ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿಯಲ್ಲಿ ನನಸಾಗದ ಕೊಡವ ಹೆರಿಟೇಜ್ ಸೆಂಟರ್ ಕನಸು!

|
Google Oneindia Kannada News

ಮಡಿಕೇರಿ, ಡಿಸೆಂಬರ್ 27: ಕೊಡಗಿನ ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರಗಳು ಸೇರಿದಂತೆ ಕೊಡವ ಕುಟುಂಬಗಳ ಹಿರಿಮನೆಯಾದ ಐನ್ ಮನೆಯ ಮಾದರಿಯನ್ನು ಬಿಂಬಿಸುವಂತಹ ಕೊಡವ ಹೆರಿಟೇಜ್ ಸೆಂಟರ್‌ನ ನಿರ್ಮಾಣದ ಕನಸು ಸದ್ಯಕ್ಕೆ ಕನಸಾಗಿಯೇ ಉಳಿದು ಹೋಗಿದೆ.

ಮಡಿಕೇರಿ ನಗರದ ಹೊರವಲಯದ ಕರವಲೆ ಬಾಡಗ ಗ್ರಾಮದ 4 ಎಕರೆ ಪ್ರದೇಶದಲ್ಲಿ ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣವಾಗುತ್ತಿದ್ದು, ಕಳೆದ ಆರು ವರ್ಷಗಳ ಹಿಂದೆ ಆರಂಭವಾದ ಕಾಮಗಾರಿ ಪೂರ್ಣಗೊಳ್ಳದೆ ನಿಂತಿರುವುದನ್ನು ಗಮನಿಸಿದರೆ, ಇದು ಪೂರ್ಣಗೊಳ್ಳುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ. ಪರಿಣಾಮ ಇಲ್ಲಿದ್ದ ಬೆಲೆಬಾಳುವ ಸಾಮಾಗ್ರಿಗಳು ಕಳ್ಳಕಾಕರ ಪಾಲಾಗುತ್ತಿದೆ.

ಕೊಡಗು ಅಭಿವೃದ್ಧಿ ಪ್ರಾಧಿಕಾರ ರಚನೆ, ಕುಮಾರಸ್ವಾಮಿ ಅಧ್ಯಕ್ಷರುಕೊಡಗು ಅಭಿವೃದ್ಧಿ ಪ್ರಾಧಿಕಾರ ರಚನೆ, ಕುಮಾರಸ್ವಾಮಿ ಅಧ್ಯಕ್ಷರು

ಹಾಗೆ ನೋಡಿದರೆ ಇದೊಂದು ಯೋಜನೆ ಅದ್ಯಾವತ್ತೋ ಆಗಬೇಕಿತ್ತು. ಆದರೆ ಕೊಡಗಿನ ಬಗ್ಗೆ ಸರ್ಕಾರಕ್ಕೆ ಇರುವಂತಹ ನಿರ್ಲಕ್ಷ್ಯಕ್ಕೆ ಅರ್ಧಕ್ಕೆ ನಿಂತ ಹೆರಿಟೇಜ್ ಸೆಂಟರ್‌ನ ನಿರ್ಮಾಣ ಕಾಮಗಾರಿ ಸಾಕ್ಷಿಯಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಹಿಂದಿನ ಸರ್ಕಾರದ ಆರಂಭದ ಶೂರತನದಂತೆ ಮುಂದುವರೆದಿದ್ದರೆ ಹೆರಿಟೇಜ್ ಸೆಂಟರ್ ಇಷ್ಟರಲ್ಲೇ ನಿರ್ಮಾಣಗೊಂಡು ಪ್ರವಾಸೋದ್ಯಮಕ್ಕೆ ಕೊಡುಗೆಯಾಗುತ್ತಿತ್ತು. ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಗಳು, ಕಳಪೆ ಕಾಮಗಾರಿ, ಜನಪ್ರತಿನಿಧಿಗಳ ಇಚ್ಚಾಸಕ್ತಿಯ ಕೊರತೆ ಹೀಗೆ ಹತ್ತಾರು ಕಾರಣಗಳು ಜತೆಗೆ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರ ಅರ್ಧಕ್ಕೆ ಕೈಬಿಟ್ಟಿರುವುದರಿಂದ ಕಳೆದ ಐದಾರು ವರ್ಷಗಳಿಂದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಕಟ್ಟಡದ ವಸ್ತುಗಳು ಕಳ್ಳರ ಪಾಲಾದರೆ, ನಿರ್ಮಾಣಗೊಂಡ ಕಟ್ಟಡದ ಭಾಗಗಳು ಗಾಳಿ ಮಳೆಗೆ ಸಿಲುಕಿ ಶಿಥಿಲಾವಸ್ಥೆಗೆ ತಲುಪಿವೆ.

