ವಿರಾಜಪೇಟೆ-ಮಾಕುಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ

ಮಡಿಕೇರಿ, ಆಗಸ್ಟ್ 05 : ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿಯಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿ ಪಡಿಸುವ ಉದ್ದೇಶದಿಂದ 3 ದಿನ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಆಗಸ್ಟ್ 5ರ ಮುಂಜಾನೆ ಸುರಿದ ಮಳೆಯಿಂದಾಗಿ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಕಡೆ ಭೂ ಕುಸಿತ ಉಂಟಾಗಿದೆ. ಕೊಡಗು ಜಿಲ್ಲಾಧಿಕಾರಿ ಅನ್ನೀಸ್ ಕನ್ಮಣಿ ಜಾಯ್, ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Landslide In Virajpet-Makutta Road Vehicle Banned

ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ 3 ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Landslide In Virajpet-Makutta Road Vehicle Banned

ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಮಳೆ ಮುನ್ಸೂಚನೆ : 5/8/2019ರಿಂದ ಮುಂದಿನ ನಾಲ್ಕು ದಿನದ ತನಕ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಕೊಡಗು ಜಿಲ್ಲಾಡಳಿತ ಈ ಕುರಿತು ಜನರಿಗೆ ಎಚ್ಚರಿಕೆ ನೀಡಿದ್ದು, ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+