• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಾಕ್‌ಡೌನ್ ವಿಸ್ತರಣೆ; ಕೊಡಗು ಜಿಲ್ಲೆಗೆ ಮಾರ್ಗಸೂಚಿ

|
Google Oneindia Kannada News

ಮಡಿಕೇರಿ, ಜೂನ್ 20; ಕರ್ನಾಟಕ ಸರ್ಕಾರದ ಇತ್ತೀಚಿನ ಮಾರ್ಗಸೂಚಿಯಂತೆ ಕೋವಿಡ್ ಪಾಸಿಟಿವಿಟಿ ದರದಲ್ಲಿ ಕೊಡಗು ಜಿಲ್ಲೆಯು ಎರಡನೇ ವರ್ಗದಲ್ಲಿ ಇರುತ್ತದೆ. ಆದರೆ ಕೋವಿಡ್ ಲಾಕ್‌ಡೌನ್ ನಿಯಮಗಳನ್ನು ಜುಲೈ 5ರ ತನಕ ವಿಸ್ತರಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಗ್ರಹಿಸುವ ನಿಟ್ಟಿನಲ್ಲಿ ಸರ್ಕಾರದ ಲಾಕ್‌ಡೌನ್ ಆದೇಶವನ್ನು ಗಮನದಲ್ಲಿಟ್ಟುಕೊಂಡು ಕೊಡಗು ಜಿಲ್ಲಾ ವ್ಯಾಪ್ತಿಯ ಮಾರ್ಗಸೂಚಿ ಹೊರಡಿಸಲಾಗಿದೆ.

ಕೊಡಗು; ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದೇಕೆ? ಕೊಡಗು; ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದೇಕೆ?

ಹಾಲಿ ಜಾರಿಯಲ್ಲಿರುವ ಲಾಕ್‌ಡೌನ್ ನಿಯಮಾವಳಿಗಳು 5/7/2021ರ ಬೆಳಗ್ಗೆ 6 ಗಂಟೆಯವರೆಗೆ ಯಥಾವತ್ತಾಗಿ ಜಾರಿಯಲ್ಲಿರುವಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಮುಂದುವರೆಸಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಕೊಡಗು; ಬಿರುಸಿನ ಮಳೆ, ಮಂಜಿನ ನಗರಿಗೆ ಆವರಿಸಿದ ಥಂಡಿ ಕೊಡಗು; ಬಿರುಸಿನ ಮಳೆ, ಮಂಜಿನ ನಗರಿಗೆ ಆವರಿಸಿದ ಥಂಡಿ

ಜಿಲ್ಲಾಡಳಿತ ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 188, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಎಚ್ಚರಿಸಲಾಗಿದೆ.

ಕೊಡಗು; ಗಜಗಿರಿ ಬೆಟ್ಟದಲ್ಲಿ ಇಂಗು ಗುಂಡಿ ಮುಚ್ಚಿದ ಅರಣ್ಯ ಇಲಾಖೆ ಕೊಡಗು; ಗಜಗಿರಿ ಬೆಟ್ಟದಲ್ಲಿ ಇಂಗು ಗುಂಡಿ ಮುಚ್ಚಿದ ಅರಣ್ಯ ಇಲಾಖೆ

ಅವಶ್ಯಕ ವಸ್ತುಗಳ ಖರೀದಿ

ಅವಶ್ಯಕ ವಸ್ತುಗಳ ಖರೀದಿ

* ಅತ್ಯವಶ್ಯಕ ಸೇವೆಗಳಡಿ ತರಕಾರಿ, ಹಣ್ಣು, ದಿನಸಿ, ಕೃಷಿಗೆ ಸಂಬಂಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆ, ಹಾಪ್ ಕಾಮ್ಸ್ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿ.

ಕೃಷಿ ಪರಿಕರವಾದ ರಸಗೊಬ್ಬರವನ್ನು ರೈತರು ಈಗಾಗಲೇ ನಿಗದಿಪಡಿಸಿರುವ ದಿನಗಳಲ್ಲಿ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ನಿಗದಿಪಡಿಸಿದ ಸಮಯದಲ್ಲಿ (ಬೆಳಗ್ಗೆ 6 ರಿಂದ ಮಧ್ಯಾಹ್ನ 1) ರಸೀದಿ ಪಡೆದು ಖರೀದಿಸಲು ಹಾಗೂ ಖರೀದಿಸಿದ ಸ್ಥಳದಿಂದ ರೈತರ ಕೃಷಿ ಚಟುವಟಿಕೆಯ ಸ್ಥಳಕ್ಕೆ ಅದೇ ದಿನದಂದು ಸಾಗಿಸಲು ಅವಕಾಶ ಕಲ್ಪಿಸಲಾಗಿದೆ. ಸಾಗಾಣಿಕೆ ಸಮಯದಲ್ಲಿ ಅಧಿಕೃತ ರಶೀದಿ ಹೊಂದಿರಬೇಕು.

ಮಳೆಗಾಲ, ಕೃಷಿ ಚಟುವಟಿಕೆ

ಮಳೆಗಾಲ, ಕೃಷಿ ಚಟುವಟಿಕೆ

* ಜಿಲ್ಲೆಯ ಸಾರ್ವಜನಿಕರಿಗೆ ಮಳೆಗಾಲಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರೈನ್‌ಕೋಟ್, ಛತ್ರಿ, ಟಾರ್ಪಲ್, ಬಟ್ಟೆಬರೆ, ಚಪ್ಪಲಿ, ಗಮ್ ಬೂಟು ಮುಂತಾದ ವಸ್ತುಗಳ ಅವಶ್ಯಕತೆ ಇರುವುದರಿಂದ ಇಂತಹ ವಸ್ತುಗಳ ಮಾರಾಟ ಮಳಿಗೆಯನ್ನು ತೆರೆಯಲು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ

* ಪಡಿತರ ನ್ಯಾಯಬೆಲೆ ಮಳಿಗೆಗಳು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಮಾತ್ರ ತೆರೆಯಲು ಅನುಮತಿ ಇದೆ.

* ಸ್ಟಾಂಡ್ ಅಲೋನ್ ಹಾಲಿನ ಬೂತ್, ದಿನಪತ್ರಿಕೆಗಳ ವರ್ಗೀಕರಣ ಮತ್ತು ವಿತರಣೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಅನುಮತಿ.

* ಆಸ್ಪತ್ರೆ, ಔಷಧಾಲಯ, ವೈದ್ಯಕೀಯ ಸೇವೆಗಳು, ಪೆಟ್ರೋಲ್ ಬಂಕ್, ಎಲ್ಪಿಜಿ ಕೇಂದ್ರಗಳ 24*7 ಕಾರ್ಯಚಟುವಟಿಕೆಗೆ ಅನುಮತಿ ಇದೆ.

ಹೋಟೆಲ್, ರೆಸ್ಟೋರೆಂಟ್‌ಗಳ ಸೇವೆ

ಹೋಟೆಲ್, ರೆಸ್ಟೋರೆಂಟ್‌ಗಳ ಸೇವೆ

* ಹೋಟೆಲ್/ ರೆಸ್ಟೋರೆಂಟ್‌ಗಳಿಂದ ಆಹಾರವನ್ನು ಪಾರ್ಸಲ್ ರೂಪದಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಡೆಯಬೇಕು.

* ಸ್ಟಾಂಡ್ ಅಲೋನ್, ಸಿಎಲ್-2, ಸಿಎಲ್-8, ಸಿಎಲ್-8ಎ, ಸಿಎಲ್-8ಬಿ, ಸಿಎಲ್-11ಸಿ, ಸಿಎಲ್-16, ಸಿಎಲ್-6ಎ, ಸಿಎಲ್-7, ಸಿಎಲ್-7ಎ, ಸಿಎಲ್-7ಬಿ, ಸಿಎಲ್-9, ಸಿಎಲ್-17, ಸಿಎಲ್-18, ವೈನ್ ಬೋಟಿಕ್ ಸನ್ನದುಗಳಲ್ಲಿ, ಬಾಟಲ್ಡ್ ಬಿಯರ್ ಮತ್ತು ವೈನ್ ಟವರಿನ್ ಸನ್ನದುಗಳಿಂದ ಪಾರ್ಸೆಲ್ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 1ರ ತನಕ ಮಾತ್ರ.

  ಎಚ್ಚರ!! ರಾಜ್ಯದ 3 ಲಕ್ಷಕ್ಕಿಂತ ಅಧಿಕ ಮಕ್ಕಳು ಕೊರೊನಾ ಮೂರನೇ ಅಲೆಯ ಟಾರ್ಗೆಟ್! | Oneindia Kannada
  ಕ್ವಾರಂಟೈನ್‌ನಲ್ಲಿರಬೇಕು

  ಕ್ವಾರಂಟೈನ್‌ನಲ್ಲಿರಬೇಕು

  * ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್ ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಬೇಕು.

  * ರಾಜ್ಯ ಸರ್ಕಾರದ ಮತ್ತು ಅದರ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳ ಅಧಿಕಾರಿ /ಸಿಬ್ಬಂದಿಗಳ ಕರ್ತವ್ಯದ ನಿಮಿತ್ತ ಹಾಗೂ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿ /ನೌಕರರ ಸಂಚಾರಕ್ಕೆ ಅವಕಾಶ ಇರುತ್ತದೆ. ಆದಾಗ್ಯೂ ಸಹ ಸದರಿಯವರು ಆಯಾ ಕಚೇರಿಯಿಂದ ನೀಡಲ್ಪಟ್ಟ ಅಧಿಕೃತ ಗುರುತಿನ ಚೀಟಿ ಹೊಂದಿರತಕ್ಕದ್ದು ಮತ್ತು ಪರಿಶೀಲನೆ ವೇಳೆ ಹಾಜರುಪಡಿಸತಕ್ಕದ್ದು.

  * ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದು /ತಿರುಗಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

  English summary
  Kodagu district administration extended lockdown till July 5, 2021. Here are the lockdown guidelines.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X