ಕೊಡವ ಹೆರಿಟೇಜ್ ಸೆಂಟರ್ ಸ್ಥಾಪಿಸಲು ಚಿಂತನೆ

ಕೊಡವ ಹೆರಿಟೇಜ್ ಸೆಂಟರ್ ಸ್ಥಾಪಿಸಲು ಚಿಂತನೆ

ಕೊಡಗಿನ ವಿಶಿಷ್ಟ ಸಂಸ್ಕೃತಿಯನ್ನು ಪ್ರವಾಸಿಗರಿಗೆ ತಿಳಿಸುವ ಸಲುವಾಗಿ 2009-10ರಲ್ಲಿ ಕೊಡವ ಐನ್ ಮನೆ ಮಾದರಿಯಲ್ಲಿ ಕೊಡವ ಹೆರಿಟೇಜ್ ಸೆಂಟರ್ ಸ್ಥಾಪಿಸಲು ಚಿಂತನೆ ನಡೆಸಲಾಯಿತು. ಐನ್ ಮನೆ, ಸಭಾಂಗಣ, ಒಳಾಂಗಣದಲ್ಲಿ ಪುಟ್ಟ ಕೊಳ, ತೆರೆದ ಸಭಾಂಗಣ, ಗ್ರಂಥಾಲಯ, ಹಳೇ ವಸ್ತುಗಳ ಸಂಗ್ರಹಾಲಯ, ಕುಡಿಯುವ ನೀರು ಇನ್ನಿತರ ವ್ಯವಸ್ಥೆಗಳೊಂದಿಗೆ ಗ್ರಾಮೀಣ ಸೊಗಡನ್ನು ಪಸರಿಸುವುದು ಕೊಡವ ಹೆರಿಟೇಜ್ ನ ಉದ್ದೇಶವಾಗಿತ್ತು. ಈ ಯೋಜನೆಯ ಮೊದಲ ಹಂತವಾಗಿ 1.45 ಕೋಟಿ ವೆಚ್ಚದ ಯೋಜನೆಯನ್ನು ಸಿದ್ದಪಡಿಸಲಾಯಿತಾದರೂ ಬಳಿಕ ಮರುಪರಿಶೀಲಿಸಿ 2.68 ಕೋಟಿ ರೂ.ಗೆ ಏರಿಸಿ ಕಟ್ಟಡ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಯಿತು.

2011ರಂದು ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ

2011ರಂದು ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ

ಪ್ರವಾಸೋದ್ಯಮ ಇಲಾಖೆಯ ಮೂಲಕ ನಬಾರ್ಡ್ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಕಾಮಗಾರಿಯ ಮುಂದಾಳತ್ವ ವಹಿಸಿತ್ತು. ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣಕ್ಕಾಗಿ ಮಡಿಕೇರಿ ನಗರದ ಹೊರವಲಯದ ಕರವಲೆ ಬಾಡಗ ಗ್ರಾಮದ 4 ಎಕರೆ ಪ್ರದೇಶವನ್ನು ಗುರುತಿಸಲಾಯಿತು. ಈ ಜಾಗದಲ್ಲಿ ನೆಲೆಸಿದ್ದ ಬಡ ಕುಟುಂಬಗಳನ್ನು ತೆರವುಗೊಳಿಸಿ 2011ರ ಸೆ.21 ರಂದು ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಒಪ್ಪಂದದ ಪ್ರಕಾರ ಗುತ್ತಿಗೆದಾರ ಕಾಮಗಾರಿಯನ್ನು ೨೦೧೨ರ ಸೆ.21ಕ್ಕೆ ಪೂರ್ಣಗೊಳಿಸಿ ಕಟ್ಟಡವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ, ಆರಂಭದಲ್ಲಿ ಕಾಮಗಾರಿ ಚುರುಕಾಗಿ ನಡೆಯಿತಾದರೂ ಶೇ.70 ರಷ್ಟು ಕಾಮಗಾರಿ ನಡೆದು ಬಳಿಕ ನೆನೆಗುದಿಗೆ ಬಿದ್ದಿತು. ಪರಿಣಾಮ ಕಳೆದ ಐದಾರು ವರ್ಷಗಳಿಂದ ಕುರುಚಲು ಕಾಡು ಬೆಳೆದು, ಕಟ್ಟಡ ಶಿಥಿಲಾವಸ್ಥೆಗೆ ತಲುಪುವಂತಾಗಿದೆ.

