಳ ಕಾರ್ಯಕ್ರಮದಲ್ಲಿ 2.25 ಕಿ.ಮೀ. ದೂರಕ್ಕೆ ನಿರ್ಮಾಣಗೊಂಡ 5 ಕೋಟಿ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟಿಸಿ ಮಾತನಾಡಿದ ಅಪ್ಪಚ್ಚು ರಂಜನ್, ಚೆಟ್ಟಳ್ಳಿ ನಾಗರಿಕರ ಬಹುದಿನದ ಬೇಡಿಕೆಯಾಗಿರುವ ಕಾಂಕ್ರೀಟ್ ರಸ್ತೆಯನ್ನು ಉತ್ತಮವಾಗಿ ನಿರ್ಮಿಸಲಾಗಿದೆ. ಮಳೆಯಿಂದಾಗಿ ಕ್ಷೇತ್ರದ ಅನೇಕ ರಸ್ತೆಗಳು ಹದಗೆಟ್ಟಿದ್ದು ಇವುಗಳ ದುರಸ್ತಿಗೆ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸೂಕ್ತ ಅನುದಾನ ದೊರಕಿಸಿ ರಸ್ತೆ ದುರಸ್ತಿ ಮಾಡಲಾಗುತ್ತದೆ ಎಂದರು.












Click it and Unblock the Notifications