ಕೊಡಗು: ಕಡಿಮೆಯಾದ ನೈಋತ್ಯ ಮುಂಗಾರು ಮಳೆ ಅಬ್ಬರ

ಮಡಿಕೇರಿ, ಜುಲೈ 10: ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆಯ ಅಬ್ಬರ ಕಡಿಮೆಯಾಗಿದೆ. ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.54 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.94 ಮಿ. ಮೀ. ಮಳೆಯಾಗಿತ್ತು.

ಮೇ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿತ್ತು. ಜೂನ್‌ನಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 1016.59 ಮಿ. ಮೀ. ಆಗಿದೆ. ಆದರೆ ಕಳೆದ ವರ್ಷ ಇದೇ ಅವಧಿಯಲ್ಲಿ 535.96 ಮಿ. ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Less Rain Fall In Kodagu District In 24 Hours

ಮಡಿಕೇರಿ ತಾಲ್ಲೂಕಿನಲ್ಲಿ ಇಂದು ಸುರಿದಿರುವ ಸರಾಸರಿ ಮಳೆ 11.10 ಮಿ. ಮೀ.. ಕಳೆದ ವರ್ಷ ಇದೇ ದಿನ 21.65 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆ 1496.53 ಮಿ. ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 986.17 ಮಿ. ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಸುರಿದ ಸರಾಸರಿ ಮಳೆ 11.05 ಮಿ. ಮೀ.. ಕಳೆದ ವರ್ಷ ಇದೇ ದಿನ 1.80 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆ 1047.55 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 454.11 ಮಿ. ಮೀ. ಮಳೆಯಾಗಿತ್ತು.

ಇನ್ನು ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 9.89 ಮಿ.ಮೀ.. ಕಳೆದ ವರ್ಷ ಇದೇ ದಿನ 1.70 ಮಿ. ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1009.44 ಮಿ. ಮೀ.. ಕಳೆದ ವರ್ಷ ಇದೇ ಅವಧಿಯಲ್ಲಿ 373.21 ಮಿ. ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ಇದೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 3.95 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.75 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 821.71 ಮಿ.ಮೀ. ಮಳೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 454.96 ಮಿ. ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ ಮಳೆ 1.70 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.80 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 707.70 ಮಿ. ಮೀ.. ಕಳೆದ ವರ್ಷ ಇದೇ ಅವಧಿಯಲ್ಲಿ 411.35 ಮಿ. ಮೀ. ಮಳೆಯಾಗಿತ್ತು.

ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ಮಡಿಕೇರಿ ಕಸಬಾ 8.60, ನಾಪೋಕ್ಲು 7, ಸಂಪಾಜೆ 10, ಭಾಗಮಂಡಲ 18.80, ವಿರಾಜಪೇಟೆ 12.60, ಅಮ್ಮತ್ತಿ 9.50, ಹುದಿಕೇರಿ 8.90, ಶ್ರೀಮಂಗಲ 9.60, ಪೊನ್ನಂಪೇಟೆ 12, ಬಾಳೆಲೆ 9.05, ಸೋಮವಾರಪೇಟೆ ಕಸಬಾ 4.80, ಶಾಂತಳ್ಳಿ 7, ಕೊಡ್ಲಿಪೇಟೆ 4, ಕುಶಾಲನಗರ 0.40, ಸುಂಟಿಕೊಪ್ಪ 3 ಮಿ.ಮೀ. ಮಳೆಯಾಗಿದೆ.

ಹಾರಂಗಿ ಡ್ಯಾಂ ನೀರಿನ ಮಟ್ಟ: 10/07/2024ರ ವರದಿ ಅನ್ವಯ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2850.03 ಅಡಿಗಳು. ಕಳೆದ ವರ್ಷ ಇದೇ ದಿನ 2838.40 ಅಡಿಗಳ ನೀರಿನ ಸಂಗ್ರಹವಿತ್ತು. ಹಾರಂಗಿಯಲ್ಲಿ ಬಿದ್ದ ಮಳೆ 2.20 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ದಿನ 1.20 ಮಿ. ಮೀ. ಮಳೆಯಾಗಿತ್ತು. ಒಳಹರಿವು 2377 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2293 ಕ್ಯುಸೆಕ್ ಇತ್ತು. ನೀರಿನ ಹೊರ ಹರಿವು ನದಿಗೆ 466 ಕ್ಯುಸೆಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+