ಮಡಿಕೇರಿಯಲ್ಲಿ ಕೊಡವರ ಪಾದಯಾತ್ರೆ ಇಂದು ಸಮಾಪ್ತಿ: ಪೊಲೀಸ್ ಹದ್ದಿನ ಕಣ್ಣು
ಮಡಿಕೇರಿ, ಫೆಬ್ರವರಿ 07: ದಕ್ಷಿಣ ಕೊಡಗಿನ ಕುಟ್ಟದಿಂದ ಫೆ.2ರಂದು ಆರಂಭಗೊಂಡ ಕೊಡವಾಮೆ ಬಾಳೋ ಕೊಡವರ ಐತಿಹಾಸಿಕ ಪಾದಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದ್ದು ಮಡಿಕೇರಿಯಲ್ಲಿ ಶುಕ್ರವಾರ (ಫೆ.7) ಸಮಾಪ್ತಿಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕೊಡವರು ಭಾಗವಹಿಸಲಿರುವುದರಿಂದ ಬಿಗಿಪೊಲೀಸ್ ಬಂದೋಬಸ್ತ್ ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನೊಂದೆಡೆ ಇಡೀ ನಗರದಲ್ಲಿ ಹದ್ದಿನ ಕಣ್ಣಿಟ್ಟು ಕಾಯಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗುತ್ತಿದೆ.
ಕೊಡಗಿನ ಮೂಲ ನಿವಾಸಿಗಳಾದ ಕೊಡವರು ಹಾಗೂ ಕೊಡವ ಸಂಸ್ಕೃತಿಗೆ ಒಳಪಟ್ಟ ಇತರ ಜನಾಂಗಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಜನಾಂಗೀಯ ನಿಂದನೆ, ಜನಾಂಗೀಯ ತಾರತಮ್ಯ ಹಾಗೂ ಸಾಮಾಜಿಕ ದೌರ್ಜನ್ಯದ ವಿರುದ್ಧ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಐದು ದಿನಗಳ ಕಾಲ ಪಾದಯಾತ್ರೆ ಯಶಸ್ವಿಯಾಗಿ ನಡೆದಿದ್ದು, ದಾರಿಯುದ್ದಕ್ಕೂ ಉತ್ತಮ ಸ್ಪಂದನೆ ದೊರೆತಿದೆ. ಇದರ ಅಂತಿಮ ಸಮಾವೇಶ ಮಡಿಕೇರಿಯಲ್ಲಿ ನಡೆಯುತ್ತಿರುವ ಕಾರಣ ಮಡಿಕೇರಿಯಲ್ಲಿ ಪಾದಯಾತ್ರೆಗೆ ಭವ್ಯ ಸ್ವಾಗತ ದೊರೆತಿದ್ದು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶದೊಂದಿಗೆ ಪಾದಯಾತ್ರೆ ಸಮಾಪ್ತಿಗೊಳ್ಳುತ್ತಿದೆ.
ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಬಾಳೆ ಕಂಬ ಕಟ್ಟಿ ಪಾದಯಾತ್ರಿಗಳಿಗೆ ಸ್ವಾಗತ ನೀಡಲಾಗುತ್ತಿದ್ದು, ಅಲ್ಲಲ್ಲಿ ತಂಪು ಪಾನೀಯ ವಿತರಣೆ ಮಾಡಲಾಗುತ್ತಿದೆ. ಮೈಸೂರು ರಸ್ತೆ, ವಿರಾಜಪೇಟೆ ರಸ್ತೆ, ಮಂಗಳೂರು ರಸ್ತೆಗಳ ಪ್ರವೇಶದಲ್ಲಿ ಪಾದಯಾತ್ರಿಗಳಿಗೆ ಮಹಿಳೆಯರಿಂದ ಸಾಂಪ್ರದಾಯಿಕ ಸ್ವಾಗತ ಮಾಡಲಾಗಿದ್ದು, ಮುಂದೆ ಜಿಲ್ಲಾ ಕ್ರೀಡಾಂಗಣಕ್ಕೆ ಮಡಿಕೇರಿ ಮುಖ್ಯ ರಸ್ತೆಗಳ ಮೂಲಕ ಪಾದಯಾತ್ರೆ ಸಾಗುತ್ತಿದೆ. ಇನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸಹಸ್ರಾರು ಪಾದ ಯಾತ್ರಿಗಳಿಗೆ ಮಧ್ಯಾಹ್ನದ ಬೋಜನ ವ್ಯವಸ್ಥೆ ಮಾಡಲಾಗಿದೆ. ಇದರ ಜತೆಗೆ ಮಡಿಕೇರಿಯ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ
ಪಾದಯಾತ್ರೆಗೆ ಜಿಲ್ಲೆಯಾದ್ಯಂತ ಬರಲಿರುವವರಿಗೆ 42 ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಮಡಿಕೇರಿ ನಗರಕ್ಕೆ ಬರಲಿರುವ ಸಾವಿರಾರು ಕೊಡವರು, ಕೊಡವ ಭಾಷಿಕರ ವಾಹನಗಳಿಗೆ ನಗರದ ಹೊರ ವಲಯದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಮಡಿಕೇರಿ ಜನರಲ್ ತಿಮ್ಮಯ್ಯ ಸರ್ಕಲ್ ಗೆ ಆಗಮಿಸಿದ ಪಾದಯಾತ್ರಿಗಳನ್ನು ಸ್ವಾಗತಿಸಲಾಯಿತು. ಇದೇ ವೇಳೆಗೆ ಮೈಸೂರು ರಸ್ತೆ, ಭಾಗಮಂಡಲ ರಸ್ತೆಯಿಂದಲೂ ಕೊಡವರು ಬಂದು ಸೇರಲಿದ್ದು, ಬಳಿಕ ರಸ್ತೆಯಲ್ಲಿ ಸಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಕೊಡವಾಮೆ ಬಾಳೋ ಪಾದಯಾತ್ರೆಯಲ್ಲಿ ಮಡಿಕೇರಿಯಲ್ಲಿ 25ಸಾವಿರಕ್ಕೂ ಹೆಚ್ಚು ಕೊಡವರು ಪಾಲ್ಗೊಳ್ಳುವ ಸಾಧ್ಯತೆ ಇರುವ ಕಾರಣ ಬಂದೋಬಸ್ತ್ ಗೆ 700 ಪೊಲೀಸರ ನಿಯೋಜನೆ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಹಾಗೂ ಹೊರ ಜಿಲ್ಲೆಗಳ ವಿವಿಧ ಘಟಕದಿಂದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಪೊಲೀಸ್ ಅಧೀಕ್ಷಕರು-01, ಹೆಚ್ಚುವರಿ ಪೊಲೀಸ್ ಅಧೀಕ್ಷಕರು 01 ಪೊಲೀಸ್ ಉಪಾಧೀಕ್ಷಕರು-06, ಪೊಲೀಸ್ ನಿರೀಕ್ಷಕರು-18, ಪೊಲೀಸ್ ಉಪನಿರೀಕ್ಷಕರು-35, ಸಹಾಯಕ ಪೊಲೀಸ್ ಉಪನಿರೀಕ್ಷಕರು-55, ಪೊಲೀಸ್ ಹೆಡ್ ಕಾಸ್ಟೇಬಲ್/ಕಾನ್ಸ್ ಟೇಬಲ್ಸ್-430, ಕೆ.ಎಸ್.ಆರ್.ಪಿ (5 ಪ್ಲಾಟೂನ್)-100, ಡಿ.ಎ.ಆರ್-70 ನಿಯೋಜಿಸಲಾಗಿದೆ.
ಶಾಂತಿಯುತ ಸಮಾರೋಪಕ್ಕೆ ಸೂಚನೆ
ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದಂತೆ ಶಾಂತಿಯುತವಾಗಿ ಪಾದಯಾತ್ರೆಯ ಸಮಾರೋಪ ಸಮಾರಂಭ ನಡೆಸಲು ಸೂಚನೆ ನೀಡಲಾಗಿದೆ. ಅದರಂತೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರು ಶಾಂತಿಯುತವಾಗಿ ರಸ್ತೆಯ ಒಂದು ಬದಿಯಲ್ಲಿ ತೆರಳಬೇಕು. ಪಾದಯಾತ್ರೆಯ ಆಯೋಜಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವವರ ವಾಹನಗಳನ್ನು ಪಾರ್ಕಿಂಗ್ಗೆ ನಿಗಧಿಪಡಿಸಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಪಾದಯಾತ್ರೆಯೊಂದಿಗೆ ವಾಹನಗಳು ಬರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಪಾದಯಾತ್ರೆಯಲ್ಲಿನ ಸ್ವಯಂ ಸೇವಕರು ಸಾರ್ವಜನಿಕರಿಗೆ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಅಗತ್ಯ.
ಪಾದಯಾತ್ರೆ ಸಮಯದಲ್ಲಿ ಎಲ್ಲಿಯೂ ರಸ್ತೆ ತಡೆ ಮಾಡದಂತೆ ಸ್ವಯಂ ಸೇವಕರು ನೋಡಿಕೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228330 ಮತ್ತು 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications