ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Kushalnagar Municipality : ಪುರಸಭೆಯಾದ ಕುಶಾಲನಗರ ಪಟ್ಟಣ ಪಂಚಾಯಿತಿ

|
Google Oneindia Kannada News

ಮಡಿಕೇರಿ, ಡಿಸೆಂಬರ್ 13; ಕರ್ನಾಟಕ ಸರ್ಕಾರ ಕೊಡಗು ಜಿಲ್ಲೆಯ ಕುಶಾಲನಗರ ಜನರ ಬಹು ದಿನದ ಕನಸನ್ನು ನನಸು ಮಾಡಿದೆ. ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ.

ಶಾಸಕ ಅಪ್ಪಚ್ಚು ರಂಜನ್ ಈ ಕುರಿತು ಫೇಸ್‌ಬುಕ್ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ. ಶಾಸಕರು ಮುಖ್ಯ ಮಂತ್ರಿಯವರಿಗೆ ಹಾಗೂ ಪೌರಾಡಳಿತ ಸಚಿವರಿಗೆ ಕುಶಾಲನಗರ ಜನತೆಯ ಪರವಾಗಿ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

ಶ್ರವಣಬೆಳಗೊಳ-ಕುಶಾಲನಗರ ರೈಲು ಮಾರ್ಗ ಸಮೀಕ್ಷೆಗೆ ಒಪ್ಪಿಗೆ ಶ್ರವಣಬೆಳಗೊಳ-ಕುಶಾಲನಗರ ರೈಲು ಮಾರ್ಗ ಸಮೀಕ್ಷೆಗೆ ಒಪ್ಪಿಗೆ

ಕುಶಾಲನಗರ ಜನತೆಯ ಬಹು ದಿನದ ಕನಸಾಗಿದ್ದ ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವಂತೆ ಇದ್ದ ಮನವಿಯನ್ನು ನಾನು ಸನ್ಮಾನ್ಯ ಮುಖ್ಯ ಮಂತ್ರಿಯವರಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಪೌರಾಡಳಿತ ಸಚಿವರಾದ ಶ್ರೀ ಎಂಟಿಬಿ ನಾಗರಾಜ್ ಅವರಿಗೆ ಮನವಿ ಮಾಡಿದ್ದೆ ಎಂದು ಶಾಸಕರು ಹೇಳಿದ್ದಾರೆ.

ಬಿಜೆಪಿ ಭದ್ರಕೋಟೆ ಕೊಡಗು, ಹಾಲಿ ಶಾಸಕರಿಗಿಲ್ಲ ಟಿಕೆಟ್ ಚಿಂತೆ! ಬಿಜೆಪಿ ಭದ್ರಕೋಟೆ ಕೊಡಗು, ಹಾಲಿ ಶಾಸಕರಿಗಿಲ್ಲ ಟಿಕೆಟ್ ಚಿಂತೆ!

Kushalnagar Town Panchayath Upgrade As Municipality

ಇಂದು ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ಅಧಿಕೃತ ಆದೇಶವಾಗಿರುತ್ತದೆ. ಇದಕ್ಕಾಗಿ ಮುಖ್ಯ ಮಂತ್ರಿಯವರಿಗೆ ಹಾಗೂ ಪೌರಾಡಳಿತ ಸಚಿವರಿಗೆ ಕುಶಾಲನಗರ ಜನತೆಯ ಪರವಾಗಿ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಪೋಸ್ಟ್ ಹಾಕಿದ್ದಾರೆ.

ಕೊಡಗು: ಜಲಪ್ರಳಯದ ಆ ದಿನ ನೆನೆದರೆ ಜನ ಬೆಚ್ಚಿ ಬೀಳ್ತಾರೆ! ಕೊಡಗು: ಜಲಪ್ರಳಯದ ಆ ದಿನ ನೆನೆದರೆ ಜನ ಬೆಚ್ಚಿ ಬೀಳ್ತಾರೆ!

ಹಲವು ವರ್ಷಗಳ ಹೋರಾಟ; ಕುಶಾಲನಗರ ತಾಲೂಕು ಕೇಂದ್ರವಾದ ಬಳಿಕ ಸ್ಥಳೀಯ ಆಡಳಿತವನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. 2021ರ ಫೆಬ್ರವರಿ 2ರಂದು ನಡೆದ ಸಾಮಾನ್ಯ ಸಭೆಯಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ನಿರ್ಣಯ ಅಂಗೀಕರಿಸಲಾಗಿತ್ತು.

ಕೊಡಗು ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರ ಕುಶಾಲನಗರ. ಪಟ್ಟಣ ಪಂಚಾಯಿತಿಯಾಗಿದ್ದ ಕುಶಾಲನಗರಕ್ಕೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಸೇರಿಸಿ ಪಟ್ಟಣ ಪಂಚಾಯಿತಿ ಮಾಡಲು ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿಗಳಿಂದಲೂ ಎನ್‌ಒಸಿ ಪಡೆದು ಕಡತವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಯಿತು.

ಕುಶಾಲನಗರ ಪಟ್ಟಣ ಪಂಚಾಯಿತಿಯ ಹಿಂದಿನ ಆಡಳಿತ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ನಿರ್ಣಯ ಕಡತ ಸಿದ್ಧಪಡಿಸಿತು. ಇದರ ಜೊತೆಗೆ ಹೋರಾಟಗಳು ಸಹ ನಡೆದವು. ಸರ್ಕಾರ ಸಹ ಬೇಡಿಕೆಗೆ ಒಪ್ಪಿಗೆ ನೀಡಿತು.

2020ರ ಡಿಸೆಂಬರ್ 19ರಂದು ಪೌರಾಡಳಿತ ನಿರ್ದೇಶನಾಲಯದ ಜಂಟಿ ಆಯುಕ್ತರು ಪಟ್ಟಣ ಪಂಚಾಯಿತಿಗೆ ಪತ್ರ ಬರೆದಿದ್ದರು. ಯಾವ ಯಾವ ಪ್ರದೇಶಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಬಹುದೋ ಆ ಗ್ರಾಮ ಪಂಚಾಯಿತಿಗಳು ಕೈಗೊಂಡ ನಿರ್ಣಯದ ಪ್ರತಿಯನ್ನು ಹಾಜರುಪಡಿಸಿ ಎಂದು ಸೂಚಿಸಿದ್ದರು.

ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂದಿ ಬಸವನಹಳ್ಳಿ, ಮುಳ್ಳುಸೋಗೆ ಮತ್ತು ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದ ಭಾಗಶಃ ಪ್ರದೇಶಗಳನ್ನು ಪುರಸಭೆಗೆ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. 2021ರ ಫೆಬ್ರವರಿ 2ರಂದು ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಲಾಗಿತ್ತು.

ಗ್ರಾಮಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಗ್ರಾಮ ಪಂಚಾಯಿತಿಗಳ ಮೂಲಕ ನಿರಕ್ಷೇಪಣ ಪತ್ರವನ್ನು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ಸಲ್ಲಿಕೆ ಮಾಡಲಾಗಿತ್ತು.

2011ರ ಜನಗಣತಿ ಪ್ರಕಾರ ಕುಶಾಲನಗರ ಜನಸಂಖ್ಯೆ 15,326. ಮುಳ್ಳುಸೋಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 9,189 ಜನರಿದ್ದಾರೆ. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಮಾದಾಪಟ್ಟಣದ ವ್ಯಾಪ್ತಿಯಲ್ಲಿ 2861 ಜನರಿದ್ದಾರೆ. ಆದ್ದರಿಂದ ಎಲ್ಲವೂ ಒಟ್ಟಾಗಿ 27,376 ಜನಸಂಖ್ಯೆ ಆಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿತ್ತು.

ಎಲ್ಲಾ ಹಂತದ ಪ್ರಕ್ರಿಯೆ, ಹೋರಾಟಗಳು, ಮನವಿಗಳ ಬಳಿಕ ಸರ್ಕಾರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯಿಗೆ ಚಾಲನೆ ನೀಡಲಾಯಿತು. ಅಂತಿಮವಾಗಿ ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪುರಸಭೆಯಾಗಿ ಮಾಡಲು ಒಪ್ಪಿಗೆ ಕೊಡಲಾಗಿದೆ.

English summary
Karnataka government ordered to upgrade Kodagu district Kushalnagar town panchayath as municipality.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X