• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

2 ತಿಂಗಳು ಕೊಡಗು ಪ್ರವಾಸೋದ್ಯಮ ನಿಷೇಧಿಸುವಂತೆ ಆಗ್ರಹ

|
Google Oneindia Kannada News

ಮಡಿಕೇರಿ, ಸೆಪ್ಟೆಂಬರ್ 24: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಏರಿಳಿತದ ನಡುವೆಯೂ ರಾಜ್ಯ ಸರ್ಕಾರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಒಂದಷ್ಟು ಮಾರ್ಗಸೂಚಿಗಳ ಜೊತೆ ಮುಕ್ತ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ವಾರಾಂತ್ಯಗಳಲ್ಲಿ ಕೊಡಗು ಜಿಲ್ಲೆಗೆ ಹೆಚ್ಚು ಪ್ರವಾಸಿಗರು ಅಗಮಿಸುತ್ತಿದ್ದಾರೆ.

ಇದರಿಂದ ಪ್ರವಾಸೋದ್ಯಮ ಅವಲಂಬಿಸಿಕೊಂಡು ಬದುಕು ನಡೆಸುತ್ತಿರುವವರು ಚೇತರಿಕೆ ಕಾಣ್ಣುತ್ತಿದ್ದರೆ, ಇದೀಗ ಕೊಡಗು ಜಿಲ್ಲೆಯ ಜನ ಎರಡು ತಿಂಗಳ ಕಾಲ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಶುಕ್ರವಾರ ಕೊಡಗಿನ ಜನ, ವಿವಿಧ ಸಂಘಟನೆಗಳು ಹಾಗೂ ಸಮಾನ ಮನಸ್ಕರನ್ನು ಒಳಗೊಂಡ 'ಸೇವ್ ಕೊಡಗು ಫ್ರಮ್ ಟೂರಿಸ್ಟ್' ತಂಡ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮವನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ನೀಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ಕೊಡಗಿನ ಸಾಂಪ್ರದಾಯಿಕ ಹಬ್ಬ ತುಲಾ ಸಂಕ್ರಮಣ ಆಚರಣೆಯ ಹಿತದೃಷ್ಟಿಯಿಂದ ಹಾಗೂ ಶಾಲಾ- ಕಾಲೇಜುಗಳ ಪುನರಾರಂಭದ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಕಠಿಣ ನಿಯಮವನ್ನು ಜಾರಿಗೊಳಿಸಬೇಕೆಂದು ತಂಡ ಒತ್ತಾಯಿಸಿದೆ.

ಗಡಿರಾಜ್ಯ ಕೇರಳದಲ್ಲಿ ಕೋವಿಡ್ ಹಾಗೂ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನ ಎಲ್ಲ ಗಡಿಗಳಿಂದಲೂ ಪ್ರವಾಸಿಗಳನ್ನು ಒಳಬಾರದಂತೆ ತಡೆಯಬೇಕು ಎಂದು ಒತ್ತಾಯಿಸಿದೆ. ಈ ಮೂಲಕ ಕೊಡಗು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗದಂತೆ ತಡೆಯಬೇಕು ಎಂದು ಆಗ್ರಹಿಸಿದೆ.

ಕಳೆದ ಬಾರಿ ಕೊಡಗು ಜಿಲ್ಲಾಡಳಿತದ ವೈಫಲ್ಯದಿಂದ ತುಲಾ ಸಂಕ್ರಮಣದ ಸಂದರ್ಭ ಗೊಂದಲ ಉಂಟಾಗಿದ್ದು, ಕೊಡಗಿನ ಮೂಲ ನಿವಾಸಿಗಳಿಗೆ ಅತೀವ ನೋವುಂಟಾಗಿದೆ. ಈ ಬಾರಿ ಆ ರೀತಿ ಆಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ತಂಡ ಮನವಿ ಮಾಡಿಕೊಂಡಿದೆ.

Local People Urges To Ban Tourism In Kodagu For 2 Months

ಕೊಡಗಿನ ಮೂಲ ನಿವಾಸಿಗಳಿಗೆ ಈ ಬಾರಿಯ ಹಬ್ಬದಲ್ಲಿ ಭಾಗಿಯಾಗಲು ಮುಕ್ತ ಅವಕಾಶ ಕೊಡಬೇಕು. ಹೊರಗಿನಿಂದ ಜಾತ್ರೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಮುಂಗಡ ಹೆಸರು ನೊಂದಾಯಿಸಿಕೊಂಡು, ಕೋವಿಡ್ ನೆಗೆಟಿವ್ ವರದಿಯೊಂದಿಗೆ ಭಾಗವಹಿಸಲು ಮಾತ್ರ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಅ.17ರಂದು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ
ಮಡಿಕೇರಿ, ಸೆಪ್ಟೆಂಬರ್ 22: ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅಕ್ಟೋಬರ್ 17ರಂದು ಜರುಗುವ ಹಿನ್ನೆಲೆ ಅಗತ್ಯ ಸಿದ್ಧತೆಗೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ.

ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, "ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ," ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

"ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು. ವೈದ್ಯರು, ಶುಶ್ರೂಷಕರು, ಆಂಬ್ಯುಲೆನ್ಸ್ ಹೀಗೆ ಅಗತ್ಯ ತಂಡವನ್ನು ನಿಯೋಜಿಸಬೇಕು. ಭಾಗಮಂಡಲ ಗ್ರಾ.ಪಂ. ವತಿಯಿಂದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಸ್ವಚ್ಛತೆಗೆ ಒತ್ತು ನೀಡುವುದು, ಕುಡಿಯುವ ನೀರು ಪೂರೈಕೆ, ಶೌಚಾಲಯ, ವಾಹನ ನಿಲುಗಡೆ ನಿರ್ವಹಣೆಗೆ ವ್ಯವಸ್ಥೆ ಮಾಡುವಂತೆ," ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದರು.

"ಲೋಕೋಪಯೋಗಿ ಇಲಾಖೆಯಿಂದ ಮಡಿಕೇರಿಯಿಂದ ತಲಕಾವೇರಿಯವರೆಗೆ ರಸ್ತೆಗಳ ಗುಂಡಿ ಮುಚ್ಚುವುದು, ರಸ್ತೆ ಬದಿ ಗಿಡಗಳನ್ನು ಕಡಿಯುವುದು ಮತ್ತಿತರ ಕ್ರಮವಹಿಸುವಂತೆ," ಸೂಚನೆ ನೀಡಿದರು.

ನೀರಾವರಿ ಇಲಾಖೆ ವ್ಯಾಪ್ತಿಯ ಭಾಗಮಂಡಲ ರಸ್ತೆ ಸರಿಪಡಿಸುವುದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡುವುದು, ಕೋವಿಡ್-19 ಹಿನ್ನೆಲೆ ಸರ್ಕಾರದ ನಿಯಮಗಳನ್ನು ಪಾಲಿಸುವುದು ಹಾಗೂ ತುಲಾ ಸಂಕ್ರಮಣ ದಿನದಂದು ಅಗತ್ಯ ಬಸ್‌ಗಳ ನಿಯೋಜನೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

   ಉಗ್ರರನ್ನು ಸಾಕ್ತಿರೋ ಟೆರರಿಸ್ತಾನಕ್ಕೆ ಕಮಾಲಾ ಹ್ಯಾರಿಸ್ ಖಡಕ್ ಎಚ್ಚರಿಕೆ | Oneindia Kannada
   English summary
   The People has appealed to the DC Charulata Somal to stop tourism throughout Kodagu district in October and November.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X