ಕೊಡಗು ಮಳೆ ರೆಡ್ ಅಲರ್ಟ್, ತುರ್ತು ಸೇವೆಗೆ ಹೆಲ್ಪ್ ಲೈನ್
ಮಡಿಕೇರಿ ಸೆ.20: ಕೊಡಗು ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 114.8 ಮಿ.ಮೀ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.5 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 37.95 ಮಿ.ಮೀ. ಮಳೆಯಾಗಿದೆ.
ಹವಾಮಾನ ಮುನ್ಸೂಚನೆ: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಇನ್ನೆರಡು ದಿನ ಮುಂದುವರೆಯಲಿದ್ದು, ಅಣೆಕಟ್ಟುಗಳ ಒಳ ಹರಿವು ಹೆಚ್ಚಾಗುತ್ತಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಚದುರಿದಂತೆ ಅಲ್ಲಲ್ಲಿ ಅಧಿಕದಿಂದ ಅತ್ಯಧಿಕ ಭಾರಿ ಮಳೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಮತ್ತು ಪ್ರಕೃತಿ ವಿಕೋಪ ಸಂಸ್ಥೆ ಹೇಳಿದೆ.

ಹೋಬಳಿವಾರು ದಾಖಲಾಗಿರುವ ಮಳೆ ವಿವರ
ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 93.6, ನಾಪೋಕ್ಲು 26.4, ಸಂಪಾಜೆ 164.2, ಭಾಗಮಂಡಲ 175, ವಿರಾಜಪೇಟೆ ಕಸಬಾ 71, ಹುದಿಕೇರಿ 68, ಶ್ರೀಮಂಗಲ 58, ಪೊನ್ನಂಪೇಟೆ 24, ಅಮ್ಮತ್ತಿ 44, ಬಾಳೆಲೆ 20, ಸೋಮವಾರಪೇಟೆ ಕಸಬಾ 35, ಶನಿವಾರಸಂತೆ 15, ಶಾಂತಳ್ಳಿ 85, ಕೊಡ್ಲಿಪೇಟೆ 20.2, ಕುಶಾಲನಗರ 28.2, ಸುಂಟಿಕೊಪ್ಪ 44.3 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (20-09-2020) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.51 ಅಡಿಗಳು, ಕಳೆದ ವರ್ಷ ಇದೇ ದಿನ 2858.13 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 35.4 ಮಿ.ಮೀ. ಇಂದಿನ ನೀರಿನ ಒಳಹರಿವು 5819 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1400 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 5837, ನಾಲೆಗೆ 500. ಕಳೆದ ವರ್ಷ ಇದೇ ನಾಲೆಗೆ 1000 ಕ್ಯುಸೆಕ್.

ಹವಾಮಾನ ಇಲಾಖೆಯಿಂದ ರೆಡ್, ಆರೆಂಜ್ ಅಲರ್ಟ್
ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಸೆಪ್ಟೆಂಬರ್, 21 ರ ಬೆಳಗ್ಗೆ 8.30 ಗಂಟೆಯವರೆಗೆ ರೆಡ್ ಅಲರ್ಟ್ ಮತ್ತು ಸೆಪ್ಟೆಂಬರ್, 21 ರ ಬೆಳಗ್ಗೆಯಿಂದ ಸೆ.22 ರ ಬೆಳಗ್ಗೆ ವರೆಗೆ ಆರಂಜ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24 X7 ಕಂಟ್ರೋಲ್ ರೂ.08272-221077, ವಾಟ್ಸ್‍ಆಪ್ ನಂ.8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.

ವಿದ್ಯುತ್ ವ್ಯತ್ಯಯ
ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು, ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಸೆಪ್ಟೆಂಬರ್, 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೊನ್ನಂಪೇಟೆ, ವಿರಾಜಪೇಟೆ, ಶ್ರೀಮಂಗಲ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳೆಲೆ, ಕಾನೂರು, ಬಿರುನಾಣಿ, ಕುಟ್ಟ, ವಿರಾಜಪೇಟೆ, ಬಿ.ಶೆಟ್ಟಿಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಅವರು ಕೋರಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications