ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್ 13ರ ತನಕ ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 11 : ಕೊಡಗು ಜಿಲ್ಲೆಯಲ್ಲಿ ಜೂನ್ 13ರ ತನಕ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ಜನರು ಆತಂಕಗೊಳ್ಳುವುದು ಬೇಡ ಎಂದು ಕೊಡಗು ಜಿಲ್ಲಾಡಳಿತ ಹೇಳಿದೆ.

ಕೊಡಗು ಜಿಲ್ಲೆಯಲ್ಲಿ ಜೂನ್ 13ರ ತನಕ ಭಾರೀ ಮಳೆ, ಗಾಳಿ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ಜೂನ್ 14 ರಿಂದ 20ರ ತನಕ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಲಿದೆ ಎಂದು ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಆರಂಭ, ಭಾನುವಾರ ಸುರಿದ ಮಳೆ ಎಷ್ಟು?ಕೊಡಗು ಜಿಲ್ಲೆಯಲ್ಲಿ ಮಳೆ ಆರಂಭ, ಭಾನುವಾರ ಸುರಿದ ಮಳೆ ಎಷ್ಟು?

ಜೂನ್ 20ರ ಬಳಿಕ ಜಿಲ್ಲೆಯಲ್ಲಿ ಮುಂಗಾರು ಮಳೆಯು ಚುರುಕುಗೊಳ್ಳಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗೆ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

ಜ್ಯೋತಿಷಿಗಳ ಪ್ರಕಾರ, ಕೊಡಗಿನಲ್ಲಿ ಈ ಬಾರಿಯೂ ಮಳೆ ಅಬ್ಬರಿಸಲಿದೆ!ಜ್ಯೋತಿಷಿಗಳ ಪ್ರಕಾರ, ಕೊಡಗಿನಲ್ಲಿ ಈ ಬಾರಿಯೂ ಮಳೆ ಅಬ್ಬರಿಸಲಿದೆ!

 KSNDMC issues heavy rain warning in Kodagu till June 13

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಇವರು ಹವಾಮಾನದ ನಿರಂತರ ನಿಗಾ ವಹಿಸಿದ್ದು, ಭಾರೀ ಮಳೆ ಅಥವಾ ಇತರೆ ನೈಸರ್ಗಿಕ ವಿಕೋಪದ ಮುನ್ಸೂಚನೆ ಇದ್ದಲ್ಲಿ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾಹಿತಿ ನೀಡಲಾಗುವುದು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ.

ಕೊಡಗು : ಭೂ ಕುಸಿತದ ಭೀತಿ, ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಕೊಡಗು : ಭೂ ಕುಸಿತದ ಭೀತಿ, ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತ

ತುರ್ತು ಸಂದರ್ಭದಲ್ಲಿ ಜನರು ಸೇವೆಯನ್ನು ಪಡೆಯಲು 24*7 ಕಂಟ್ರೋಲ್ ರೂಂ ಸಂಖ್ಯೆ 1077, ವಾಟ್ಸಪ್ ನಂ 8550001077.

English summary
Karnataka State Natural Disaster Monitoring Center (KSNDMC) issued heavy rain warning in Kodagu district till June 13, 2019. Deputy Commissioner office setup the helpline for the people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X