ಕೊಡಗಿನಲ್ಲಿ ಕುಸಿದ ಪ್ರವಾಸೋದ್ಯಮದ ಚೇತರಿಕೆಗೆ ನಾನಾ ಕಸರತ್ತುಕೊಡಗಿನಲ್ಲಿ ಕುಸಿದ ಪ್ರವಾಸೋದ್ಯಮದ ಚೇತರಿಕೆಗೆ ನಾನಾ ಕಸರತ್ತು

ಪ್ರವಾಸಿಗರನ್ನು ಆಕರ್ಷಿಸುವುದರಲ್ಲಿ ಎರಡು ಮಾತಿಲ್ಲ

ಪ್ರವಾಸಿಗರನ್ನು ಆಕರ್ಷಿಸುವುದರಲ್ಲಿ ಎರಡು ಮಾತಿಲ್ಲ

ಹಾಗೆನೋಡಿದರೆ ಯೋಜನೆಗೆ ಆಯ್ಕೆ ಮಾಡಿಕೊಂಡ ಜಾಗವು ಸುಂದರ ಪರಿಸರದಲ್ಲಿದೆ. ಕರವಲೆ ಬಾಡಗ ಗ್ರಾಮದ ಗುಡ್ಡ ಪ್ರದೇಶದಲ್ಲಿರುವ ಈ ಕೊಡವ ಹೆರಿಟೇಜ್ ಪ್ರವಾಸಿಗರನ್ನು ಆಕರ್ಷಿಸುವುದರಲ್ಲಿ ಎರಡು ಮಾತಿಲ್ಲ. ಆದರೆ ಈಗಾಗಲೇ ಶೇ. 70ರಷ್ಟು ಪೂರ್ಣಗೊಂಡಿರುವ ಕಟ್ಟಡ ಯೋಗ್ಯವಾಗಿದೆಯಾ ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ಕಾರಣ ನಾಲ್ಕು ವರ್ಷಗಳ ಹಿಂದೆ ನಿರ್ಮಿಸಿದ ಗೋಡೆ ಹಾಗೂ ಮೆಟ್ಟಿಲಿನ ಕಾಮಗಾರಿ ಗುಣಮಟ್ಟವಿಲ್ಲದೆ ಕಳಪೆಯಾಗಿದೆ. ಅಷ್ಟೇ ಅಲ್ಲದೆ ಯಾವುದೇ ರೂಪುರೇಷೆಗಳಿಲ್ಲದ ಕಾಮಗಾರಿ ಮಾಡಲಾಗಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಈ ಹಿಂದೆ ಗುತ್ತಿಗೆ ಪಡೆದ ಗುತ್ತಿಗೆದಾರ ಕಾಮಗಾರಿ ಮುಂದುವರೆಸಲು ಹಿಂದೇಟು ಹಾಕಿದ್ದರಿಂದ ಯೋಜನೆ ನೆನೆಗುದಿಗೆ ಬಿದ್ದಿದ್ದು ಇದೀಗ ಲೋಕೋಪಯೋಗಿ ಇಲಾಖೆ ಮರು ಟೆಂಡರ್ ಪ್ರಕ್ರಿಯೆ ನಡೆಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಸುಮಾರು 5ಕೋಟಿ ವೆಚ್ಚದಲ್ಲಿ ಕಾಮಗಾರಿ ಮುಂದುವರೆಸಲು ಮುಂದಾಗಿದೆ ಎನ್ನಲಾಗುತ್ತಿದೆ.

