ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿರಾಜಪೇಟೆ-ಮಾಕುಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ

|
Google Oneindia Kannada News

ಮಡಿಕೇರಿ, ಆಗಸ್ಟ್ 05 : ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿಯಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿ ಪಡಿಸುವ ಉದ್ದೇಶದಿಂದ 3 ದಿನ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಆಗಸ್ಟ್ 5ರ ಮುಂಜಾನೆ ಸುರಿದ ಮಳೆಯಿಂದಾಗಿ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಕಡೆ ಭೂ ಕುಸಿತ ಉಂಟಾಗಿದೆ. ಕೊಡಗು ಜಿಲ್ಲಾಧಿಕಾರಿ ಅನ್ನೀಸ್ ಕನ್ಮಣಿ ಜಾಯ್, ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಡಗು ಪುನರ್‌ನಿರ್ಮಾಣಕ್ಕೆ ಹೆಚ್ಚುವರಿ 500 ಕೋಟಿ ಕೊಟ್ಟ ಯಡಿಯೂರಪ್ಪಕೊಡಗು ಪುನರ್‌ನಿರ್ಮಾಣಕ್ಕೆ ಹೆಚ್ಚುವರಿ 500 ಕೋಟಿ ಕೊಟ್ಟ ಯಡಿಯೂರಪ್ಪ

Landslide In Virajpet-Makutta Road Vehicle Banned

ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ 3 ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಾಂದಲ್ ಪಟ್ಟಿಗೆ ಪ್ರವೇಶ ನಿಷೇಧ: ಜೀಪ್ ಚಾಲಕರ ಆಕ್ರೋಶಮಾಂದಲ್ ಪಟ್ಟಿಗೆ ಪ್ರವೇಶ ನಿಷೇಧ: ಜೀಪ್ ಚಾಲಕರ ಆಕ್ರೋಶ

Landslide In Virajpet-Makutta Road Vehicle Banned

ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಜಿಲ್ಲಾಡಳಿತದ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಕೊಡಗಿನಲ್ಲಿ ಮೃತ್ಯುವಾಗಿ ಕಾಡುತ್ತಿದೆಯಾ ಮನೆ ಹಿಂಬದಿಯ ಬರೆ?ಕೊಡಗಿನಲ್ಲಿ ಮೃತ್ಯುವಾಗಿ ಕಾಡುತ್ತಿದೆಯಾ ಮನೆ ಹಿಂಬದಿಯ ಬರೆ?

ಮಳೆ ಮುನ್ಸೂಚನೆ : 5/8/2019ರಿಂದ ಮುಂದಿನ ನಾಲ್ಕು ದಿನದ ತನಕ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಕೊಡಗು ಜಿಲ್ಲಾಡಳಿತ ಈ ಕುರಿತು ಜನರಿಗೆ ಎಚ್ಚರಿಕೆ ನೀಡಿದ್ದು, ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ಮನವಿ ಮಾಡಿದೆ.

English summary
Madikeri: Kodagu deputy commissioner Annies Kanmani Joy ordered to ban vehicle moments for 3days at Perumbadi check post to Makutta check post due to landslide in Virajpet-Makutta road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X