ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ

ಕೊಡಗು, ಜುಲೈ 16: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದೆ. ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 1,188.07 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 575.20 ಮಿ. ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿನ ನದಿ, ತೊರೆ, ಹಳ್ಳಕೊಳ್ಳ, ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಜಿಲ್ಲೆಯ ಶಾಂತಳ್ಳಿ, ಭಾಗಮಂಡಲ, ಸೋಮವಾರಪೇಟೆ, ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು, ಶನಿವಾರಸಂತೆ, ಶ್ರೀಮಂಗಲ, ಸಂಪಾಜೆ, ಹೀಗೆ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.

Kodagu Witness Heavy Rain Holiday For School College

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಕೃಷಿ ಚಟುವಟಿಕೆ ಸಹ ಬಿರುಸಿನಿಂದ ನಡೆದಿದೆ.

ತಹಶೀಲ್ದಾರ್‌ ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ರಾಮಚಂದ್ರ, ಪೌರಾಯುಕ್ತ ವಿಜಯ್, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ. ಎಂ. ಯತ್ನಟ್ಟಿ ಇತರರು ತಮ್ಮ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಷ್ಟು ಮಳೆಯಾಗಿದೆ?: ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕೊಡಗು ಜಿಲ್ಲೆಯಲ್ಲಿ ಸರಾಸರಿ 58.85 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.87 ಮಿ.ಮೀ. ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ಮಳೆ 88.25 ಮಿ. ಮೀ.ಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1739.21 ಮಿ. ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 48.25 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1221.25 ಮಿ. ಮೀ. ಆಗಿದೆ.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 33.02 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1132.69 ಮಿ. ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 394.44 ಮಿ. ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 76.85 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.90 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1036.01 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 484.81 ಮಿ. ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ ಮಳೆ 47.90 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ದಿನ 16.50 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 811.20 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 442.95 ಮಿ. ಮೀ. ಮಳೆಯಾಗಿತ್ತು.

ಹೋಬಳಿವಾರು ಮಳೆ, ಮಡಿಕೇರಿ ಕಸಬಾ 88.80, ನಾಪೋಕ್ಲು 55.20, ಸಂಪಾಜೆ 89, ಭಾಗಮಂಡಲ 120, ವಿರಾಜಪೇಟೆ 48, ಅಮ್ಮತ್ತಿ 48.50, ಹುದಿಕೇರಿ 34, ಶ್ರೀಮಂಗಲ 38, ಪೊನ್ನಂಪೇಟೆ 42, ಬಾಳೆಲೆ 18.09, ಸೋಮವಾರಪೇಟೆ ಕಸಬಾ 94.40, ಶನಿವಾರಸಂತೆ 46, ಶಾಂತಳ್ಳಿ 140, ಕೊಡ್ಲಿಪೇಟೆ 27, ಕುಶಾಲನಗರ 29.60, ಸುಂಟಿಕೊಪ್ಪ 66.20 ಮಿ. ಮೀ. ಮಳೆಯಾಗಿದೆ.

ಕೊಡಗು ಜಿಲ್ಲೆಯಲ್ಲಿ ಹಾರಂಗಿ ಜಲಾಶಯವಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2854.77 ಅಡಿಗಳು. ಕಳೆದ ವರ್ಷ ಇದೇ ದಿನ 2842.74 ಅಡಿಗಳ ನೀರಿನ ಸಂಗ್ರವಿತ್ತು. ಹಾರಂಗಿಯಲ್ಲಿ ಬಿದ್ದ ಮಳೆ 37.40 ಮಿ. ಮೀ. ಆಗಿದೆ. ಒಳಹರಿವು 8,666 ಕ್ಯುಸೆಕ್, ನೀರಿನ ಹೊರ ಹರಿವು ನದಿಗೆ 5,933 ಕ್ಯುಸೆಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+