ಸಾರ್ವಜನಿಕ ಸೇವೆಗೆ ಕೊಡವ ಹೆರಿಟೇಜ್ ಲಭ್ಯವಾಗುತ್ತಾ?

ಸಾರ್ವಜನಿಕ ಸೇವೆಗೆ ಕೊಡವ ಹೆರಿಟೇಜ್ ಲಭ್ಯವಾಗುತ್ತಾ?

ಪ್ರವಾಸೋದ್ಯಮ ಸಚಿವರಾದ ಸಾ.ರಾ.ಮಹೇಶ್ ಅವರೇ ಕೊಡಗು ಜಿಲ್ಲಾ ಉಸ್ತುವಾರಿಯಾಗಿದ್ದಾರೆ. ಹೀಗಿರುವಾಗ ಇವರ ಆಡಳಿತಾವಧಿಯಲ್ಲಿ ಈ ಕಾಮಗಾರಿ ಪೂರ್ಣವಾಗದೆ ಹೋದರೆ ಇನ್ಯಾವಾಗ ಆಗಲು ಸಾಧ್ಯ ಎನ್ನುವುದು ಸ್ಥಳೀಯರ ಪ್ರಶ್ನೆಯಾಗಿದೆ. ಕಳೆದ ಐದಾರು ವರ್ಷಗಳಿಂದ ಕಾಮಗಾರಿ ನೆನೆಗುದಿಗೆ ಬಿದ್ದ ಪರಿಣಾಮ ಇಲ್ಲಿನ ವಸ್ತುಗಳು ಸದ್ದಿಲ್ಲದೆ ಕಣ್ಮರೆಯಾಗಿವೆ. ಇದೀಗ ಗೋಡೆಗಳನ್ನು ನೆಲಕ್ಕುರುಳಿಸಿ ಇಟ್ಟಿಗೆಗಳನ್ನು ಹೊತ್ತೊಯ್ಯುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಅದ್ಯಾಕೋ ಗೊತ್ತಿಲ್ಲ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಗಾಢನಿದ್ದೆಯಲ್ಲಿದ್ದಂತೆ ಕಂಡು ಬರುತ್ತಿದೆ. ಇನ್ನು ಚಿಕ್ಕಪುಟ್ಟ ಸಮಸ್ಯೆಗಳಿಗೆ ಬೀದಿಗಿಳಿಯುವ ಕೆಲವು ಸಂಘಟನೆಗಳು, ಜನಪ್ರತಿನಿಧಿಗಳು ಕೊಡವ ಹೆರಿಟೇಜ್ ಯೋಜನೆ ಕಳೆದ ಐದಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದರೂ ಸೊಲ್ಲೆತ್ತದಿರುವುದು ಅಚ್ಚರಿಗೆ ಕಾರಣವಾಗಿದೆ. ಇನ್ನು ಮುಂದೆಯಾದರೂ ಉತ್ತಮ ಗುಣಮಟ್ಟದ ಕಾಮಗಾರಿ ನಡೆದು ಉದ್ದೇಶಿತ ಯೋಜನೆ ಸಾಕಾರಗೊಳ್ಳುವ ಮೂಲಕ ಸಾರ್ವಜನಿಕ ಸೇವೆಗೆ ಕೊಡವ ಹೆರಿಟೇಜ್ ಲಭ್ಯವಾಗುತ್ತಾ ಕಾದು ನೋಡಬೇಕಿದೆ.

ಕೊಡಗು ಮಹಾಮಳೆ : 840 ಸಂತ್ರಸ್ತ ಕುಟುಂಬಗಳಿಗೆ ಮನೆ ಭಾಗ್ಯಕೊಡಗು ಮಹಾಮಳೆ : 840 ಸಂತ್ರಸ್ತ ಕುಟುಂಬಗಳಿಗೆ ಮನೆ ಭಾಗ್ಯ

English summary
Kodava Heritage Center is being constructed on 4 acres of Karavale Badaga village, work that began last six years ago has not been completed. Here's a report about this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X