ಕೊಡಗಿನ ಡಾ.ಚರಿಷ್ಮಾ ಕಲಿಯಂಡ ಲಿವರ್ ಪೂಲ್ ನಗರ ಕೌನ್ಸಿಲರಾಗಿ ಆಯ್ಕೆ
ಮಡಿಕೇರಿ, ಸೆಪ್ಟೆಂಬರ್ 10: ಕೊಡಗು ಮೂಲದ ಡಾ.ಚರಿಷ್ಮಾ ಕಲಿಯಂಡ ಅವರು ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಲಿವರ್ ಪೂಲ್ ನಗರದ ಕೌನ್ಸಿಲರಾಗಿ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕೊಳಕೇರಿ ಮೂಲದ ಡಾ.ಚರಿಷ್ಮಾ ಅವರು ಕಲಿಯಂಡ ಮಾದಪ್ಪ (ಜಯ) ಮತ್ತು ಭಾನುಮತಿ (ಚೊಟ್ಟೇರ ಕಾವೇರಪ್ಪ ಅವರ ಪುತ್ರಿ) ದಂಪತಿಗಳ ಪುತ್ರಿ. ಪ್ರಸ್ತುತ ಅವರ ಇಡೀ ಕುಟುಂಬ ಲಿವರ್ ಪೂಲ್ ನಗರದಲ್ಲಿ ನೆಲೆಸಿದ್ದಾರೆ.
1987 ಡಿಸೆಂಬರ್ 2 ರಂದು ಜನಿಸಿದ ಡಾ.ಚರಿಷ್ಮಾ, ಬೆಂಗಳೂರಿನಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಸಿಡ್ನಿಯ ಲಿವರ್ ಪೂಲ್ ನಲ್ಲಿ ನೆಲೆಸಿದರು. ಇವರು ಈಗ ಆಸ್ಟ್ರೇಲಿಯಾದ ಪ್ರಜೆಯಾಗಿದ್ದಾರೆ.

ನೋಂದಾಯಿತ ಆಕ್ಯುಪೇಷನಲ್ ಥೆರಪಿಸ್ಟ್ ಡಾ. ಚರಿಷ್ಮಾ, ಪ್ರಸ್ತುತ ಎಸ್‌ಟಿಇಎಂ ವೃತ್ತಿಪರರೊಂದಿಗೆ ತಮ್ಮ ಕೌಶಲ್ಯಗಳನ್ನು ಬೆಳೆಸಲು ಮತ್ತು ಸುಧಾರಿಸಲು ಕೆಲಸ ಮಾಡುತ್ತಿದ್ದರು. ಕಾರ್ಮಿಕ ಪಕ್ಷಕ್ಕೆ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದರು.
ಅವರು ಎರಡು ವರ್ಷಗಳ ಹಿಂದೆ ಕೌನ್ಸಿಲ್ ಚುನಾವಣೆಯಲ್ಲಿ ಸ್ಪರ್ಧಿಸಿ, ಅತ್ಯಂತ ಕಡಿಮೆ ಅಂತರದಿಂದ ಸೋಲನುಭವಿಸಿದ್ದರು.
ಇತ್ತೀಚೆಗೆ ಕಾರ್ಮಿಕ ಪಕ್ಷದ ಉನ್ನತ ನಾಯಕರು ದಕ್ಷಿಣ ವಾರ್ಡ್ ನಿಂದ ಲಿವರ್ ಪೂಲ್ ಸಿಟಿಯ ಕೌನ್ಸಿಲರಾಗಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಿದ್ದಾರೆ.
Recommended Video
ಈ ಚುನಾವಣೆಯೊಂದಿಗೆ ಡಾ.ಚರಿಷ್ಮಾ ಅವರು ಮುಂದಿನ ದಿನಗಳಲ್ಲಿ ನಗರದ ಮೇಯರ್ ಆಗುವ ಸಾಧ್ಯತೆಯಿದ್ದು, ಲಿವರ್ ಪೂಲ್ ನ 144 ವರ್ಷಗಳ ಇತಿಹಾಸದಲ್ಲಿ ಕೌನ್ಸಿಲ್‌ಗೆ ಆಯ್ಕೆಯಾದ ಕೇವಲ 11 ಮಹಿಳೆಯರಲ್ಲಿ ಡಾ.ಚರಿಷ್ಮಾ ಒಬ್ಬರಾಗಿದ್ದಾರೆ. ಪ್ರಸ್ತುತ ಡಾ.ಚರಿಷ್ಮಾ ಅವರ ಸಹೋದರ ತರುಣ್ ತಿಮ್ಮಯ್ಯ ಅವರ ಕುಟುಂಬವೂ ಲಿವರ್ ಪೂಲ್ ಸಿಟಿಯಲ್ಲಿ ನೆಲೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications