ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಲಕಾವೇರಿ ಗುಡ್ಡ ಕುಸಿತ; ಸ್ಥಳಕ್ಕೆ ಆಗಮಿಸಿದ ನಾರಾಯಣಾಚಾರ್ ಮಕ್ಕಳು

|
Google Oneindia Kannada News

ಮಡಿಕೇರಿ, ಆಗಸ್ಟ್ 10 : ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದು ಬಿದ್ದಿದ್ದು ಐದು ಜನರು ನಾಪತ್ತೆಯಾಗಿದ್ದಾರೆ. ತಲಕಾವೇರಿ ಪ್ರಧಾನ ಅರ್ಚಕರಾಗಿದ್ದ ನಾರಾಯಣಾಚಾರ್ ಮಕ್ಕಳು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಭೇಟಿ ಮಾಡಿದರು.

Recommended Video

Mumbai ಮಳೆಯಲ್ಲಿ ರಸ್ತೆ ನಡುವೆ ನಿಂತು ಮಾನವೀಯತೆ ಮೆರೆದ ಮಹಿಳೆ | Oneindia Kannada

ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‍ನಲ್ಲಿ ನೆಲೆಸಿರುವ ಇಬ್ಬರು ಮಕ್ಕಳು ತಲಕಾವೇರಿಗೆ ಆಗಮಿಸಿದ್ದಾರೆ. ಸೋಮವಾರ ಭಾಗಮಂಡಲ ಹೋಟೆಲ್ ಮಯೂರದಲ್ಲಿ ವಿ. ಸೋಮಣ್ಣ ಭೇಟಿಯಾಗಿ ಮಾತುಕತೆ ನಡೆಸಿದರು, ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು.

 ಮಡಿಕೇರಿ: ಅರಣ್ಯ ಇಲಾಖೆ ತೋಡಿದ ಇಂಗುಗುಂಡಿಯೇ ಗುಡ್ಡ ಕುಸಿತಕ್ಕೆ ಕಾರಣವಾಯಿತಾ? ಮಡಿಕೇರಿ: ಅರಣ್ಯ ಇಲಾಖೆ ತೋಡಿದ ಇಂಗುಗುಂಡಿಯೇ ಗುಡ್ಡ ಕುಸಿತಕ್ಕೆ ಕಾರಣವಾಯಿತಾ?

ಸಚಿವ ವಿ.ಸೋಮಣ್ಣ ಅವರು ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಈಗಾಗಲೇ ಆನಂದ ತೀರ್ಥ ಅವರ ದೇಹ ಸಿಕ್ಕಿದೆ. ಇನ್ನು ನಾಲ್ವರು ಕಾಣೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ವಿವರಣೆ ನೀಡಿದರು.

 ಮಹಾಮಳೆಗೆ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ ಮಹಾಮಳೆಗೆ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ

Landslide In Talacauvery Narayana Achar Family Members Met V Somanna

ಬಳಿಕ ಗುಡ್ಡ ಕುಸಿದ ಜಾಗಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಸಂಸದರಾದ ಪ್ರತಾಪ್ ಸಿಂಹ ಅವರು ಹಲವು ಮಾಹಿತಿ ನೀಡಿದರು. ಶಾಸಕರಾದ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಇತರರು ಇದ್ದರು.

ತಲಕಾವೇರಿ ಬ್ರಹ್ಮಗಿರಿಯಲ್ಲಿ ಭೂಕುಸಿತ; ಒಬ್ಬರ ಮೃತದೇಹ ಪತ್ತೆ ತಲಕಾವೇರಿ ಬ್ರಹ್ಮಗಿರಿಯಲ್ಲಿ ಭೂಕುಸಿತ; ಒಬ್ಬರ ಮೃತದೇಹ ಪತ್ತೆ

ನಾರಾಯಣಾಚಾರ್ (70), ಶಾಂತಾ (70), ಆನಂದ ತೀರ್ಥ ಸ್ವಾಮಿ (87), ರವಿ ಕಿರಣ್ ( 26) ಮತ್ತು ಶ್ರೀನಿವಾಸ (30) ಅವರು ಗುಡ್ಡ ಕುಸಿದ ಕಾರಣ ಮಣ್ಣಿನ ಅಡಿ ಸಿಲುಕಿದ್ದಾರೆ. ಇವರಲ್ಲಿ ಆನಂದ ತೀರ್ಥ ಅವರ ಮೃತದೇಹ ಪತ್ತೆಯಾಗಿದೆ.

Landslide In Talacauvery Narayana Achar Family Members Met V Somanna

ಸುಮಾರು 6 ಕಿ. ಮೀ. ಉದ್ದಕ್ಕೆ ಬೆಟ್ಟದ ಸಾಲು ಕುಸಿದು ಎರಡು ಮನೆಗಳ ಮೇಲೆ ಬಿದ್ದಿದೆ. 2 ಕಾರು, 20ಕ್ಕೂ ಹೆಚ್ಚು ಹಸುಗಳು ಸಹ ಮಣ್ಣಿನ ಅಡಿಯಲ್ಲಿ ಸಿಲುಕಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

English summary
Daughter of Talacauvery temple chief priest Narayana Achar met Kodagu district in charge minister V. Somanna. Five people of Narayana Achar family missing after massive landslide in Talacauvery.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X